Advertisement
ಕಲ್ಲಾಪು ಪಟ್ಲ ನಿವಾಸಿ ಮೊಹಮ್ಮದ್ ನಿಝಾಮ್ ಯಾನೆ ನಿಜ್ಜಾ ಬಂಧಿತ ಆರೋಪಿ. ಆತನಿಂದ 254 ಗ್ರಾಂ ಗಾಂಜಾವನ್ನು ಮತ್ತು ಪೋನ್ ಸೇರಿ ಒಟ್ಟು 9,900 ರೂ. ಮೌಲ್ಯದ ಸೊತ್ತುಗಳನ್ನು ವಶಪಡಿಸಿಕೊಂಡು ಕಂಕನಾಡಿ ಪೊಲೀಸ್ ಠಾಣೆಯಲ್ಲಿ ಎನ್.ಡಿ.ಪಿ.ಎಸ್ ಕಾಯ್ದೆ ಪ್ರಕರಣ ದಾಖಲಿಸಲಾಗಿದೆ.
ಮಾರ್ಚ್ ತಿಂಗಳಲ್ಲಿ ಮಂಗಳೂರು ನಗರದ ದಕ್ಷಿಣ ಉಪ ವಿಭಾಗದ ಠಾಣಾ ವ್ಯಾಪ್ತಿಯಲ್ಲಿ ಒಟ್ಟು 56 ಸಂಶಯಾಸ್ಪದ ವ್ಯಕ್ತಿಗಳನ್ನು ಮಾದಕ ವಸ್ತು/ದ್ರವ್ಯ ಸೇವನೆ ವೈದ್ಯಕೀಯ ಪರೀಕ್ಷೆ ಮಾಡಿಸಿದ್ದು, ಅದರಲ್ಲಿ 26 ವ್ಯಕ್ತಿಗಳ ಪರೀಕ್ಷೆಯಲ್ಲಿ ಮಾದಕ ವಸ್ತು/ದ್ರವ್ಯ ಸೇವನೆ ದೃಢಪಟ್ಟಿದ್ದು ಆಯಾ ಠಾಣೆಗಳಲ್ಲಿ ಎನ್.ಡಿ.ಪಿ.ಎಸ್. ಕಾಯ್ದೆಯಡಿ ಪ್ರಕರಣ ದಾಖಲಾಗಿದೆ ಎಂದು ನಗರ ಪೊಲೀಸ್‌ಆಯುಕ್ತ ಅನುಪಮ್ ಅಗರ್‌ವಾಲ್ ತಿಳಿಸಿದ್ದಾರೆ.