ಗಂಗಾವತಿ: ನಗರದ ಬಸ್ ನಿಲ್ದಾಣದಲ್ಲಿ ಅಪರಿಚಿತ ಯುವಕನ ಟ್ರಾವೆಲ್ ಹಿಸ್ಟರಿಯಿಂದ ಆತಂಕ ಮೂಡಿಸಿದ್ದ ಯುವಕ ಇಲ್ಲಿನ ಆಸ್ಪತ್ರೆಯಿಂದಲೂ ತಪ್ಪಿಸಿಕೊಂಡು ಕೊಪ್ಪಳದಲ್ಲಿ ಕಾಣಿಸಿಕೊಂಡಿದ್ದಾನೆ.
ಬಸ್ ನಿಲ್ದಾಣದಲ್ಲಿ ಅನುಮಾನಸ್ಪದವಾಗಿ ಕಂಡುಬಂದಿದ್ದ ಯುವಕನ್ನು ಅಧಿಕಾರಿಗಳು ಪೊಲೀಸರ ನೆರವಿನೊಂದಿಗೆ ಆತನನ್ನು ಕೋವಿಡ್-19 ಪರೀಕ್ಷೆ ನಡೆಸಲು ಇಲ್ಲಿಯ ಸರಕಾರಿ ಆಸ್ಪತ್ರೆಗೆ ಕರೆದುಕೊಂಡು ಹೋಗಿದ್ದರು. ಆದರೆ ಈ ಸಂದರ್ಭದಲ್ಲಿ ಅಪರಿಚಿತ ಯುವಕ ಆಸ್ಪತ್ರೆಯಲ್ಲಿ ಸರಿಯಾದ ಮಾಹಿತಿ ನೀಡದೇ ತಪ್ಪಿಸಿಕೊಂಡು ಆತಂಕ ಮೂಡಿಸಿದ್ದಾನೆ.
ಕೂಡಲೇ ಎಚ್ಚೆತ್ತುಕೊಂಡ ಸರಕಾರಿ ಆಸ್ಪತ್ರೆಯ ವೈದ್ಯರು ಪೊಲೀಸರು ಅಪರಿಚಿತನ ಕುರಿತು ಮಾಹಿತಿ ಸಂಗ್ರಹಿಸಿದಾಗ ಕೊಪ್ಪಳದ ಬಸ್ ನಲ್ಲಿ ಹೋಗುತ್ತಿರುವ ಕುರಿತು ಮಾಹಿತಿ ದೊರಕಿದೆ.
ಕೊಪ್ಪಳ ದ ಸರಕಾರಿ ಆಸ್ಪತ್ರೆಯ ವೈದ್ಯರು ಪೊಲೀಸರು ನೆರವಿನಲ್ಲಿ ಆತನನ್ನು ಕೊಪ್ಪಳದ ಬಸ್ ನಿಲ್ದಾಣದಲ್ಲಿ ತಡೆದು ಆಸ್ಪತ್ರೆಗೆ ಕರೆದುಕೊಂಡು ಹೋಗಲಾಗಿದೆ ಎಂದು ತಿಳಿದುಬಂದಿದೆ.
ಕೋವಿಡ್ ಪರೀಕ್ಷೆಗೆ ಕ್ರಮ: ಈ ಯುವಕನ್ನು ಮಂಗಳೂರು ಮೂಲದ ಮಂಜುನಾಥ ಎಂದು ಗುರುತಿಸಲಾಗಿದೆ. ಕೋವಿಡ್-19 ಪರಿಕ್ಷೆಗೂ ಮೊದಲೇ ಆಸ್ಪತ್ರೆಯಿಂದ ತಪ್ಪಿಸಿಕೊಂಡು ಹೋಗಿದ್ದು ಬಸ್ ಮೂಲಕ ಕೊಪ್ಪಳ ಕ್ಕೆ ತೆರಳಿದ್ದ ಎನ್ನಲಾಗಿದೆ. ಮಾಹಿತಿ ಹಿನ್ನೆಲೆಯಲ್ಲಿ ಕೊಪ್ಪಳ ಬಸ್ ನಿಲ್ದಾಣದಲ್ಲಿ ಮಂಜುನಾಥ ನನ್ನು ಪತ್ತೆ ಮಾಡಿ ಆಸ್ಪತ್ರೆಗೆ ಕರೆದುಕೊಂಡು ಹೋಗಲಾಗಿದೆ. ಹಿರಿಯ ಅಧಿಕಾರಿಗಳ ಸಲಹೆ ಮೇರೆಗೆ ಕ್ವಾರಂಟೈನಲ್ಲಿಟ್ಟು ಗಂಟಲು ದ್ರವ ಸಂಗ್ರಹಿಸಿ ಪರೀಕ್ಷೆಗೆ ಕಳಿಸಲಾಗುತ್ತದೆ ಎಂದು ತಾಲೂಕು ವೈದ್ಯಧಾಕಾರಿ ಡಾ.ಶರಣಪ್ಪ ಚಕೋಟಿ ಉದಯವಾಣಿ”ಗೆ ತಿಳಿಸಿದ್ದಾರೆ