Advertisement

ಮಂಗಳೂರು : ಜ್ಯುವೆಲ್ಲರಿ ಶಾಪ್ ನಲ್ಲಿ ಸಿಬಂದಿಗೆ ಚೂರಿ ಇರಿತ

05:02 PM Feb 03, 2023 | Team Udayavani |

ಮಂಗಳೂರು : ನಗರದ ಹಂಪನಕಟ್ಟೆ ಮಿಲಾಗ್ರಿಸ್ ಸಮೀಪ ಜ್ಯುವೆಲ್ಲರಿ ಅಂಗಡಿಯಲ್ಲಿ ಕೆಲಸದ ಸಿಬಂದಿಗೆ ಚೂರಿ ಇರಿತ ನಡೆಸಿದ ಘಟನೆ ಶುಕ್ರವಾರ ನಡೆದಿದೆ.

Advertisement

ಚೂರಿ ಇರಿತದಿಂದ ಗಾಯಗೊಂಡಿರುವ ಸಿಬಂದಿಯನ್ನು ಆಸ್ಪತ್ರೆಗೆ ದಾಖಲಿಸಲಾಗಿದ್ದು, ಪೊಲೀಸರಿಗೆ ದೂರು ನೀಡಲಾಗಿದೆ.

ಗಾಯಾಳುವನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಘಟನೆ ವೇಳೆ ಅಂಗಡಿಯಲ್ಲಿ ಒಬ್ಬರೇ ಇದ್ದರೆಂದು ತಿಳಿದುಬಂದಿದೆ. ದರೋಡೆಯೆ ಬೇರೆ ಕಾರಣವೇ ತಿಳಿದು ಬಂದಿಲ್ಲ.‌ಅಂಗಡಿ ಮಾಲಕರು ಊಟ ಮಾಡಿ ವಾಪಸ್ ಆದಾಗ ಘಟನೆ ಗಮನಕ್ಕೆ ಬಂದಿದೆ ಎನ್ನಲಾಗಿದೆ.

ಸಿಸಿ ಕ್ಯಾಮೆರಾದಲ್ಲಿ ಕೃತ್ಯ ದಾಖಲಾಗಿರುವ ಸಾಧ್ಯತೆಯಿದ್ದು, ಪರಿಶೀಲನೆ ನಡೆಯುತ್ತಿದೆ. ಜ್ಯುವೆಲ್ಲರಿಯಿಂದ ಓರ್ವ ಮುಸುಕುಧಾರಿ ಹೊರಗೆ ಬರುವ ದೃಶ್ಯ ಸಿಸಿ ಕೆಮರಾದಲ್ಲಿ ದಾಖಲಾಗಿದೆ. ಜ್ಯುವೆಲ್ಲರಿಯಿಂದ ಓರ್ವ ಮುಸುಕುಧಾರಿ ಹೊರಗೆ ಬರುವುದು ಕಂಡು ಬಂದಿದೆ.

ಸ್ಥಳಕ್ಕೆ ಡಿಸಿಪಿ ಅಂಶುಕುಮಾರ್ ಭೇಟಿ ನೀಡಿ ಪರಿಶೀಲನೆ ನಡೆಸುತ್ತಿದ್ದಾರೆ.

Advertisement

ಹೆಚ್ಚಿನ ವಿವರ ನಿರೀಕ್ಷಿಸಲಾಗುತ್ತಿದೆ.

Advertisement

Udayavani is now on Telegram. Click here to join our channel and stay updated with the latest news.

Next