Advertisement
ಈ ತುಕಡಿಯಲ್ಲಿ ನೌಕಾಪಡೆಯ 144 ಯುವ ಯೋಧರು ಮತ್ತು “ನಾರಿಶಕ್ತಿ’ ಸ್ತಬ್ಧಚಿತ್ರ ಇರಲಿದೆ. ಇದರಲ್ಲಿ ಮೂವರು ಮಹಿಳಾ ಅಧಿಕಾರಿಗಳು ಮತ್ತು ಐವರು ಪುರುಷ ಅಗ್ನಿವೀರರು ಭಾಗಿಯಾ ಗುವರು. ಅಮೃತಾ ಅವರ ಜತೆಗೆ ಸಬ್ ಲೆ| ವಲ್ಲಿ ಮೀನಾ ಎಸ್. ಸಹ ಇರುವರು.
Related Articles
ಪರೇಡ್ ನಲ್ಲಿ ನೌಕಾಪಡೆಯ ಯುವ ನಾರಿ ಶಕ್ತಿ ಸ್ತಬ್ಧ ಚಿತ್ರ ಪ್ರದರ್ಶನ ಮಾಡಲಿದೆ. ಡಾರ್ನಿ ಯರ್ ಯುದ್ಧ ವಿಮಾನದ ಪ್ರತಿಕೃತಿಯೂ ಇರಲಿದ್ದು, ಮಹಿಳೆಯರ ಸಾಧನೆಯನ್ನು ಪ್ರದರ್ಶಿಸಲಾಗುವುದು. ಜತೆಗೆ 80 ಮಂದಿ ಸಂಗೀತಗಾರರು ಆ್ಯಂಥೋಣಿ ರಾಜ್ ನೇತೃತ್ವದಲ್ಲಿ, ನೌಕಾಪಡೆಯ ಗೀತೆ ಜೈ ಭಾರತಿಯನ್ನು ನುಡಿಸುವರು.
Advertisement
ದಿಶಾ ಅಮೃತ್ ಕರಾವಳಿಯ ಕುವರಿದಿಶಾ ಅವರು ಮಂಗಳೂರಿನ ಬೋಳೂರು ಸಮೀಪದ ತಿಲಕ್ ನಗರದ ಅಮೃತ್ ಕುಮಾರ್ ಮತ್ತು ಲೀಲಾ ಅಮೃತ್ ದಂಪತಿಯ ಪುತ್ರಿ. ಅವರಿಗೆ ನೌಕಾ ಪಡೆಯ ಅಧಿಕಾರಿಯಾಗಬೇಕು ಎಂಬ ಆಸೆ ಬಾಲ್ಯದಲ್ಲೇ ಇತ್ತು. ದಿಶಾ ಅವರು ಪ್ರಾಥಮಿಕ ಶಿಕ್ಷಣದಿಂದ ಪಿಯುಸಿವರೆಗೆ ಕೆನರಾ ಶಿಕ್ಷಣ ಸಂಸ್ಥೆಯಲ್ಲಿ ಕಲಿತರು. ನೌಕಾಪಡೆ ಸೇರಬೇಕೆಂಬ ಹಂಬಲ ಈಡೇರಿಸಿಕೊಳ್ಳಲು ಹೈಸ್ಕೂಲ್ ನಲ್ಲಿದ್ದಾಗಲೇ ಎನ್‌ಸಿಸಿ ಗೆ ಸೇರಿದ್ದರು. ಆಗ ಕೆನರಾ ಕಾಲೇಜಿನಲ್ಲಿ ಎನ್‌ಸಿಸಿ ಇರಲಿಲ್ಲವಾದ ಕಾರಣ ಸೈಂಟ್ ಅಲೋಶಿಯಸ್ ಕಾಲೇಜಿನಲ್ಲಿ ತರಬೇತಿ ಪಡೆಯುತ್ತಿದ್ದರು. ಬಳಿಕ ಬೆಂಗಳೂರಿನ ಬಿಎಂಎಸ್ ಶಿಕ್ಷಣ ಸಂಸ್ಥೆಯಲ್ಲಿ ಬಿಇ ಕಂಪ್ಯೂಟರ್ ಸೈನ್ಸ್ ಕಲಿಯುವಾಗಲೇ ನೌಕಾಪಡೆಯ ವಿವಿಧ ಅರ್ಹತಾ ಪರೀಕ್ಷೆಗಳನ್ನು ಎದುರಿಸಿದ್ದರು. ಕೆಲವು ಬಾರಿ ಇದರಲ್ಲಿ ವಿಫಲರಾದರೂ ಛಲ ಬಿಡದೇ ಭಾರತೀಯ ನೌಕಾಪಡೆಯ ವಿಶೇಷ ಅಧಿಕಾರಿಯಾಗಿ ನೇಮಕಗೊಂಡರು. ಸದ್ಯ ನೌಕಾಪಡೆಯಲ್ಲಿ ಅಂಡಮಾನ್ ನಿಕೋಬಾರ್‌ನಲ್ಲಿ ಲೆಫ್ಟಿನೆಂಟ್ ಕಮಾಂಡರ್ ಆಗಿ ಕಾರ್ಯ ನಿರ್ವಹಿಸುತ್ತಿದ್ದಾರೆ. ನಮ್ಮ ಆಸೆ ಮಗಳು ಈಡೇರಿಸಿದಳು
ದಿಶಾ ಅವರ ತಂದೆ ಅಮೃತ್ ಕುಮಾರ್ “ಉದಯವಾಣಿ’ಗೆ ಪ್ರತಿಕ್ರಿಯಿಸಿ, “ಮಗಳು ದಿಶಾ ಗಣರಾಜ್ಯೋತ್ಸವ ಪಥಸಂಚಲನದಲ್ಲಿ ನೌಕಾ ಪಡೆಯ ತುಕಡಿ ಮುನ್ನಡೆಸಲು ಆಯ್ಕೆಯಾದದ್ದು ಸಂತಸ ತಂದಿದೆ. ನೌಕಾಪಡೆಯ ಬಗ್ಗೆ ನನಗೆ ಮತ್ತು ಪತ್ನಿಗೆ ವಿಶೇಷ ಆಸಕ್ತಿ ಇದೆ. ಆದರೆ ಆ ಕಾಲದಲ್ಲಿ ನಮಗೆ ಸಾಧ್ಯವಾಗಲಿಲ್ಲ. ಈಗ ನಮ್ಮ ಆಸೆಯನ್ನು ಮಗಳು ಈಡೇರಿಸಿದ್ದಾಳೆ ಎಂಬುದೇ ಸಂತಸದ ಸಂಗತಿ’ ಎಂದಿದ್ದಾರೆ. 2008ರಿಂದಲೂ ಗಣರಾಜ್ಯೋತ್ಸವ ಪರೇಡ್ ನಲ್ಲಿ ಭಾಗಿಯಾಗಬೇಕು ಎಂಬ ಕನಸು ಹೊತ್ತಿದ್ದೆ. ಈಗ ಭಾರತೀಯ ನೌಕಾಪಡೆಯು ನನಗೆ ಆ ಅವಕಾಶ ಕಲ್ಪಿಸಿದೆ.
-ಲೆ|ಕ| ದಿಶಾ ಅಮೃತ್, ನೌಕಾಪಡೆ ಅಧಿಕಾರಿ