Advertisement

ಮಂಗಳೂರಿನಲ್ಲಿ ಗಾಂಜಾ ದಂಧೆ ; ಎಂಬಿಬಿಎಸ್ ವಿದ್ಯಾರ್ಥಿಗಳು ಸೇರಿ 10 ಮಂದಿ ಬಂಧನ

01:33 PM Jan 11, 2023 | Team Udayavani |

ಮಂಗಳೂರು : ಅತ್ಯಂತ ಅಘಾತಕಾರಿ ಘಟನೆಯೊಂದರಲ್ಲಿ ನಗರದಲ್ಲಿ ನಡೆಯುತ್ತಿದ್ದ ಗಾಂಜಾ ದಂಧೆ ಪ್ರಕರಣದಲ್ಲಿ ಹತ್ತು ಜನ ಆರೋಪಿಗಳನ್ನು ಬಂಧಿಸಲಾಗಿದೆ. ಬಂಧಿತರ ಪೈಕಿ ಒಂಬತ್ತು ಮಂದಿ ವೈದ್ಯಕೀಯ ವಿದ್ಯಾರ್ಥಿಗಳಾಗಿದ್ದಾರೆ ಎನ್ನುವ ವಿಚಾರ ಕಳವಳಕಾರಿಯಾಗಿದೆ.

Advertisement

ಬಂಧನದ ಕುರಿತು ನಗರ ಪೊಲೀಸ್ ಕಮಿಷನರ್ ಎನ್ . ಶಶಿಕುಮಾರ್ ಅವರು ಬುಧವಾರ ಸುದ್ದಿಗಾರರಿಗೆ ಮಾಹಿತಿ ನೀಡಿದ್ದು,  ದೂರಿನ ಆಧಾರದ ಮೇಲೆ ನೀಲ್ ಕಿಶೋರಿಲಾಲ್ ರಾಮ್ ಜಿ ಶಾ ಎಂಬಾತನನ್ನು ಮೊದಲು ಬಂಧಿಸಲಾಗಿದೆ. ಈತ ಯುಕೆಯ ಪ್ರಜೆಯಾಗಿದ್ದು, ಎನ್ ಆರ್ ಐ ಕೋಟಾದಲ್ಲಿ ಡೆಂಟಲ್ ವಿದ್ಯಾರ್ಥಿಯಾಗಿದ್ದು ಕಳೆದ ಹದಿನೈದು ವರ್ಷಗಳಿಂದಲೂ ವಿದ್ಯಾಭ್ಯಾಸ ಮಾಡುತ್ತಿದ್ದು,ಆತನಿಗೆ ಶಿಕ್ಷಣ ಇನ್ನೂ ಪೂರ್ಣ ಗೊಳಿಸಲು ಸಾಧ್ಯವಾಗಿಲ್ಲ. ಗಾಂಜಾ ಪೆಡ್ಲರ್ ಆಗಿ ಕೆಲಸ ಮಾಡುತ್ತಿದ್ದ ಎಂದು ತಿಳಿಸಿದ್ದಾರೆ.

ನೀಲ್ ಕಿಶೋರಿಲಾಲ್ ವಿದ್ಯಾರ್ಥಿನಿಯರು ಮತ್ತು ವೈದ್ಯರಿಗೆ ಗಾಂಜಾ ಸರಬರಾಜು ಮಾಡುತ್ತಿದ್ದು, ಸಾಕಷ್ಟು ಪೂರಕ ಸಾಕ್ಷಧಾರಗಳಿಂದ ಆತನನ್ನು ಬಂಧಿಸಿ ನ್ಯಾಯಾಲಯಕ್ಕೆ ಹಾಜರು ಪಡಿಸಲಾಗಿದೆ ಎಂದು ಪೊಲೀಸ್ ಕಮಿಷನರ್ ತಿಳಿಸಿದ್ದಾರೆ.

ಬಂಧಿತ ಆರೋಪಿಗಳು,ಕೇರಳ ಮೂಲದ ಡಾ ಸಮೀರ್ (32), ಡಾ. ನಾಡಿಯಾ ಸಿರಾಜ್ (24), ತಮಿಳುನಾಡಿನ ಡಾ ಮಣಿಮಾರನ್ ಮುತ್ತು (28), ಆಂಧ್ರದ ಡಾ ವರ್ಷಿಣಿ ಪ್ರತಿ (26),ಚಂಡಿಘಡ,ಪಂಜಾಬ್ ನ ಡಾ ಭಾನು ಧಾಹಿಯಾ (27), ಚಂಡಿಘಡದ ಡಾ ರಿಯಾ ಚಡ್ಡಾ (22), ದೆಹಲಿಯ ಡಾ. ಕ್ಷಿತಿಜ್ ಗುಪ್ತಾ (25), ಮಹಾರಾಷ್ಟ್ರದ ಡಾ ಇರಾ ಬಸಿನ್ (23) ಮತ್ತು ಬಂಟ್ವಾಳ ಮಾರಿಪಳ್ಳದ ಮೊಹಮ್ಮದ್ ರೌಫ್ ಗೌಸ್ (34) ಎಂದು ಪೊಲೀಸರು ವಿವರಗಳನ್ನು ನೀಡಿದ್ದಾರೆ.

ಸಿಸಿಬಿ ಇನ್ಸ್ ಪೆಕ್ಟರ್ ಶ್ಯಾಮ್ ಸುಂದರ್ ಅವರ ನೇತೃತ್ವದಲ್ಲಿ ದಾಳಿ ನಡೆಸಿ ನೀಲ್ ಕಿಶೋರಿಲಾಲ್ ರಾಮ್ ಜಿ ಶಾನನ್ನ ಮೊದಲು ಬಂಧಿಸಲಾಗಿದೆ. ಆತನ ಬಳಿ 50 ಸಾವಿರ ಮೌಲ್ಯದ 2 ಕೆಜಿ ಗಾಂಜಾ, ಮೊಬೈಲ್ ಮತ್ತು ನಗದನ್ನು ಮತ್ತು ಆಟಿಕೆ ಪಿಸ್ತೂಲನ್ನು ವಶಕ್ಕೆ ಪಡೆಯಲಾಗಿದೆ. ಆ ಬಳಿಕ ಕಾರ್ಯಾಚರಣೆ ನಡೆಸಿ ಉಳಿಸವರನ್ನು ಪಿಜಿಗಳು, ಹಾಸ್ಟೆಲ್ ಮತ್ತು ಬಾಡಿಗೆ ಮನೆಗಳಿಂದ ಬಂಧಿಸಲಾಗಿದೆ.

Advertisement

ಬಂಧಿತರನ್ನು ನ್ಯಾಯಾಲಯಕ್ಕೆ ಹಾಜರು ಪಡಿಸಲಾಗಿದ್ದು, ಎರಡು ದಿನಗಳ ಕಾಲ ಪೊಲೀಸ್ ಕಸ್ಟಡಿಗೆ ನೀಡಿದೆ.

Advertisement

Udayavani is now on Telegram. Click here to join our channel and stay updated with the latest news.

Next