Advertisement
ಏಳುಪಟ್ಲ ಮೊಗವೀರ ಸಂಯುಕ್ತ ಸಭಾ (ಕದ್ರಿ) ವತಿಯಿಂದ ಸಾಮೂಹಿಕ ಸಮುದ್ರ ಪೂಜೆಯು ತಣ್ಣೀರುಬಾವಿ ಕಡಲ ಕಿನಾರೆಯಲ್ಲಿ ನೆರವೇರಿತು.
Related Articles
Advertisement
ವಡಭಾಂಡೇಶ್ವರದಲ್ಲಿಮಲ್ಪೆ ಮೀನುಗಾರರ ಸಂಘದ ನೇತೃತ್ವದಲ್ಲಿ ವಡಭಾಂಡ ಬಲರಾಮ ದೇವಸ್ಥಾನದ ಪ್ರಧಾನ ತಂತ್ರಿ ಬ್ರಹ್ಮಶ್ರೀ ಸುಬ್ರಹ್ಮಣ್ಯ ತಂತ್ರಿ ಮತ್ತು ದೇಗುಲದ ಆನುವಂಶಿಕ ಅರ್ಚಕ ಮತ್ತು ಮೊಕ್ತೇಸರ ಟಿ. ಶ್ರೀನಿವಾಸ್ ಭಟ್ ಪೌರೋಹಿತ್ಯದಲ್ಲಿ ಬೆಳಗ್ಗೆ ವಡಭಾಂಡ ಬಲರಾಮ ಹಾಗೂ ಬೊಬ್ಬರ್ಯ ದೇವರಿಗೆ ವಿಶೇಷ ಪೂಜೆ ಸಲ್ಲಿಸಲಾಯಿತು. ಬಳಿಕ ಮೀನುಗಾರರು ಶೋಭಾಯಾತ್ರೆಯಲ್ಲಿ ತೆರಳಿ ವಡ ಭಾಂಡೇಶ್ವರ ಸಮುದ್ರತೀರದಲ್ಲಿ ಪೂಜೆ ನಡೆಸಿ ಕ್ಷೀರ, ಫಲಪುಷ್ಪ, ಸೀಯಾಳವನ್ನು ಸಮುದ್ರ ರಾಜನಿಗೆ ಸಮರ್ಪಿಸಿದರು. ಶಾಸಕ ಯಶಪಾಲ್ ಸುವರ್ಣ ಮಾತನಾಡಿ, ಮೀನುಗಾರಿಕೆಯನ್ನು ಪ್ರಾರಂಭಿಸುವ ಮುನ್ನ ಈ ಹಿಂದೆ ನಡೆದುಕೊಂಡು ಬಂದ ಸಂಪ್ರದಾಯ ವನ್ನು ಮೀನುಗಾರರು ಮುಂದುವರಿಸಿ ಕೊಂಡು ಬಂದಿದ್ದಾರೆ. ಯಾವುದೇ ಅವಘಡ ಸಂಭವಿಸದೆ ಈ ಬಾರಿ ಸಮೃದ್ಧ ಮೀನುಗಾರಿಕೆ ಆಗು ವಂತೆ ಗಂಗಾಮಾತೆ ಅನುಗ್ರಹಿಸಲಿ ಎಂದು ಹಾರೈಸಿದರು. ಮೀನುಗಾರ ಸಂಘದ ಅಧ್ಯಕ್ಷರು ದಯಾನಂದ ಸುವರ್ಣ, ಮಾಜಿ ಸಚಿವ ಪ್ರಮೋದ್ ಮಧ್ವರಾಜ್, ದ.ಕ. ಮೊಗವೀರ ಮಹಾಜನ ಸಂಘದ ಅಧ್ಯಕ್ಷ ಜಯ ಸಿ. ಕೋಟ್ಯಾನ್, ಹರಿಯಪ್ಪ ಕೋಟ್ಯಾನ್, ಮೀನುಗಾರ ಸಂಘದ ಕಾರ್ಯದರ್ಶಿ ಜಗನ್ನಾಥ ಕಡೆಕಾರು, ಕೋಶಾಧಿಕಾರಿ ಪ್ರಕಾಶ್ ಬಂಗೇರ, ಸಂಘದ ಮಾಜಿ ಅಧ್ಯಕ್ಷರಾದ ಕೃಷ್ಣ ಎಸ್. ಸುವರ್ಣ, ಹಿರಿಯಣ್ಣ ಟಿ. ಕಿದಿಯೂರು, ಸತೀಶ್ ಕುಂದರ್, ಶಿವಪ್ಪ ಟಿ. ಕಾಂಚನ್, ಕೇಶವ ಎಂ. ಕೋಟ್ಯಾನ್ ಸಹಿತ ಪ್ರಮುಖ ಮುಖಂಡರು ಉಪಸ್ಥಿತರಿದ್ದರು.