Advertisement

Mangaluru; ಗುದನಾಳದಲ್ಲಿದ್ದ 58 ಲಕ್ಷ ರೂ. ಮೌಲ್ಯದ ಚಿನ್ನ ಜಪ್ತಿ!

10:07 PM Apr 11, 2024 | Team Udayavani |

ಮಂಗಳೂರು: ಇಲ್ಲಿನ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಕಸ್ಟಮ್ಸ್ ಅಧಿಕಾರಿಗಳು ಏಪ್ರಿಲ್ 11 ರಂದು ದುಬೈನಿಂದ ಬಂದ ವಿಮಾನದಲ್ಲಿದ್ದ ಪ್ರಯಾಣಿಕನೊಬ್ಬನಿಂದ ಬರೋಬ್ಬರಿ 812 ಗ್ರಾಂ ತೂಕದ 24 ಕ್ಯಾರೆಟ್ ಚಿನ್ನವನ್ನು ಜಪ್ತಿ ಮಾಡಿದ್ದಾರೆ. ವಶಪಡಿಸಿಕೊಂಡ ಚಿನ್ನದ ಮೌಲ್ಯ 58 ಲಕ್ಷದ 78 ಸಾವಿರದ 880 ರೂ. ಎಂದು ತಿಳಿದು ಬಂದಿದೆ.

Advertisement

ಗುದನಾಳದಲ್ಲಿ ಅಂಡಾಕಾರದ 3 ವಸ್ತುಗಳಲ್ಲಿ ಚಿನ್ನವನ್ನು ಪೇಸ್ಟ್ ರೂಪದಲ್ಲಿ ಮರೆಮಾಡಿ ಕಳ್ಳ ಸಾಗಾಣಿಕೆ ಮಾಡಲಾಗುತ್ತಿತ್ತು. ಪ್ರಯಾಣಿಕನನ್ನು ಬಂಧಿಸಿದ ಅಧಿಕಾರಿಗಳು ಕೋರ್ಟ್ ಗೆ ಹಾಜರು ಪಡಿಸಿದ್ದಾರೆ.

ಬಂಧಿತ ದಕ್ಷಿಣ ಕನ್ನಡ ಮೂಲದ ವ್ಯಕ್ತಿ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಕಸ್ಟಮ್ಸ್ ಅಧಿಕಾರಿಗಳು ಹದ್ದಿನ ಕಣ್ಣು ಇರಿಸಿ ತಪಾಸಣೆ ನಡೆಸುತ್ತಿದ್ದಾರೆ. ಈ ಹಿಂದೆಯೂ ಇದೆ ರೀತಿ ಹಲವು ಪ್ರಕರಣಗಳು ವರದಿಯಾಗಿದ್ದವು.

Advertisement

Udayavani is now on Telegram. Click here to join our channel and stay updated with the latest news.

Next