Advertisement
ಕಾಂಗ್ರೆಸ್- ಜೆಡಿಎಸ್ ಸರಕಾರ ರಚನೆಯಾಗುವ ಬಗ್ಗೆ ಮೇ 19ರಂದು ಸಂಜೆ 5.30ಕ್ಕೆ ಮಲ್ಲಿಕಟ್ಟೆ ಯಲ್ಲಿರುವ ಕಾಂಗ್ರೆಸ್ ಕಚೇರಿಯ ಮುಂಭಾಗದಲ್ಲಿ ಸಂಭ್ರಮಾಚರಣೆ ನಡೆಯುತ್ತಿದ್ದಾಗ ಕಾರ್ಯಕರ್ತರು ಕಾಂಗ್ರೆಸ್ ಪಕ್ಷಕ್ಕೆ ಜೈಕಾರ ಹಾಕಿದ ವೀಡಿಯೋ ತುಣುಕುಗಳನ್ನು ವ್ಯಕ್ತಿಯೊಬ್ಬರು ತಿರುಚಿ “ಕಾಂಗ್ರೆಸ್ ಪಾರ್ಟಿ ಕಿ ಜೈ’ ಎಂದು ಹೇಳುವ ಸ್ಥಳದಲ್ಲಿ “ಪಾಕಿಸ್ಥಾನಕ್ಕೆ ಜೈ’ ಎಂಬುದಾಗಿ ಸುಳ್ಳಾಗಿ ತಿರುಚಿ ಅದನ್ನು ಫೇಸ್‌ಬುಕ್‌ನಲ್ಲಿ ಪೋಸ್ಟ್ ಮಾಡಿ ಅಪಪ್ರಚಾರ ಮಾಡಿದ್ದಾರೆ. ಬಳಿಕ ವೆಬ್‌ಸೈಟ್ ಒಂದರಲ್ಲಿ ಈ ತಿರುಚಿದ ವೀಡಿಯೋವನ್ನು ಅಪ್‌ಲೋಡ್ ಮಾಡಿ ಕೋಮು ಭಾವನೆ ಕೆರಳುವಂತೆ ಬರಹಗಳನ್ನು ಬರೆಯಲಾಗಿದೆ.
Related Articles
Advertisement
ಕೂಲಂಕಷ ತನಿಖೆಗೆ ಮನವಿಮಂಗಳೂರು: ಮಲ್ಲಿಕಟ್ಟೆ ಬಳಿಯ ಕಾಂಗ್ರೆಸ್ ಜಿಲ್ಲಾ ಕಚೇರಿ ಎದುರು ವಿಜಯೋತ್ಸವ ನಡೆಸುವ ಸಂದರ್ಭದಲ್ಲಿ ಪಾಕಿಸ್ಥಾನ ಪರ ಘೋಷಣೆ ಕೂಗಿದ್ದಾರೆ ಎಂದು ಆರೋಪಿಸ ಲಾಗಿರುವ ವೀಡಿಯೋ ತುಣುಕನ್ನು ಕೂಲಂಕಷ ವಾಗಿ ಪರಿಶೀಲಿಸಿ ತಪ್ಪಿತಸ್ಥರಿಗೆ ಶಿಕ್ಷೆಯಾಗಬೇಕೆಂದು ನಿಯೋಗವೊಂದು ಸೋಮವಾರ ಮಂಗಳೂರು ಪೊಲೀಸ್ ಆಯುಕ್ತರನ್ನು ಭೇಟಿ ಯಾಗಿ ಮನವಿ ಸಲ್ಲಿಸಿದೆ. ಮೇ 19ರಂದು ಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಿದಾಗ, ಕಾಂಗ್ರೆಸ್ ಕಾರ್ಯಕರ್ತರು ಜಿಲ್ಲಾ ಕಾಂಗ್ರೆಸ್ ಕಚೇರಿಯಲ್ಲಿ ಸಂಭ್ರಮಾಚರಣೆ ನಡೆಸಿದ್ದರು. ಆದರೆ ಈ ಸಂದರ್ಭದಲ್ಲಿ ಪಾಕಿಸ್ಥಾನ ಪರ ಘೋಷಣೆ ಕೂಗಲಾಗಿದೆ ಎನ್ನಲಾದ ವೀಡಿಯೋ ತುಣುಕೊಂದು ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿತ್ತು. ಇದೊಂದು ನಕಲಿ ವೀಡಿಯೋ ಎಂದು ಆರೋಪಿಸಿ, ತಪ್ಪಿತಸ್ಥರ ವಿರುದ್ಧ ಕಠಿನ ಕ್ರಮಕ್ಕಾಗಿ ಆಗ್ರಹಿಸಿ ಮಾಜಿ ಶಾಸಕ ಜೆ.ಆರ್. ಲೋಬೋ ನೇತೃತ್ವದಲ್ಲಿ ಪೊಲೀಸ್ ಆಯುಕ್ತರಿಗೆ ಸೋಮವಾರ ಬೆಳಗ್ಗೆ ಮನವಿ ಸಲ್ಲಿಸಿದ ಬೆನ್ನಲ್ಲೇ, ಮತ್ತೂಂದು ಗುಂಪು ಈ ವೀಡಿಯೋದ ಸತ್ಯಾಸತ್ಯತೆಯ ಬಗ್ಗೆ ಅರಿತುಕೊಳ್ಳಲು ಕೂಲಂಕಷವಾಗಿ ಪರಿಶೀಲಿಸಬೇಕು ಹಾಗೂ ಪಾಕ್ ಪರ ಘೋಷಣೆ ಕೂಗಿದವರ ವಿರುದ್ಧ ಕಾನೂನು ಕ್ರಮ ಕೈಗೊಳ್ಳಬೇಕೆಂದು ಆಗ್ರಹಿಸಿದೆ.