Advertisement
ಬ್ಯಾಂಕ್ನಿಂದ ಸಾಲ ಪಡೆದಿದ್ದ ಮಂಗಳೂರು ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯ ಕುಟಿನ್ಹೋ ಪದವಿನ ನಿವಾಸಿ ಮನೋಹರ್ ಪಿರೇರಾ(47) ಅವರು ಮಂಗಳವಾರ ಮನೆಯಲ್ಲಿ ಆತ್ಮಹತ್ಯೆ ಮಾಡಿಕೊಂಡಿದ್ದರು. ಆತ್ಮಹತ್ಯೆಗೂ ಮುನ್ನ ತನ್ನ ಆತ್ಮಹತ್ಯೆಗೆ ಬ್ಯಾಂಕ್ ಅಧ್ಯಕ್ಷರೇ ಹೊಣೆ ಎಂಬುದಾಗಿ ವೀಡಿಯೋ ಚಿತ್ರೀಕರಿಸಿ ಅದನ್ನು ಸಾಮಾಜಿಕ ಜಾಲತಾಣಗಳಲ್ಲಿ ಪ್ರಸಾರ ಮಾಡಿದ್ದರು. ಈ ಹಿನ್ನೆಲೆಯಲ್ಲಿ ಅಧ್ಯಕ್ಷ ಅನಿಲ್ ಲೋಬೋರನ್ನು ಬಂಧಿಸಲಾಗಿದೆ.
Related Articles
Advertisement
ಬ್ಯಾಂಕ್ ಬಗ್ಗೆ ತಪ್ಪು ಹೇಳಿಕೆ: ಎಂಸಿಸಿ ಬ್ಯಾಂಕ್ ಸ್ಪಷ್ಟನೆಆತ್ಮಹತ್ಯೆ ಪ್ರಕರಣದಲ್ಲಿ ಅನಾವಶಕ್ಯಕವಾಗಿ ಬ್ಯಾಂಕ್ ಹಾಗೂ ಬ್ಯಾಂಕ್ ಅಧ್ಯಕ್ಷರ ಹೆಸರನ್ನು ಬಳಸಿ ತಪ್ಪು ಹೇಳಿಕೆ ನೀಡಲಾಗಿದೆ. ಇದಕ್ಕೆ ಸಾರ್ವಜನಿಕರು ಹಾಗೂ ಬ್ಯಾಂಕಿನ ಗ್ರಾಹಕರು ಕಿವಿಗೊಡಬಾರದು. ವ್ಯಕ್ತಿಯೊಬ್ಬರು ಬ್ಯಾಂಕ್ನಿಂದ ಸಾಲ ಪಡೆದಿದ್ದು ಕ್ಲಪ್ತ ಸಮಯದಲ್ಲಿ ಮರುಪಾವತಿ ಮಾಡದಿರುವ ಕಾರಣ ಸಾಲ ವಸೂಲಾತಿಗಾಗಿ ಕಾನೂನಿನ ಅವಕಾಶದಡಿ ಕ್ರಮ ಕೈಗೊಳ್ಳಲಾಗಿತ್ತು. ಸಾಲಗಾರರಿಗೆ ಬಡ್ಡಿಯಲ್ಲಿ ರಿಯಾಯಿತಿ ನೀಡಿ ಸಾಲ ಮರುಪಾವತಿಗೆ ಒಂದು ಅವಕಾಶ ನೀಡಲಾಗಿತ್ತು. ಆದರೂ ಮರುಪಾವತಿ ಮಾಡಿರಲಿಲ್ಲ. ಸಾಲಗಾರರು ತಮ್ಮ ಉಳಿತಾಯ ಖಾತೆಯನ್ನು ವೈಯಕ್ತಿಕ ನೆಲೆಯಲ್ಲಿ ವ್ಯವಹರಿಸುತ್ತಿದ್ದು,ಅದರಲ್ಲಿ ಯಾರೂ ಮಧ್ಯಪ್ರವೇಶಿಸಿಲ್ಲ. ಅವರು ತಮ್ಮ ವೈಯಕ್ತಿಕ ಸಮಸ್ಯೆಯಿಂದ ಕೃತ್ಯ ಎಸಗಿದ್ದಾರೆ ಎಂದು ಎಂಸಿಸಿ ಬ್ಯಾಂಕ್ನ ಮಹಾಪ್ರಬಂಧಕ ಸುನಿಲ್ ಮಿನೇಜಸ್ ಪ್ರಕಟನೆಯಲ್ಲಿ ತಿಳಿಸಿದ್ದಾರೆ.