Advertisement

ಮಂಗಳೂರು ಹಿಂಸಾಚಾರ; ರಾಜ್ಯ ಸರ್ಕಾರ ಪರಿಹಾರ ಏಕೆ ಘೋಷಿಸಿತು? ಎಚ್ ಡಿಕೆ ಟ್ವೀಟ್

10:02 AM Dec 25, 2019 | Team Udayavani |

ಬೆಂಗಳೂರು: ಪೌರತ್ವ ತಿದ್ದುಪಡಿ ಕಾಯ್ದೆ ವಿರೋಧಿಸಿ ಮಂಗಳೂರಿನಲ್ಲಿ ನಡೆದ ಪ್ರತಿಭಟನೆ, ಹಿಂಸಾಚಾರ ಪ್ರಕರಣಕ್ಕೆ ಸಂಬಂಧಿಸಿದಂತೆ ಮಂಗಳವಾರ ಪೊಲೀಸ್ ಇಲಾಖೆ ಸಿಸಿಟಿವಿ ದೃಶ್ಯಾವಳಿಯನ್ನು ಬಿಡುಗಡೆಗೊಳಿಸಿದ್ದು, ಏತನ್ಮಧ್ಯೆ ಈ ಬಗ್ಗೆ ಮಾಜಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಸರಣಿ ಟ್ವೀಟ್ ಮೂಲಕ ಸರ್ಕಾರವನ್ನು ತರಾಟೆಗೆ ತೆಗೆದುಕೊಂಡಿದ್ದಾರೆ.

Advertisement

ಮಂಗಳೂರನ್ನು ಕೋಮು ಪ್ರಯೋಗಶಾಲೆ ಮಾಡಿಕೊಂಡಿರುವ ಬಿಜೆಪಿ ಇಬ್ಬರು ಅಮಾಯಕರನ್ನು ಬಲಿ ತೆಗೆದುಕೊಂಡಿದ್ದು ಹೇಗೆ? ಮತ್ತು ಏಕೆ? ದಾಂಧಲೆಕೋರರಿಗೆ ಗುಂಡಿಕ್ಕಿದ್ದೇವೆ ಎನ್ನುವ ರಾಜ್ಯ ಸರ್ಕಾರ ಅವರಿಗೆ ಪರಿಹಾರ ಏಕೆ ಘೋಷಿಸಿತು? ಎಂದು ಎಚ್ ಡಿಕೆ ಟ್ವೀಟ್ ನಲ್ಲಿ ಪ್ರಶ್ನಿಸಿದ್ದಾರೆ.

ಮಂಗಳೂರಿನ ಪ್ರತಿಭಟನೆ ವೇಳೆ ಸೈಜುಗಲ್ಲುಗಳನ್ನು ತಂದ ವಿಡಿಯೋಗಳನ್ನು ಇಷ್ಟೊಂದು ತಡವಾಗಿ ಬಿಡುಗಡೆಗೊಳಿಸುತ್ತಿರುವ ಸರ್ಕಾರ ಅದಕ್ಕೆ ಸಂಬಂಧಿಸಿದಂತೆ ಯಾರನ್ನು ಬಂಧಿಸಿದೆ? ಎಷ್ಟು ವಾಹನಗಳನ್ನು ವಶಕ್ಕೆ ತೆಗೆದುಕೊಂಡಿದೆ? ಕಲ್ಲು ತೂರಾಟಕ್ಕೆ ತಂದ ವಾಹನಗಳ ವಿಡಿಯೋ ಮಂಗಳೂರಿನ ಗಲಭೆಯದೋ? ಅಥವಾ ಬೇರೆಡೆಯದೋ? ಎಂದು ಕುಮಾರಸ್ವಾಮಿ ಟ್ವೀಟ್ ನಲ್ಲಿ ಕೇಳಿದ್ದಾರೆ.

ಹಿಂಸಾತ್ಮಕ ಪ್ರತಿಭಟನೆಗೆ ನನ್ನ ಬೆಂಬಲ ಖಂಡಿತಾ ಇಲ್ಲ. ಆದರೆ ವಿರೋಧ ಪಕ್ಷದ ಸದಸ್ಯನಾಗಿ ರಾಜ್ಯದ ಕಾನೂನು ಸುವ್ಯವಸ್ಥೆಗೆ ಭಂಗ ತರುವ ನಿಟ್ಟಿನಲ್ಲಿ ಸರ್ಕಾರ ಪೊಲೀಸರೇ ಪಿತೂರಿ ನಡೆಸಿದರೆ ಸುಮ್ಮನೆ ಕೂರಲಾಗುವುದಿಲ್ಲ. ಇದಕ್ಕೆ ಸಂಬಂಧಿಸಿದವರು ಉತ್ತರ ಕೊಡುವರೇ?

Advertisement

ಬಿಜೆಪಿ ಅಂಗ ಪಕ್ಷಗಳೇ ಸಿಎಎ ವಿರೋಧಿಸುತ್ತಿದ್ದಾರೆ. ಸಿಎಎ ಮತ್ತು ಎನ್ ಆರ್ ಸಿ ಬಗ್ಗೆ ಮೋದಿ ಮತ್ತು ಅಮಿತ್ ಶಾ ಹೇಳಿಕೆಗಳು ವಿಭಿನ್ನವಾಗಿವೆ. ಕಲ್ಲು ಹೊಡೆದರೂ ತಪ್ಪು, ಗುಂಡು ಹೊಡೆದರೂ ತಪ್ಪು ಎಂದು ಕುಮಾರಸ್ವಾಮಿ ಟ್ವೀಟ್ ನಲ್ಲಿ ಅಭಿಪ್ರಾಯವ್ಯಕ್ತಪಡಿಸಿದ್ದಾರೆ.

Advertisement

Udayavani is now on Telegram. Click here to join our channel and stay updated with the latest news.

Next