Advertisement

Mangaluru: ಹಲವು ಪ್ರಕರಣಗಳಲ್ಲಿ ಭಾಗಿಯಾಗಿ ತಲೆಮರೆಸಿಕೊಂಡಿದ್ದ ಆರೋಪಿಗಳ ಸೆರೆ

09:52 PM Sep 06, 2024 | Team Udayavani |

ಮಂಗಳೂರು: ಹಲವು ಪ್ರಕರಣಗಳಲ್ಲಿ ಭಾಗಿಯಾಗಿ ನ್ಯಾಯಾಲಯಕ್ಕೆ ವಿಚಾರಣೆಗೆ ಹಾಜರಾಗದೇ ತಲೆಮರೆಸಿಕೊಂಡಿದ್ದ ನಾಲ್ಕು ಮಂದಿ ವಾರಂಟ್ ಆರೋಪಿಗಳನ್ನು ಮಂಗಳೂರು ಸಿಸಿಬಿ ಪೊಲೀಸರು ವಶಕ್ಕೆ ಪಡೆದು ಮುಂದಿನ ಕ್ರಮಕ್ಕಾಗಿ ಪಣಂಬೂರು, ಕೊಣಾಜೆ  ಹಾಗೂ ಉಳ್ಳಾಲ ಪೊಲೀಸ್ ಠಾಣೆಗೆ ಹಸ್ತಾಂತರಿಸಿದ್ದಾರೆ.

Advertisement

ಕೊಣಾಜೆ ಪೊಲೀಸ್ ಠಾಣೆಯಲ್ಲಿ ಕೊಲೆ ಯತ್ನ, ದನ ಕಳ್ಳತನ ಪ್ರಕರಣ ಹಾಗೂ ಬರ್ಕೆ ಪೊಲೀಸ್ ಠಾಣೆಯಲ್ಲಿ ಮಾದಕ ವಸ್ತು ಸೇವನೆಗೆ ಸಂಬಂಧಪಟ್ಟಂತೆ ಪ್ರಕರಣದಲ್ಲಿ ಭಾಗಿಯಾಗಿ ನ್ಯಾಯಾಲಯದಿಂದ ಜಾಮೀನಿನಲ್ಲಿ ಬಿಡುಗಡೆಗೊಂಡ ಬಳಿಕ ನ್ಯಾಯಾಲಯಕ್ಕೆ ವಿಚಾರಣೆಗೆ  ಸಮಯಕ್ಕೆ ಹಾಜರಾಗದೇ ತಲೆಮರೆಸಿಕೊಂಡಿದ್ದ ಮೂಲತಃ ಫರಂಗಿಪೇಟೆ ವಳಚ್ಚಿಲ್ ನವನಾಗಿದ್ದು ಕುದ್ರೋಳಿ ನಡುಪಳ್ಳಿ ಮಸೀದಿ ಬಳಿ ವಾಸವಿದ್ದ ಮುನಾವರ್ ಮುಸ್ತಾಕ್ ಆಲಿಯಾಸ್ ಮುನ್ನ(40)ನನ್ನು  ವಶಕ್ಕೆ ಪಡೆದು ಮುಂದಿನ ಕ್ರಮಕ್ಕಾಗಿ ಕೊಣಾಜೆ ಪೊಲೀಸ್ ಠಾಣೆಗೆ ಹಸ್ತಾಂತರಿಸಿದ್ದಾರೆ.

ಮಂಗಳೂರು ನಗರ ಕಮಿಷನರೇಟ್ ವ್ಯಾಪ್ತಿಯ ಹಾಗೂ ದಕ್ಷಿಣ ಕನ್ನಡ ಜಿಲ್ಲೆಯ ವಿವಿಧ ಪೊಲೀಸ್ ಠಾಣೆಗಳಲ್ಲಿ ದಾಖಲಾದ ಕಳವು, ಕೊಲೆ ಯತ್ನ, ಹಲ್ಲೆ ನಡೆಸಿದ ಪ್ರಕರಣಗಳು ಸೇರಿದಂತೆ ಸುಮಾರು 9 ಪ್ರಕರಣಗಳಲ್ಲಿ ಭಾಗಿಯಾಗಿ ನ್ಯಾಯಾಲಯದಿಂದ ಜಾಮೀನಿನಲ್ಲಿ ಬಿಡುಗಡೆಗೊಂಡ ಬಳಿಕ ನ್ಯಾಯಾಲಯಕ್ಕೆ ವಿಚಾರಣೆ ಸಮಯ ಹಾಜರಾಗದೇ ತಲೆಮರೆಸಿಕೊಂಡಿದ್ದ ಕುಖ್ಯಾತ ಆರೋಪಿ ಅಡ್ಯಾರ್ ಕೆಂಪುಗುಡ್ಡೆಯ ಮೊಹಮ್ಮದ್ ರಫೀಜ್ ಆಲಿಯಾಸ್ ಹಫೀಜ್ ಆಲಿಯಾಸ್ ಅಫ್ರಿದ್(23)ನನ್ನು ವಶಕ್ಕೆ ಪಡೆದು ಮುಂದಿನ ಕ್ರಮಕ್ಕಾಗಿ ಉಳ್ಳಾಲ ಪೊಲೀಸ್ ಠಾಣೆಗೆ ಹಸ್ತಾಂತರಿಸಲಾಗಿದೆ.

ಈತ ಮಂಗಳೂರು ನಗರ ಕಮಿಷನರೇಟ್ ವ್ಯಾಪ್ತಿಯ ಕೊಣಾಜೆ, ಉಳ್ಳಾಲ, ಕಂಕನಾಡಿ ನಗರ ಪೊಲೀಸ್ ಠಾಣೆಗಳಲ್ಲಿ ಹಾಗೂ ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳ ನಗರ, ಬಂಟ್ವಾಳ ಗ್ರಾಮಾಂತರ, ಪೊಲೀಸ್ ಠಾಣೆಗಳಲ್ಲಿನ ವಿವಿಧ ಕಡೆಗಳಲ್ಲಿ ಸರಕಾರಿ ಕಚೇರಿ, ಶಾಲೆ ಹಾಗೂ ಅಂಗಡಿಗಳಲ್ಲಿ ಕಳ್ಳತನ ನಡೆಸಿದ ಪ್ರಕರಣಗಳಲ್ಲಿ ಭಾಗಿಯಾಗಿರುವುದಲ್ಲದೇ ಕೊಲೆ ಯತ್ನ ನಡೆಸಿದ ಪ್ರಕರಣ ಸೇರಿದಂತೆ ಒಟ್ಟು 9 ಪ್ರಕರಣಗಳಲ್ಲಿ ಭಾಗಿಯಾಗಿ ನ್ಯಾಯಾಲಯದಿಂದ ಜಾಮೀನು ಪಡೆದು ಬಿಡುಗಡೆಗೊಂಡಿದ್ದವನು ನ್ಯಾಯಾಲಯಕ್ಕೆ ಹಾಜರಾಗದೇ ತಲೆಮರೆಸಿಕೊಂಡಿದ್ದ.

ಉಳ್ಳಾಲ ಪೊಲೀಸ್ ಠಾಣೆಯಲ್ಲಿ ದರೋಡೆ, ಕೊಲೆ ಯತ್ನ, ಕೊಲೆ, ವಂಚನೆ ಹಾಗೂ ಕೊಣಾಜೆ ಪೊಲೀಸ್ ಠಾಣೆಯಲ್ಲಿ ಮಾದಕ ವಸ್ತು ಸೇವನೆಗೆ ಸಂಬಂಧಪಟ್ಟ ಒಟ್ಟು 6 ಪ್ರಕರಣದಲ್ಲಿ ಭಾಗಿಯಾಗಿ ನ್ಯಾಯಾಲಯದಿಂದ ಜಾಮೀನಿನಲ್ಲಿ ಬಿಡುಗಡೆಗೊಂಡ ಬಳಿಕ ನ್ಯಾಯಾಲಯಕ್ಕೆ ವಿಚಾರಣೆ ಸಮಯ ಹಾಜರಾಗದೇ ತಲೆಮರೆಸಿಕೊಂಡಿದ್ದ ಕುಖ್ಯಾತ ಆರೋಪಿ ಕೋಟೆಕಾರ್ ನ ಮಹಮ್ಮದ್ ನೌಫಾಲ್  ಆಲಿಯಾಸ್ ಕಿಡ್ನಿ ನೌಫಾಲ್( 32)ನ್ನು ವಶಕ್ಕೆ ಪಡೆದು ಮುಂದಿನ ಕ್ರಮಕ್ಕಾಗಿ ಉಳ್ಳಾಲ ಪೊಲೀಸ್ ಠಾಣೆಗೆ ಹಸ್ತಾಂತರಿಸಲಾಗಿದೆ.

Advertisement

ಮಂಗಳೂರು ನಗರ ಕಮೀಷನರೇಟ್ ವ್ಯಾಪ್ತಿಯ ಪಣಂಬೂರು ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದ ಹಲ್ಲೆ ಪ್ರಕರಣದಲ್ಲಿ ಭಾಗಿಯಾಗಿ ನ್ಯಾಯಾಲಯದಿಂದ ಜಾಮೀನಿನಲ್ಲಿ ಬಿಡುಗಡೆಗೊಂಡ ಬಳಿಕ ನ್ಯಾಯಾಲಯಕ್ಕೆ ವಿಚಾರಣೆ ಸಮಯ ಹಾಜರಾಗದೇ ತಲೆಮರೆಸಿಕೊಂಡಿದ್ದ ಕಸಬಾ ಬೆಂಗರೆಯ ನೌಷಾದ್ ಆಲಿಯಾಸ್ ಬುಲೆಟ್ ನೌಷಾದ್ ನನ್ನು ವಶಕ್ಕೆ ಪಡೆದು ಮುಂದಿನ ಕ್ರಮಕ್ಕಾಗಿ ಪಣಂಬೂರು ಪೊಲೀಸ್ ಠಾಣೆಗೆ ಹಸ್ತಾಂತರಿಸಲಾಗಿದೆ.

ಪೊಲೀಸ್ ಆಯುಕ್ತ ಅನುಪಮ್ ಅಗರ್ ವಾಲ್ ಮಾರ್ಗದರ್ಶನದಲ್ಲಿ ಸಿಸಿಬಿ ಘಟಕದ ಎಸಿಪಿ  ಮನೋಜ್ ಕುಮಾರ್ ನಾಯ್ಕ್, ಪೊಲೀಸ್ ನಿರೀಕ್ಷಕ ಶ್ಯಾಮ್ ಸುಂದರ್ ಹೆಚ್ ಹಾಗೂ ಸಿಸಿಬಿ ಸಿಬಂದಿ ಕಾರ್ಯಾಚರಣೆ ನಡೆಸಿದ್ದರು.

Advertisement

Udayavani is now on Telegram. Click here to join our channel and stay updated with the latest news.

Next