Advertisement

ಮಂಗಳೂರು ವಿಮಾನ ನಿಲ್ದಾಣ; ಕಸ್ಟಮ್ಸ್ ಅಧಿಕಾರಿಗಳಿಂದ 1 ಕೆಜಿ 625 ಗ್ರಾಂ ಚಿನ್ನ ವಶ

02:02 PM Feb 20, 2023 | Team Udayavani |

ಮಂಗಳೂರು : ಇಲ್ಲಿನ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಕಸ್ಟಮ್ಸ್ ಅಧಿಕಾರಿಗಳು ಫೆಬ್ರವರಿಯಲ್ಲಿ ಭಾರಿ ಚಿನ್ನ ಕಳ್ಳಸಾಗಣೆ ಯತ್ನವನ್ನು ವಿಫಲಗೊಳಿಸಿದ್ದು,1 ಕೆಜಿ 625 ಗ್ರಾಂ ಚಿನ್ನ ವಶಕ್ಕೆ ಪಡೆದಿದ್ದಾರೆ.

Advertisement

ಫೆ.01ರಿಂದ 15ರ ವರೆಗೆ ನಡೆಸಿದ ಕಾರ್ಯಾಚರಣೆಗಳಲ್ಲಿ ಅಧಿಕಾರಿಗಳು  ದುಬೈ ಮತ್ತು ಬಹ್ರೇನ್ ನಿಂದ ಆಗಮಿಸಿದ ಐವರು ಪುರುಷ ಪ್ರಯಾಣಿಕರಿಂದ ಅಕ್ರಮವಾಗಿ ಸಾಗಾಟ ಮಾಡುತ್ತಿದ್ದ ಈ ಚಿನ್ನವನ್ನು ವಶಕ್ಕೆ ಪಡೆಯಲಾಗಿದೆ.

ವಶಪಡಿಸಿಕೊಳ್ಳಲಾದ ಚಿನ್ನದ ಮಾರುಕಟ್ಟೆ ಮೌಲ್ಯ 91ಲಕ್ಷದ 35 ಸಾವಿರದ 850 ರೂ.ಆಗಿದೆ. ಚಿನ್ನ ಮಾತ್ರವಲ್ಲದೆ ಭಾರತೀಯ ರೂಪಾಯಿ 6ಲಕ್ಷದ 54 ಸಾವಿರದ 750ರೂ. ಮೌಲ್ಯದ ವಿದೇಶಿ ನೋಟುಗಳನ್ನು ಓರ್ವ ಪ್ರಯಾಣಿಕನಿಂದ ವಶಕ್ಕೆ ಪಡೆಯಲಾಗಿದೆ.

ಚಿನ್ನವನ್ನು ಪೇಸ್ಟ್ ರೂಪದಲ್ಲಿ ಘನ ಗಮ್‌ನೊಂದಿಗೆ ಬೆರೆಸಿ ಅಂಡಾಕಾರದ ಪ್ಯಾಕೆಟ್‌ಗಳಾಗಿ ಮಾಡಿ ಗುದನಾಳದಲ್ಲಿ ಮರೆಮಾಚಿ, ಟ್ರಾಲಿ ಬ್ಯಾಗ್ ನ ಹ್ಯಾಂಡಲ್ ನಲ್ಲಿ ಮರೆಮಾಚಿದ್ದು, ರಟ್ಟಿನ ಪೆಟ್ಟಿಗೆಯಲ್ಲಿ ಪೇಸ್ಟ್ ರೂಪದಲ್ಲಿ ಮರೆಮಾಚಿದ್ದು ಸೇರಿ ವಿವಿಧ ರೂಪದಲ್ಲಿ ಚಿನ್ನವನ್ನು ಕಳ್ಳ ಸಾಗಾಣಿಕೆ ಮಾಡಲಾಗುತ್ತಿತ್ತು ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಅಧಿಕಾರಿಗಳು ಹೆಚ್ಚಿನ ತನಿಖೆ ನಡೆಸುತ್ತಿದ್ದಾರೆ.

Advertisement

Udayavani is now on Telegram. Click here to join our channel and stay updated with the latest news.

Next