Advertisement

ಮಾರ್ಚ್‌ನಲ್ಲಿ ಮಂಗಳೂರು ವಿಶ್ವವಿದ್ಯಾನಿಲಯ 42ನೇ ಘಟಿಕೋತ್ಸವ

12:43 AM Jan 25, 2024 | Team Udayavani |

ಮಂಗಳೂರು: ಮಂಗಳೂರು ವಿಶ್ವವಿದ್ಯಾನಿಲಯದ 42ನೇ ವಾರ್ಷಿಕ ಘಟಿಕೋತ್ಸವವನ್ನು ಮಾರ್ಚ್‌ನ‌ಲ್ಲಿ ನಡೆಸಲು ನಿರ್ಧರಿಸಲಾಗಿದ್ದು, ಅಧಿಕೃತ ದಿನಾಂಕವನ್ನು ವಿ.ವಿ.ಯ ವೆಬ್‌ಸೈಟ್‌ನಲ್ಲಿ ಮುಂದಿನ ದಿನಗಳಲ್ಲಿ ಪ್ರಕಟಿಸಲಾಗುವುದು ಎಂದು ಕುಲಸಚಿವರು ತಿಳಿಸಿದ್ದಾರೆ.

Advertisement

ಮಂಗಳೂರು ವಿ.ವಿ.ಯ ಎಲ್ಲ ಸಂಯೋಜಿತ, ಘಟಕ ಮತ್ತು ಸ್ವಾಯತ್ತ ಕಾಲೇಜುಗಳಲ್ಲಿ 2023-24ನೇ ಶೈಕ್ಷಣಿಕ ಸಾಲಿನಲ್ಲಿ ವ್ಯಾಸಂಗ ಪೂರ್ಣಗೊಳಿಸಿ, 2023ರ ಡಿಸೆಂಬರ್‌ ಅಂತ್ಯದೊಳಗೆ ವಿವಿಧ ಪದವಿ ಪಡೆಯಲು ಅರ್ಹರಾಗಿರುವ ಅಭ್ಯರ್ಥಿಗಳಿಗೆ ಪದವಿ ಪ್ರದಾನ ಮಾಡಲಾಗುವುದು. ಘಟಿಕೋತ್ಸವ ಸಂದರ್ಭ ಡಾಕ್ಟರೆಟ್‌ ಪದವಿ ಪಡೆಯಲು ಅರ್ಹರಾದ ಅಭ್ಯರ್ಥಿಗಳು, ರ್‍ಯಾಂಕ್‌, ಚಿನ್ನ, ಪದಕ ಹಾಗೂ ನಗದು ಬಹುಮಾನ ಪಡೆಯುವ ಸ್ನಾತಕೋತ್ತರ ಮತ್ತು ಪದವಿ ಮಟ್ಟದ ಅಭ್ಯರ್ಥಿಗಳು ಗಣ್ಯರಿಂದ ಪದವಿ ಸ್ವೀಕರಿಸಲಿದ್ದಾರೆ.

ಬಿಪಿಎಡ್‌ ಮತ್ತು ಬಿಎಡ್‌ ಪದವೀಧರರನ್ನು ಸ್ನಾತಕೋತ್ತರ ವಿದ್ಯಾರ್ಥಿಗಳೆಂದು ಪರಿಗಣಿಸಲಾಗುವುದಿಲ್ಲ. ಈ ವಿಷಯದಲ್ಲಿ ಪದಕ, ಬಹುಮಾನ ಪಡೆಯಲು ಅರ್ಹರಾದ ಮತ್ತು ಪ್ರಥಮ ದರ್ಜೆಯಲ್ಲಿ ತೇರ್ಗಡೆ ಹೊಂದಿದ ಅಭ್ಯರ್ಥಿಗಳು ಮಾತ್ರ ಘಟಿಕೋತ್ಸವಕ್ಕೆ ಪ್ರವೇಶ ಪಡೆಯಲು ಅರ್ಹರಾಗಿರುತ್ತಾರೆ.

ಅರ್ಹ ಅಭ್ಯರ್ಥಿಗಳು ಪದವಿಯನ್ನು ಘಟಿಕೋತ್ಸವದಲ್ಲಿ “ಹಾಜರಿ’ ಅಥವಾ “ಗೈರುಹಾಜರಿ’ಯಲ್ಲಿ ಪಡೆದುಕೊಳ್ಳಬಹುದು. ಕೊನೆಯ ದಿನಾಂಕದ ಬಗ್ಗೆ //www.mangaloreuniversity.ac.in ವೆಬ್‌ಸೈಟ್‌ನಲ್ಲಿ ಪ್ರಕಟಿಸಲಾಗುವುದು.

Advertisement

Udayavani is now on Telegram. Click here to join our channel and stay updated with the latest news.

Next