Advertisement

Mangaluru 1.25 ಲ.ರೂ. ಮೌಲ್ಯದ ಎಂಡಿಎಂಎ ಡ್ರಗ್ಸ್‌ ಸಹಿತ ಆರೋಪಿಯ ಬಂಧನ

08:13 PM Jul 28, 2023 | Team Udayavani |

ಮಂಗಳೂರು: ನಿಷೇಧಿತ ಮಾದಕ ವಸ್ತು ಎಂಡಿಎಂಎ ಮಾರಾಟ ಮಾಡುತ್ತಿದ್ದ ಉಳ್ಳಾಲ ಬೋಳಿಯಾರ್‌ ನಲಿಕೆದ ಗುಡ್ಡೆ ಮನೆಯ ಮಹಮ್ಮದ್‌ ಆರೀಫ್(28)ನನ್ನು ಮಂಗಳೂರು ಸಿಸಿಬಿ ಪೊಲೀಸರು ಶುಕ್ರವಾರ ಬಂಧಿಸಿದ್ದಾರೆ.

Advertisement

ಮಹಮ್ಮದ್‌ ಆರೀಫ್ ಮುಡಿಪು ಕಂಬಳಪದವು ಕೆಐಎಡಿಬಿ ರಸ್ತೆ ಪರಿಸರದಲ್ಲಿ ಎಂಡಿಎಂಎ ಡ್ರಗ್ಸ್‌ನ್ನು ಕಾರಿನಲ್ಲಿಟ್ಟು ಸಾರ್ವಜನಿಕರಿಗೆ ಮಾರಾಟ ಮಾಡುತ್ತಿದ್ದಾಗ ಕಾರ್ಯಾಚರಣೆ ನಡೆಸಲಾಗಿದೆ. ಆತನಿಂದ 1.25 ಲ.ರೂ. ಮೌಲ್ಯದ ಒಟ್ಟು 25 ಗ್ರಾಂ ಎಂಡಿಎಂಎ, ಕಾರು, ಮೊಬೈಲ್‌ ಪೋನ್‌, ಡಿಜಿಟಲ್‌ ತೂಕಮಾಪನ ಸೇರಿದಂತೆ ಒಟ್ಟು ಅಂದಾಜು 6,35,500 ರೂ. ಮೌಲ್ಯದ ಸೊತ್ತುಗಳನ್ನು ವಶಪಡಿಸಿಕೊಳ್ಳಲಾಗಿದೆ.

ಈತನ ವಿರುದ್ಧ ಈ ಹಿಂದೆ ಕೊಣಾಜೆ ಪೊಲೀಸ್‌ ಠಾಣೆಯಲ್ಲಿ ಜಾನುವಾರು ಕಳ್ಳತನ ಪ್ರಕರಣ ದಾಖಲಾಗಿತ್ತು.

ಪತ್ತೆ ಕಾರ್ಯದಲ್ಲಿ ಸಿಸಿಬಿ ಘಟಕದ ಪೊಲೀಸ್‌ ನಿರೀಕ್ಷಕ ಶ್ಯಾಮ್‌ ಸುಂದರ್‌ ಎಚ್‌ ಎಂ, ಪಿಎಸ್‌ಐಯವರಾದ ರಾಜೇಂದ್ರ ಬಿ, ಸುದೀಪ್‌ ಎಂ.ವಿ, ಶರಣಪ್ಪ ಭಂಡಾರಿ, ನರೇಂದ್ರ ಹಾಗೂ ಸಿಸಿಬಿ ಸಿಬಂದಿ ಪಾಲ್ಗೊಂಡಿದ್ದರು. ಈ ಮಾದಕ ವಸ್ತು ಮಾರಾಟ ಜಾಲದಲ್ಲಿ ಇನ್ನೂ ಹಲವಾರು ಆರೋಪಿಗಳು ಭಾಗಿಯಾಗಿದ್ದು ಪತ್ತೆ ಕಾರ್ಯ ಮುಂದುವರಿದಿದೆ ಎಂದು ಪೊಲೀಸ್‌ ಆಯುಕ್ತ ಕುಲದೀಪ್‌ ಕುಮಾರ್‌ ಆರ್‌.ಜೈನ್‌ ತಿಳಿಸಿದ್ದಾರೆ.

ಪ್ರೊಪೋಸಲ್‏ಗೆ ನಿರೀಕ್ಷಿಸುತ್ತಿದ್ದೀರಾ? ಕನ್ನಡ ಮ್ಯಾಟ್ರಿಮೋನಿಯಲ್ಲಿ - ಉಚಿತ ನೋಂದಣಿ !

Advertisement

Udayavani is now on Telegram. Click here to join our channel and stay updated with the latest news.

Next