Advertisement
ಸೋಮವಾರ ರಾತ್ರಿ ಅವರು ಮಂಗಳೂರು ವಿಮಾನ ನಿಲ್ದಾಣಕ್ಕೆ ಆಗಮಿಸಿದರು. ಇದೇ ವೇಳೆ ಅವರ ತಾಯಿ ಹೇಮಾವತಿ, ಅಣ್ಣ ಹರೀಶ್, ಬಿಡುಗಡೆಗೆ ಯತ್ನಿಸಿದ್ದ ಕೊಕ್ಕಡ ಶ್ರೀಧರ ಗೌಡ ಮತ್ತಿತರರು ಅವರನ್ನು ಸ್ವಾಗತಿಸಿದರು. ತಾಯಿ ಕಣ್ಣೀರ್ಗರೆದು ಮಗನನ್ನು ಆಲಂಗಿಸಿದರು.
Related Articles
ಬೆಂಗಳೂರಿನಲ್ಲಿದ್ದ ಚಂದ್ರಶೇಖರ್ ಭಡ್ತಿಯೊಂದಿಗೆ ಸೌದಿಗೆ ತೆರಳಿದ್ದರು. ಅಲ್ಲಿ ಅವರು ಮೊಬೈಲ್ ಸಿಮ್ ಖರೀದಿಗೆಂದು ಬೆರಳಚ್ಚು ಹಾಗೂ ಇತರ ವಿವರ ನೀಡಿದ್ದರು. ಕೆಲವು ದಿನಗಳಲ್ಲಿ ರಿಯಾದ್ ಪೊಲೀಸರು ಚಂದ್ರಶೇಖರ್ ಅವರನ್ನು ವಶಕ್ಕೆ ಪಡೆದು ವಿಚಾರಣೆ ನಡೆಸಿದ್ದರು. ಮಹಿಳೆಯೊಬ್ಬರು ನೀಡಿದ ದೂರಿನಂತೆ ಚಂದ್ರಶೇಖರ್ ಅವರ ಖಾತೆಗೆ ಮಹಿಳೆ ಖಾತೆಯಿಂದ 22 ಸಾವಿರ ರೂ. ವರ್ಗಾವಣೆಯಾಗಿತ್ತು. ಆದರೆ ಇದು ಕೆಲವು ದುಷ್ಕರ್ಮಿಗಳ ಸಂಚಾಗಿದ್ದು, ಚಂದ್ರ ಅವರ ನಕಲಿ ಖಾತೆಯನ್ನು ತೆರೆದು ಈ ಕೃತ್ಯ ಎಸಗಲಾಗಿತ್ತು. ಚಂದ್ರ ಅವರ ವಾದವನ್ನು ಪರಿಗಣಿಸದೆ ಪೊಲೀಸರು ಅವರನ್ನು ಜೈಲಿಗೆ ಹಾಕಿದ್ದರು.
Advertisement
ಅವರ ಗೆಳೆಯರು, ಕೆಲಸ ಮಾಡುತ್ತಿದ್ದ ಕಂಪೆನಿಯ ಪ್ರತಿನಿಧಿಗಳು ಸೇರಿ ದಂಡ ಪಾವತಿಸಿ, ಬಿಡುಗಡೆಗೆ ಶ್ರಮಿಸಿದ್ದಾರೆ. ಕೊನೆಗೂ ಚಂದ್ರಶೇಖರ್ ತಾಯ್ನಾಡಿಗೆ ಆಗಮಿಸುವಂತಾಗಿದೆ.