Advertisement
ಈ ಹಿಂದೆ ಇದ್ದ ಡಾಮರು ರಸ್ತೆಯನ್ನು ದ್ವಿಪಥ ಕಾಂಕ್ರೀಟ್ ರಸ್ತೆಯಾಗಿ ಅಭಿವೃದ್ಧಿ ಪಡಿಸಲಾಗಿದೆ. ಇದರಿಂದಾಗಿ ರಸ್ತೆಯಲ್ಲಿ ವಾಹನ ಸಂಚಾರ ಸುಗಮವಾಗಿದೆ. ಆದರೆ ರಸ್ತೆಯ ಬದಿಯಲ್ಲಿ ಸಾರ್ವಜನಿಕರು ಮಾತ್ರ ಆತಂಕದಿಂದಲೇ ನಡೆದು ಹೋಗಬೇಕಾದ ಪರಿಸ್ಥಿತಿಯಿದೆ.
Related Articles
ಅಂಗಡಿ – ಮಳಿಗೆಗಳಿಗೆ ಭೇಟಿ ನೀಡುವ ಜನರು ತಮ್ಮ ದ್ವಿಚಕ್ರ ವಾಹನ – ಕಾರು, ಆಟೋ ಮೊದಲಾದವುಗಳನ್ನು ರಸ್ತೆ ಬದಿಯಲ್ಲೇ ನಿಲ್ಲಿಸುವುದು ಕಂಡು ಬರುತ್ತದೆ. ಕಲ್ಯಾಣ ಮಂಟಪ ಗಳಲ್ಲಿ ಕಾರ್ಯಕ್ರಮಗಳು ಇದ್ದಾಗ ವಾಹನಗಳು ರಸ್ತೆ ಬದಿಯಲ್ಲಿ ಸಾಲುಗಟ್ಟಿ ನಿಂತಿರುತ್ತವೆ.
Advertisement
ಇಂತಹ ಸಂದರ್ಭದಲ್ಲಿ ರಸ್ತೆಯಲ್ಲೇ ನಡೆದುಕೊಂಡು ಹೋಗಬೇಕಾದ ಪರಿಸ್ಥಿತಿಯಿದೆ. ಇದರಿಂದಾಗಿ ಅಪ ಘಾತಗಳು ಉಂಟಾಗುವ ಸಾಧ್ಯತೆ ಅಧಿಕ. ಈಗಾಗಲೇ ಸಾಕಷ್ಟು ಸಣ್ಣಪುಟ್ಟ ಅವಘಡಗಳು ಇಲ್ಲಿ ಸಂಭವಿಸಿದೆ ಎನ್ನುವುದು ಅಕ್ಕಪಕ್ಕದ ಅಂಗಡಿಗಳ ಮಾಲಕರ ಮಾತು.
ಚಪ್ಪಡಿ ಕಲ್ಲಿನ ಫುಟ್‌ಪಾತ್ ಆದರೂ ನಿರ್ಮಿಸಿಮಣ್ಣಗುಡ್ಡೆಯ ಗಾಂಧಿ ಪಾರ್ಕ್ ಬಳಿ ರಸ್ತೆಯ ಒಂದು ಭಾಗದಲ್ಲಿ ಫುಟ್‌ಪಾತ್ ನಿರ್ಮಾಣಕ್ಕೆ ಪೂರ್ವಭಾವಿಯಾಗಿ ಮಳೆ ನೀರು ಹರಿದು ಹೋಗುವ ಚರಂಡಿ ರಚಿಸಲಾಗಿದೆ. ಕನಿಷ್ಠ ಚಪ್ಪಡಿ ಕಲ್ಲುಗಳನ್ನು ಹಾಸಿ ಜನರಿಗೆ ನಡೆದುಕೊಂಡು ಹೋಗಲು ಅನುಕೂಲವಾಗುವಂತೆ ಮಾಡಿದರೆ ರಸ್ತೆಯಲ್ಲಿ ನಡೆಯುವುದು ತಪ್ಪುತ್ತದೆ ಎನ್ನುತ್ತಾರೆ ಸ್ಥಳೀಯರು. ಕೆಲವು ಕಡೆಗಳಲ್ಲಿ ರಸ್ತೆಯ ಅಂಚಿನಲ್ಲೇ ಮಳೆ ನೀರು ಹರಿಯುವ ಚರಂಡಿಯಿದ್ದು, ವಾಹನ ಸವಾರರು ಮುಖ್ಯವಾಗಿ ದ್ವಿಚಕ್ರ ವಾಹನ ಸವಾರರು ತುಸು ಎಚ್ಚರ ತಪ್ಪಿದರೂ ಅಪಾಯ ಖಚಿತ. ಸಂಬಂಧಪಟ್ಟವರು ಇನ್ನಾದರೂ ಈ ಬಗ್ಗೆ ಗಮನ ಹರಿಸಿ ಫುಟ್‌ಪಾತ್ ನಿರ್ಮಾಣಕ್ಕೆ ಮುಂದಾಗಬೇಕು ಎಂದು ಸಾರ್ವ ಜನಿಕರು, ಸ್ಥಳೀಯ ನಿವಾಸಿಗಳು ಆಗ್ರಹಿಸಿದ್ದಾರೆ. ರಸ್ತೆ ನಿರ್ಮಾಣ ಮಾಡುವಾಗಲೇ ಫುಟ್‌ಪಾತ್ ರಚನೆಯನ್ನೂ ಮಾಡಿದ್ದರೆ ಸಮಸ್ಯೆಯಾಗುತ್ತಿರಲಿಲ್ಲ ಎನ್ನುವುದು ಪಾದಚಾರಿ ಗಳ ಮಾತು.