ಇತರ ವಿಶ್ವವಿದ್ಯಾಲಯಗಳಿಗೂ ಇದು ಮಾದರಿಯಾಗಿದೆ ಎಂದು ಮಂಗಳೂರು ವಿಶ್ವವಿದ್ಯಾಲಯದ ಕುಲಪತಿ ಪ್ರೊ| ಕೆ. ಭೈರಪ್ಪ ಹೇಳಿದರು.
Advertisement
ರಥಬೀದಿ ಡಾ| ಪಿ. ದಯಾನಂದ ಪೈ-ಪಿ. ಸತೀಶ್ ಪೈ ಸರಕಾರಿ ಪ್ರಥಮ ದರ್ಜೆ ಕಾಲೇಜು ಹಾಗೂ ಮಂಗಳೂರು ವಿವಿಯ ಆಶ್ರಯದಲ್ಲಿ ಮಂಗಳಾ ಕ್ರೀಡಾಂಗಣದಲ್ಲಿ ನಡೆಯುತ್ತಿರುವ 37ನೇ ಮಂಗಳೂರು ವಿವಿ ಅಂತರ್ ಕಾಲೇಜು ಹಾಗೂ ಭಿನ್ನ ಸಾಮರ್ಥ್ಯದ ಮಕ್ಕಳ ಕ್ರೀಡಾಕೂಟವನ್ನು ಅವರು ಗುರುವಾರ ಉದ್ಘಾಟಿಸಿದರು. ವಿಶ್ವವಿದ್ಯಾನಿಲಯದ ಕ್ರೀಡಾಪಟುಗಳಿಗೆ ಉತ್ತಮ ತರಬೇತಿ, ಕ್ರೀಡಾ ಸೌಲಭ್ಯ ನೀಡಲಾಗುತ್ತಿದೆ ಎಂದರು.
ಮಂಗಳೂರು ವಿವಿ ವ್ಯಾಪ್ತಿಯ ಕಾಲೇಜುಗಳಲ್ಲಿ ಉತ್ತಮ ದೈಹಿಕ ಶಿಕ್ಷಣ ಶಿಕ್ಷಕರಿದ್ದು, ವಿದ್ಯಾರ್ಥಿಗಳಿಗೆ ಸೂಕ್ತ ಮಾರ್ಗದರ್ಶನ ನೀಡುತ್ತಿದ್ದಾರೆ. ಇದರಿಂದ ವಿದ್ಯಾರ್ಥಿಗಳು ರಾಷ್ಟ್ರ ಮಟ್ಟದಲ್ಲಿ ಸಾಧನೆ ಮಾಡಲು ಸಾಧ್ಯವಾಗಿದೆ ಎಂದರು. ರಥಬೀದಿ ಕಾಲೇಜು ಪ್ರಾಂಶುಪಾಲ ಪ್ರೊ| ರಾಜಶೇಖರ್ ಹೆಬ್ಟಾರ್ ಸಿ., ದೈಹಿಕ ಶಿಕ್ಷಣ ಶಿಕ್ಷಕರ ಸಂಘದ ಅಧ್ಯಕ್ಷ ವೇಣುಗೋಪಾಲ್, ಯುವಜನ ಮತ್ತು ಕ್ರೀಡಾ ಇಲಾಖೆ ಉಪನಿರ್ದೇಶಕ ಪ್ರದೀಪ್ ಡಿ’ಸೋಜಾ, ನಿವೃತ್ತ ದೈಹಿಕ ಶಿಕ್ಷಣ ಶಿಕ್ಷಕ ಜಗನ್ನಾಥ್ ರೈ, ಉದ್ಯಮಿ ಹನೀಫ್ ಕೆ.ಎಂ., ಕ್ರೀಡಾ ಸಂಘಟನ ಕಾರ್ಯದರ್ಶಿ ಮಹಮ್ಮದ್ ರಫಿಕ್ ಕೆ., ಕಾವೂರು ಕಾಲೇಜು ಹಿರಿಯ ದೈಹಿಕ ಶಿಕ್ಷಣ ನಿರ್ದೇಶಕ ಡಾ| ಜಾನ್ ಪಿಂಟೋ, ಕಾಲೇಜಿನ ರಕ್ಷಕ -ಶಿಕ್ಷಕ ಸಂಘದ ಅಧ್ಯಕ್ಷ ಜೆ. ಪಾಂಡುರಂಗ ನಾಯಕ್, ರಮೇಶ್ ಉಪಸ್ಥಿತರಿದ್ದರು.
Related Articles
ಉದ್ಘಾಟನೆಗೆ ಪೂರ್ವಭಾವಿಯಾಗಿ ಕ್ರೀಡಾಪಟುಗಳಿಂದ ಆಕರ್ಷಕ ಪಥ ಸಂಚಲನ ನಡೆಯಿತು. ಉಡುಪಿ
ಮತ್ತು ದಕ್ಷಿಣ ಕನ್ನಡ ಜಿಲ್ಲೆಯಿಂದ 62 ಕಾಲೇಜುಗಳ 800 ಮಂದಿ ಕ್ರೀಡಾಪಟುಗಳು ಪಾಲ್ಗೊಂಡಿದ್ದರು. 200ಕ್ಕೂ ಅಧಿಕ ಭಿನ್ನ ಸಾಮರ್ಥ್ಯದ ಮಕ್ಕಳು ಪಾಲ್ಗೊಂಡಿದ್ದರು. ಶುಕ್ರವಾರ ಸಂಜೆ 4ಕ್ಕೆ ಕ್ರೀಡಾಕೂಟದ ಸಮಾರೋಪ ನಡೆಯಲಿದೆ.
Advertisement