Advertisement
ಸೋಮೇಶ್ವರದಲ್ಲಿ ನಡೆದ “ನೈತಿಕ ಪೊಲೀಸ್‌ಗಿರಿ’ ಘಟನೆಯ ಹಿನ್ನೆಲೆಯಲ್ಲಿ ಶನಿವಾರ ಪತ್ರಕರ್ತರು ಆಯುಕ್ತರನ್ನು ಪ್ರಶ್ನಿಸಿದಾಗ, ಮುಂಜಾಗರೂಕತ ಕ್ರಮವಾಗಿ ಸಿಆರ್‌ಪಿಸಿ ಸೆಕ್ಷನ್ 107 ಮತ್ತು 110ರ ಅಡಿಯಲ್ಲಿ ಜಾಮೀನು ಮುಚ್ಚಳಿಕೆ ಪಡೆದುಕೊಳ್ಳಲಾಗುವುದು. ಇದುವರೆಗೆ ಮಂಗಳೂರು ಪೊಲೀಸ್ ಕಮಿಷನರೆಟ್ ವ್ಯಾಪ್ತಿಯಲ್ಲಿ ವಿವಿಧ ರೀತಿಯ ಕಾನೂನುಬಾಹಿರ ಕೃತ್ಯಗಳಲ್ಲಿ ಈ ಹಿಂದೆ ಪಾಲ್ಗೊಂಡಿದ್ದ 1,200 ಮಂದಿಯಿಂದ ಜಾಮೀನು ಮುಚ್ಚಳಿಕೆ ಪಡೆದುಕೊಳ್ಳಲಾಗಿದೆ. ಮುಚ್ಚಳಿಕೆ ಅವಧಿ ಒಂದು ವರ್ಷ ಅವಧಿ ಹೊಂದಿರುತ್ತದೆ. ಅಗತ್ಯ ಬಿದ್ದರೆ ಮತ್ತೆ ಅದನ್ನು ವಿಸ್ತರಿಸಲಾಗುವುದು. ಮುಚ್ಚಳಿಕೆ ನಿಯಮ ಉಲ್ಲಂ ಸಿದರೆ ಜಾಮೀನು ಮೊತ್ತವನ್ನು ಮುಟ್ಟುಗೋಲು ಹಾಕಿಕೊಂಡು ಮತ್ತೂಂದು ಪ್ರಕರಣ ದಾಖಲಿಸಿ ನ್ಯಾಯಾಂಗ ಬಂಧನಕ್ಕೆ ಒಳಪಡಿಸಲಾಗುವುದು. ಕಳೆದ ವರ್ಷ ಜಾಮೀನು ಮುಚ್ಚಳಿಕೆ ಷರತ್ತುಗಳನ್ನು ಉಲ್ಲಂ ಸಿದ 9 ಮಂದಿಯ 1.90 ಲ.ರೂ. ಬಾಂಡ್ ಮೊತ್ತವನ್ನು ಸರಕಾರದ ಖಜಾನೆಗೆ ಒಪ್ಪಿಸಲಾಗಿದೆ ಎಂದು ಪೊಲೀಸ್ ಆಯುಕ್ತರು ತಿಳಿಸಿದ್ದಾರೆ.
ಕಳೆದ ಒಂದು ವರ್ಷದಲ್ಲಿ ಮಂಗಳೂರು ಪೊಲೀಸ್ ಕಮಿಷನರೆಟ್ ವ್ಯಾಪ್ತಿಯ 62 ಮಂದಿ ರೌಡಿಶೀಟರ್‌ಗಳನ್ನು ಗಡೀಪಾರು ಮಾಡಲಾಗಿದ್ದು ಅವರ ಮೇಲೆ ನಿರಂತರ ನಿಗಾ ಇಡಲಾಗಿದೆ. ರಾಜ್ಯದ ಇತರ ಕಡೆಗಳಿಗೆ ಹೋಲಿಸಿದರೆ ಅತೀ ಹೆಚ್ಚು ಮಂದಿ ರೌಡಿಗಳನ್ನು ಮಂಗಳೂರಿನಿಂದ ಗಡೀಪಾರು ಮಾಡಲಾಗಿದೆ ಎಂದು ಪೊಲೀಸ್ ಆಯುಕ್ತರು ತಿಳಿಸಿದ್ದಾರೆ. ಗಸ್ತು ಹೆಚ್ಚಳ
ಸೋಮೇಶ್ವರ ಬೀಚ್‌ನಲ್ಲಿ “ನೈತಿಕ ಪೊಲೀಸ್‌ಗಿರಿ’ ಘಟನೆ ವರದಿಯಾದ ಹಿನ್ನೆಲೆಯಲ್ಲಿ ಬೀಚ್‌ಗಳು, ಮಾಲ್‌ಗಳು ಸೇರಿದಂತೆ ಜನರು ಹೆಚ್ಚು ಸೇರುವ ಪ್ರದೇಶಗಳಲ್ಲಿ ಗಸ್ತು ಹೆಚ್ಚಿಸಲಾಗಿದೆ. ಕಾನೂನು ಬಾಹಿರವಾಗಿ ಯಾವುದೇ ರೀತಿಯ ಕೃತ್ಯಗಳಲ್ಲಿ ತೊಡಗಿಸಿಕೊಂಡಿರುವುದು ಕಂಡುಬಂದರೆ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು ಎಂದು ಆಯುಕ್ತರು ತಿಳಿಸಿದ್ದಾರೆ.
Related Articles
ಸೋಮೇಶ್ವರ ಬೀಚ್‌ನಲ್ಲಿ ಗುರುವಾರ ನಡೆದ “ನೈತಿಕ ಪೊಲೀಸ್‌ಗಿರಿ’ ಪ್ರಕರಣಕ್ಕೆ ಸಂಬಂಧಿಸಿ ಬಂಧಿಸಲಾಗಿರುವ 7 ಮಂದಿ ಆರೋಪಿಗಳ ಪೈಕಿ 6 ಮಂದಿಯನ್ನು ನ್ಯಾಯಾಲಯವು ಜೂ.14ರ ವರೆಗೆ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿದೆ. ಓರ್ವ ಅಪ್ರಾಪ್ತನನ್ನು ಬಾಲ ನ್ಯಾಯ ಮಂಡಳಿಗೆ ಹಾಜರುಪಡಿಸಲಾಗಿದ್ದು ಮಂಡಳಿಯ ಆದೇಶದಂತೆ ಮುಂದಿನ ಕ್ರಮ ಕೈಗೊಳ್ಳಲಾಗುವುದು ಎಂದು ಪೊಲೀಸ್ ಆಯುಕ್ತರು ತಿಳಿಸಿದ್ದಾರೆ.
Advertisement