Advertisement
ಸುಪ್ರಿಂಕೋರ್ಟ್ ನ್ಯಾಯಾಧೀಶ ನ್ಯಾ| ಎಸ್. ಅಬ್ದುಲ್ ನಝೀರ್ ಮುಖ್ಯ ಅತಿಥಿಯಾಗಿ ಫಟಿಕೋತ್ಸವ ಭಾಷಣ ಮಾಡಲಿದ್ದು, ರಾಜ್ಯಪಾಲ ಥಾವರ್‌ಚಂದ್ ಗೆಹ್ಲೋಟ್ ಅವರು ಘಟಿಕೋತ್ಸವದ ಅಧ್ಯಕ್ಷತೆ ವಹಿಸಿ ಪದವಿ ಪ್ರದಾನ ಮಾಡಲಿದ್ದಾರೆ. ಉನ್ನತ ಶಿಕ್ಷಣ ಸಚಿವ ಡಾ| ಅಶ್ವತ್ಥನಾರಾಯಣ ಉಪಸ್ಥಿತಿಯಲ್ಲಿ ಘಟಿಕೋತ್ಸವ ನಡೆಯಲಿದೆ. ಮಂಗಳೂರು ವಿ.ವಿ.ಯ ಘಟಿಕೋತ್ಸವದಲ್ಲಿ ಇದೇ ಮೊದಲ ಬಾರಿಗೆ ಅಧ್ಯಕ್ಷೀಯ ಭಾಷಣ ಇರಲಿದೆ ಎಂದು ಮಂಗಳೂರಿನಲ್ಲಿ ಗುರುವಾರ ಪತ್ರಿಕಾಗೋಷ್ಠಿಯಲ್ಲಿ ಅವರು ತಿಳಿಸಿದರು.
Related Articles
Advertisement
ಈ ಬಾರಿ 69 ಮಂದಿಗೆ ಪ್ರಥಮ ರ್‍ಯಾಂಕ್ ಇದ್ದು, ಇದರಲ್ಲಿ ಸ್ನಾತಕೋತ್ತರ ಪದವಿ- 50 ಮತ್ತು ಪದವಿ- 19 ವಿದ್ಯಾರ್ಥಿಗಳಿದ್ದಾರೆ. ಈ ಪೈಕಿ ಕಲೆ-19, ವಿಜ್ಞಾನ ಮತ್ತು ತಂತ್ರಜ್ಞಾನ-38, ವಾಣಿಜ್ಯ-08, ಶಿಕ್ಷಣ-4 ವಿದ್ಯಾರ್ಥಿಗಳಿಗೆ ಪ್ರಥಮ ರ್‍ಯಾಂಕ್ ನೀಡಲಾಗುವುದು ಎಂದರು.
ಮಂಗಳೂರು ವಿ.ವಿ.ಯು 2020-21ನೇ ಸಾಲಿನಲ್ಲಿ ನಡೆಸಿದ ವಿವಿಧ ಪರೀಕ್ಷೆಗಳಿಗೆ ಒಟ್ಟು 37,241 ವಿದ್ಯಾರ್ಥಿಗಳು ಹಾಜರಾಗಿದ್ದು, 27,134 (ಶೇ. 72.86) ವಿದ್ಯಾರ್ಥಿಗಳು ತೇರ್ಗಡೆ ಯಾಗಿದ್ದಾರೆ. ಅದರಲ್ಲಿ ಸ್ನಾತಕೋತ್ತರ ಪದವಿ ಪರೀಕ್ಷೆಗೆ 6,404 ವಿದ್ಯಾರ್ಥಿಗಳು ಹಾಜರಾ ಗಿದ್ದು, 5,826 (ಶೇ. 90.97) ವಿದ್ಯಾರ್ಥಿಗಳು ಉತ್ತೀರ್ಣರಾಗಿದ್ದಾರೆ. ಪದವಿ ಪರೀಕ್ಷೆಗೆ 30,654 ವಿದ್ಯಾರ್ಥಿಗಳು ಹಾಜರಾಗಿದ್ದು, 21,134 (ಶೇ. 68.94) ವಿದ್ಯಾರ್ಥಿಗಳು ಉತ್ತೀರ್ಣರಾಗಿ ದ್ದಾರೆ. ಸ್ನಾತಕೋತ್ತರ ಡಿಪ್ಲೊಮಾ ಪರೀಕ್ಷೆಗೆ ಹಾಜರಾದ 30 ವಿದ್ಯಾರ್ಥಿಗಳಲ್ಲಿ 21 (ಶೇ.70) ವಿದ್ಯಾರ್ಥಿ ಗಳು ತೇರ್ಗಡೆಯಾಗಿದ್ದಾರೆ ಎಂದು ಪರೀಕ್ಷಾಂಗ ಕುಲಸಚಿವ ಪ್ರೊ|ಪಿ.ಎಲ್. ಧರ್ಮ ತಿಳಿಸಿದರು.
ಅಂಧ ವಿದ್ಯಾರ್ಥಿಗೆ ಚಿನ್ನದ ಪದಕ :
ರಾಜ್ಯಶಾಸ್ತ್ರ ವಿಭಾಗದ ಅಂಧ ವಿದ್ಯಾರ್ಥಿ ಅನ್ವಿತ್ ಶೈಕ್ಷಣಿಕವಾಗಿ ಉತ್ತಮ ಸಾಧನೆ ಮಾಡಿ ಚಿನ್ನದ ಪದಕಕ್ಕೆ ಆಯ್ಕೆಯಾಗಿದ್ದಾರೆ ಎಂದು ಪ್ರೊ| ಯಡಪಡಿತ್ತಾಯ ಹೇಳಿದರು.
ಡಿಎಸ್‌ಸಿ, ಪಿಎಚ್‌ಡಿ ಮತ್ತು ಚಿನ್ನದ ಪದಕ, ನಗದು ಬಹುಮಾನ ಹಾಗೂ ಪ್ರಥಮ ರ್‍ಯಾಂಕ್ ಪಡೆಯುವ ವಿದ್ಯಾರ್ಥಿಗಳು ಘಟಿಕೋತ್ಸವದಲ್ಲಿ ಹಾಜರಾಗಿ ಪದವಿ ಸ್ವೀಕರಿಸಲಿದ್ದಾರೆ. ಪದವಿ ಪ್ರಮಾಣ ಪತ್ರಕ್ಕೆ ಅರ್ಜಿ ಸಲ್ಲಿಸಿದ ಉಳಿದ ಎಲ್ಲ ವಿದ್ಯಾರ್ಥಿಗಳಿಗೆ ಅಂಚೆ ಮೂಲಕ ಪದವಿ ಪ್ರಮಾಣ ಪತ್ರಗಳನ್ನು ಕಳುಹಿಸಿಕೊಡಲಾಗುವುದು ಎಂದರು.
ಮಂಗಳೂರು ವಿ.ವಿ. ಕಾಲೇಜಿನ ಪ್ರಾಂಶುಪಾಲೆ ಡಾ| ಅನಸೂಯಾ ರೈ ಉಪಸ್ಥಿತರಿದ್ದರು.
ಗೌರವ ಡಾಕ್ಟರೇಟ್ ಭಾಜನರು :
ಹೇಮಾವತಿ ವೀ. ಹೆಗ್ಗಡೆ:
ಶ್ರೀ ಕ್ಷೇತ್ರ ಧರ್ಮಸ್ಥಳದ ಧರ್ಮಾಧಿಕಾರಿ ಡಾ|ಡಿ. ವೀರೇಂದ್ರ ಹೆಗ್ಗಡೆ ಅವರ ಪತ್ನಿ ಹೇಮಾವತಿ ವೀ. ಹೆಗ್ಗಡೆ ಅವರು ಶ್ರೀಕ್ಷೇತ್ರ ಧರ್ಮಸ್ಥಳ ಗ್ರಾಮೀಣಾಭಿವೃದ್ಧಿ ಯೋಜನೆಯ ಟ್ರಸ್ಟಿಯಾಗಿ, ಎಸ್‌ಕೆಡಿಆರ್‌ಡಿಪಿಯ ಜನವಿಕಾಸ ಕಾರ್ಯಕ್ರಮದ ಅಧ್ಯಕ್ಷರಾಗಿ ಸೇವೆ ಸಲ್ಲಿಸುತ್ತಿದ್ದಾರೆ. ಜತೆಗೆ ಅನೇಕ ಸಮಾಜಸೇವಾ ಕಾರ್ಯಗಳಲ್ಲಿ ತೊಡಗಿಸಿಕೊಂಡಿದ್ದಾರೆ.
ಹರಿಕೃಷ್ಣ ಪುನರೂರು :
ಹರಿಕೃಷ್ಣ ಪುನರೂರು ಅವರು ಕನ್ನಡ ಸಾಹಿತ್ಯ ಪರಿಷತ್ ಅಧ್ಯಕ್ಷರಾಗಿದ್ದವರು. ಧಾರ್ಮಿಕ, ಸಾಮಾಜಿಕವಾಗಿ ಸಕ್ರಿಯವಾಗಿ ತೊಡಗಿಕೊಂಡಿರುವ ಅವರು ಸಮಾಜಸೇವೆಯಲ್ಲಿ ತೊಡಗಿಕೊಂಡಿದ್ದಾರೆ.
ದೇವದಾಸ್ ಕಾಪಿಕಾಡ್ :
ತುಳು ನಾಟಕಗಳ ಮೂಲಕ ಮುನ್ನೆಲೆಗೆ ಬಂದ ದೇವದಾಸ್ ಕಾಪಿಕಾಡ್ ಅವರು ತುಳು ರಂಗಭೂಮಿ ಹಾಗೂ ತುಳು ಚಿತ್ರರಂಗಕ್ಕೆ ಅವಿಸ್ಮರಣೀಯ ಸೇವೆ ಸಲ್ಲಿಸಿ ಮನೆ ಮಾತಾಗಿದ್ದಾರೆ.