Advertisement
ನಗರದ ಮೇರಿಹಿಲ್ ಹೆಲಿಪ್ಯಾಡ್‌ಗೆ ಹೋಗುವ ರಸ್ತೆಯಲ್ಲಿ ಸಂಜೆ ವೇಳೆ ಸಂಚರಿಸುತ್ತಿದ್ದ ವೋಕ್ಸ್‌ವ್ಯಾಗನ್ ಕಾರಿನ ಮುಂಭಾಗದಲ್ಲಿ ಬೆಂಕಿ ಕಾಣಿಸಿಕೊಂಡಿತ್ತು. ಕಾರು ನಿಲ್ಲಿಸಿ ಕಾರಿನಲ್ಲಿದ್ದ ನಾಲ್ವರು ಕೂಡಲೇ ಕೆಳಗಿಳಿದಿದ್ದಾರೆ.
Related Articles
Advertisement
ನ. 10ರಂದು ಲೇಡಿಹಿಲ್‌ನ ಪೆಟ್ರೋಲ್ ಪಂಪ್‌ನಲ್ಲಿ ಪೆಟ್ರೋಲ್ ತುಂಬಿಸಲು ಸಾಲಿನಲ್ಲಿ ನಿಂತಿದ್ದ ಮಾರುತಿ-800 ಕಾರು ಬೆಂಕಿಗಾಹುತಿಯಾಗಿತ್ತು. ಸೆ. 28ರಂದು ಅಡ್ಯಾರ್‌ನಲ್ಲಿ ರಸ್ತೆ ಬದಿ ನಿಲ್ಲಿಸಿದ ಕೆಲವೇ ಹೊತ್ತಿನಲ್ಲಿ ಬಿಎಂಡಬ್ಲ್ಯು ಕಾರು ಬೆಂಕಿಗಾಹುತಿಯಾಗಿತ್ತು.
ಸೆ.5ರಂದು ರಾಷ್ಟ್ರೀಯ ಹೆದ್ದಾರಿ-66ರ ಸುರತ್ಕಲ್ ಎನ್‌ಐಟಿಕೆ ಎದುರು ಚಲಿಸುತ್ತಿದ್ದ ಬಿಎಂಡಬ್ಲ್ಯು ಕಾರು ಬೆಂಕಿಗಾಹುತಿಯಾಗಿತ್ತು. ಕಾರಿನಲ್ಲಿದ್ದವರು ಪ್ರಾಣಾಪಾಯದಿಂದ ಪಾರಾಗಿದ್ದರು.