Advertisement

Mangaluru; ಕಲಿ ಯೋಗೀಶನ ಸಹಚರರಿಬ್ಬರ ಸೆರೆ: ಪಿಸ್ತೂಲ್, ರಿವಾಲ್ವರ್ ವಶ

06:43 PM Jul 30, 2024 | Team Udayavani |

ಮಂಗಳೂರು: ನಗರದಲ್ಲಿ ಅಪರಾಧ ಕೃತ್ಯವನ್ನು ನಡೆಸುವ ಉದ್ದೇಶದಿಂದ ಅಕ್ರಮವಾಗಿ ಪಿಸ್ತೂಲ್, ರಿವಾಲ್ವರ್, ಸಜೀವ ಮದ್ದುಗುಂಡುಗಳು, ಮಾದಕ ವಸ್ತುಗಳನ್ನು ಹೊಂದಿದ್ದ ಕುಖ್ಯಾತ ಆರೋಪಿಗಳಿಬ್ಬರನ್ನು ಮಂಗಳೂರು ಸಿಸಿಬಿ ಪೊಲೀಸರು  ಮಂಗಳವಾರ (ಜುಲೈ 30) ದಸ್ತಗಿರಿ ಮಾಡಿದ್ದಾರೆ.

Advertisement

ವಿದೇಶದಲ್ಲಿ ತಲೆಮರೆಸಿಕೊಂಡಿರುವ ಭೂಗತ ಪಾತಕಿ ಕಲಿ ಯೋಗೀಶನ ಸಹಚರರಿಬ್ಬರು ಅಕ್ರಮ ಶಸ್ತ್ರಾಸ್ತ್ರವಾದ ಪಿಸ್ತೂಲ್, ರಿವಾಲ್ವರ್, ಸಜೀವ ಮದ್ದುಗುಂಡುಗಳನ್ನು, ಎಂಡಿಎಂಎ ಮಾದಕ ವಸ್ತುವನ್ನು ಹೊಂದಿದ್ದು ಇನ್ನೋವಾ ಕಾರಿನಲ್ಲಿ ಮಂಗಳೂರು ನಗರದಲ್ಲಿ ಅಪರಾಧ ಕೃತ್ಯವನ್ನು ನಡೆಸಲು ಸಂಚು ರೂಪಿಸಿರುವ ಕುರಿತು ಮಾಹಿತಿ ಪಡೆದ ಮಂಗಳೂರು ಸಿಸಿಬಿ ಪೊಲೀಸರು ಬಂಧಿಸಿದ್ದಾರೆ.

ಕಲಿ ಯೋಗೀಶನ ಸಹಚರರಾದ ಪೈವಳಿಕೆ ಗ್ರಾಮದ ಮೊಹಮ್ಮದ್ ಹನೀಫ್ ಯಾನೆ ಅಲ್ಲಿ ಮುನ್ನಾ (40) ಮತ್ತು ಸದ್ಯ ಬೆಂಗಳೂರಿನಲ್ಲಿ ವಾಸವಿರುವ ಬಾಳೆಪುಣಿ ಗ್ರಾಮದ ಮೊಹಮ್ಮದ್ ರಫೀಕ್ ಯಾನೆ ಮುಡಿಪು ರಫೀಕ್ (36) ಎಂಬವರನ್ನು ಬಂಧಿಸಿದ್ದಾರೆ. ಅವರಿಂದ 1 ಪಿಸ್ತೂಲ್,1 ರಿವಾಲ್ವರ್, 12 ಸಜೀವ ಮದ್ದುಗುಂಡುಗಳು, 42 ಗ್ರಾಂ ಮಾದಕ ವಸ್ತುವಾದ ಎಂಡಿಎಂಎ, ಇನ್ನೋವಾ ಕಾರು ಹಾಗೂ 3 ಮೊಬೈಲ್ ಫೋನುಗಳು, ಡಿಜಿಟಲ್ ತೂಕ ಮಾಪಕಗಳನ್ನು ವಶಪಡಿಸಿಕೊಳ್ಳಲಾಗಿದೆ.

ಆರೋಪಿ ಮೊಹಮ್ಮದ್ ಹನೀಫ್ ಎಂಬಾತ ಈ ಹಿಂದೆ ಮಂಗಳೂರು ನಗರದ ಸಂಜೀವ ಶೆಟ್ಟಿ ಬಟ್ಟೆ ಅಂಗಡಿಯಲ್ಲಿ ಶೂಟೌಟ್ ನಡೆಸಿದ ಪ್ರಕರಣ, ಪುತ್ತೂರು ರಾಜಧಾನಿ ಜ್ಯುವೆಲ್ಲರಿ ಶೂಟೌಟ್ ಪ್ರಕರಣ, ಕೇರಳದ ಕಾಸರಗೋಡು ಜಿಲ್ಲೆಯ ಬೇವಿಂಜೆಯ ಪಿಡಬ್ಲೂಡಿ ಕಂಟ್ರಾಕ್ಟರ್ ಮನೆಗೆ ಶೂಟೌಟ್ ನಡೆಸಿದ ಪ್ರಕರಣ ಸಹಿತ ಒಟ್ಟು 14 ಪ್ರಕರಣಗಳಲ್ಲಿ ಭಾಗಿಯಾಗಿದ್ದಾನೆ. ಈತನ ವಿರುದ್ಧ ಮಂಗಳೂರು ಉತ್ತರ, ಬರ್ಕೆ, ಉಳ್ಳಾಲ, ಪುತ್ತೂರು ನಗರ ಪೊಲೀಸ್ ಠಾಣೆಯಲ್ಲಿ ವಾರಂಟ್ ಜಾರಿಯಲ್ಲಿದೆ.

Advertisement

Udayavani is now on Telegram. Click here to join our channel and stay updated with the latest news.

Next