ಮಂಗಳೂರು: ಗುರುಪುರ ಹೋಬಳಿಯ ತೆಂಕ ಉಳಿಪಾಡಿ ಗ್ರಾಮದ ಮಸೀದಿ ಕಟ್ಟಡದಲ್ಲಿ ಪ್ರಾಚೀನ ದೇವಸ್ಥಾನದ ಕುರುಹುಗಳು ಪತ್ತೆಯಾಗಿದ್ದು, ಮಸೀದಿ ಪರವಾನಿಗೆ ರದ್ದುಗೊಳಿಸಿ ಮತ್ತು ಪುರಾತತ್ವ ಇಲಾಖೆಯಿಂದ ತನಿಖೆ ನಡೆಸಲು ಆದೇಶಿಸಲು ಆಗ್ರಹ ವಿಶ್ವ ಹಿಂದೂ ಪರಿಷತ್ ಆಗ್ರಹಿಸಿದೆ.
ಮಂಗಳೂರು ತಾಲೂಕಿನ ಗುರುಪುರ ಹೋಬಳಿಯ ತೆಂಕ ಉಳಿಪಾಡಿ ಗ್ರಾಮ, ಗಂಜಿಮಠ ಪಂಚಾಯಿತಿಯಲ್ಲಿರುವ ಅಸ್ಸಾಯಿದ್ ಅಬ್ದುಲ್ಲಾಹಿಲ್ ಮದನಿ ಜುಮಾ ಮಸೀದಿ ಕಟ್ಟಡ ನವೀಕರಣ ಸಂದರ್ಭದಲ್ಲಿ ಮಸೀದಿ ಅರ್ಧ ಕಟ್ಟಡ ಕೆಡವಿದಾಗ ಪುರಾತನ ದೇವಸ್ಥಾನ ಪತ್ತೆಯಾಗಿದೆ.
ಮೇಲ್ನೋಟಕ್ಕೆ ನೋಡಿದಾಗ ಪುರಾತನ ದೇವಸ್ಥಾನವನ್ನು ಕೆಡವಿ ಮಸೀದಿ ಕಟ್ಟಡ ಕಟ್ಟಿರುವುದು ಕಂಡುಬರುತ್ತದೆ. ಕಟ್ಟಡದ ಒಳಗೆ ಮತ್ತು ಹೊರಗಡೆ ನೋಡುವಾಗ ಪ್ರಾಚೀನ ದೇವಸ್ಥಾನದ ಕಟ್ಟಡದ ಶೈಲಿಯಲ್ಲಿ ಕಂಡು ಬರುತ್ತಿದೆ ಆದುದರಿಂದ ಗಂಜಿಮಠ ಗ್ರಾಮಪಂಚಾಯತಿ ನೀಡಿದ ಕಟ್ಟಡ ಪರವಾನಿಗೆ ನಂ 11/2021/22 ರ ಪ್ರಕಾರ ನೀಡಿರುವ ಮಸೀದಿ ನವೀಕರಣದ ಅನುಮತಿಯನ್ನು ರದ್ದುಗೊಳಿಸಿ ಇದನ್ನು ಪರಿಶೀಲಿಸಿ ಪುರಾತತ್ವ ಇಲಾಖೆಗೆ ತನಿಖೆ ನಡೆಸಲು ಆದೇಶಿಸಬೇಕು ಮತ್ತು ಆ ಸ್ಥಳದಲ್ಲಿರುವ ಕಟ್ಟಡವನ್ನು ಯಥಾಸ್ಥಿತಿಯಲ್ಲಿರುವಂತೆ ಕಾಪಾಡಿಕೊಳ್ಳಲು ಕ್ರಮಕೈಗೊಳ್ಳಬೇಕೆಂದು ಜಿಲ್ಲಾಧಿಕಾರಿಗಳಿಗೆ, ತಾಲ್ಲೂಕು ಕಾರ್ಯನಿರ್ವಹಣಾಧಿಕಾರಿಗಳಿಗೆ ಮತ್ತು ತಹಶೀಲ್ದಾರ್ ಅವರಿಗೆ ಮನವಿ ನೀಡಲಾಗಿದೆ ಎಂದು ವಿಶ್ವ ಹಿಂದೂ ಪರಿಷತ್ ವಿಭಾಗ ಕಾರ್ಯದರ್ಶಿ ಶರಣ್ ಪಂಪ್ ವೆಲ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.