Advertisement

ಮಂಗಳೂರು ವಿಶ್ವವಿದ್ಯಾನಿಲಯ: 6ನೇ ಸೆಮಿಸ್ಟರ್‌ ಫಲಿತಾಂಶ ಪ್ರಕಟ

12:44 AM Nov 02, 2022 | Team Udayavani |

ಮಂಗಳೂರು: ಮಂಗಳೂರು ವಿಶ್ವವಿದ್ಯಾನಿಲಯದ ಪದವಿ ಅಂತಿಮ ವರ್ಷದ ವಿದ್ಯಾರ್ಥಿಗಳ 6ನೇ ಸೆಮಿಸ್ಟರ್‌ ಫಲಿತಾಂಶವನ್ನು ಮಂಗಳವಾರ ಸಾಯಂಕಾಲ ಘೋಷಿಸಲಾಗಿದೆ.

Advertisement

https://mangaloreuniversity.ac.in/results ವೆಬ್‌ಸೈಟ್‌ಗೆ ಭೇಟಿ ನೀಡಿ ಫಲಿತಾಂಶವನ್ನು ಪರಿಶೀಲಿಸಬಹುದಾಗಿದೆ.

ಎಲ್ಲ ವಿಭಾಗಗಳ ಫಲಿತಾಂಶ ಪ್ರಕಟಗೊಂಡಿದ್ದು, ಬಿಎಸ್ಸಿ ಆ್ಯನಿಮೇಶನ್‌ ವಿಭಾಗದ ಫಲಿತಾಂಶವನ್ನು ಮಾತ್ರ ಸದ್ಯಕ್ಕೆ ತಡೆಹಿಡಿಯಲಾಗಿದೆ ಎಂದು ತಿಳಿದು ಬಂದಿದೆ.

ಸ್ನಾತಕೋತ್ತರ ಪದವಿ ಕೋರ್ಸ್‌ಗಳಿಗೆ ವಿದ್ಯಾರ್ಥಿಗಳ ಪ್ರವೇಶಕ್ಕೆ ಈ ಮೊದಲು ನ. 3 ಕೊನೇ ದಿನವಾಗಿತ್ತು ವಿದ್ಯಾರ್ಥಿಗಳ ಪ್ರವೇಶಾತಿಗೆ ಸಮಸ್ಯೆ ಯಾಗಬಾರದು ಎಂಬ ಕಾರಣಕ್ಕೆ ವಿಸ್ತರಿಸಲಾಗಿದೆ ಎಂದು ಕುಲಪತಿ ಪ್ರೊ| ಪಿ.ಎಸ್‌. ಯಡಪಡಿತ್ತಾಯ ತಿಳಿಸಿದ್ದಾರೆ.

Advertisement

Udayavani is now on Telegram. Click here to join our channel and stay updated with the latest news.

Next