Advertisement

Mangaluru Airport: ಟೇಕಾಫ್ ಗೆ ಸಿದ್ದವಾಗಿದ್ದ ವಿಮಾನಕ್ಕೆ ಢಿಕ್ಕಿ ಹೊಡೆದ ಹಕ್ಕಿ

10:29 AM May 25, 2023 | Team Udayavani |

ಮಂಗಳೂರು: ಟೇಕಾಫ್ ಗೆ ಸಿದ್ದವಾಗಿದ್ದ ವಿಮಾನಕ್ಕೆ ಹಕ್ಕಿಯೊಂದು ಢಿಕ್ಕಿ ಹೊಡೆದ ಘಟನೆ ಇಂದು ಬೆಳಗ್ಗೆ ಮಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ನಡೆದಿದೆ.

Advertisement

ಇಂದು ಬೆಳಗ್ಗೆ 8.30ಕ್ಕೆ ಇಂಡಿಗೋ ವಿಮಾನವು ಮಂಗಳೂರಿನಿಂದ ದುಬೈಗೆ ಹೊರಟಿತ್ತು. ಟ್ಯಾಕ್ಸಿ ವೇ ದಾಟಿ ರನ್ ವೇನಲ್ಲಿ ಸಾಗುತ್ತಿದ್ದ ವೇಳೆ ರನ್ ವೇನಲ್ಲಿ ವಿಮಾನದ ರೆಕ್ಕೆಗೆ ಹಕ್ಕಿ ಢಿಕ್ಕಿ ಹೊಡೆದಿದೆ.

ಇದನ್ನೂ ಓದಿ:Road Mishap: ಅಂತ್ಯಕ್ರಿಯೆಯಲ್ಲಿ ಪಾಲ್ಗೊಂಡು ವಾಪಾಸುತ್ತಿದ್ದಾಗ ಅಪಘಾತ; ದಂಪತಿ ಮೃತ್ಯು

ತಕ್ಷಣ ಅಪಾಯದ ಸೂಚನೆ ಅರಿತು ಎಟಿಸಿಗೆ ಮಾಹಿತಿ ನೀಡಿದ ಪೈಲಟ್, ಟೇಕಾಫ್ ಕ್ಯಾನ್ಸಲ್ ಮಾಡಿ ರನ್ ವೇನಿಂದಲೇ ವಿಮಾನವನ್ನು ವಾಪಾಸ್ ತಂದರು.

ಬಳಿಕ ಬೆಂಗಳೂರಿನಿಂದ ಆಗಮಿಸಿದ ಮತ್ತೊಂದು ವಿಮಾನದ ಮೂಲಕ ದುಬೈಗೆ ಪ್ರಯಾಣಿಕರು ತೆರಳಿದರು.

Advertisement
Advertisement

Udayavani is now on Telegram. Click here to join our channel and stay updated with the latest news.

Next