Advertisement

ಮಂಗಳೂರು: ಅಧಿಕ ಬಾಡಿಗೆ ದರ ವಸೂಲಿ; 16 ಆಟೋ ರಿಕ್ಷಾ ಚಾಲಕರ ವಿರುದ್ಧ ಪ್ರಕರಣ

12:33 PM Apr 16, 2023 | Team Udayavani |

ಮಂಗಳೂರು: ನಿಗದಿತ ದರಕ್ಕಿಂತ ಅಧಿಕ ಬಾಡಿಗೆ ದರ ವಸೂಲಿ ಮಾಡಿದ ಹಿನ್ನೆಲೆ ಮಂಗಳೂರಿನಲ್ಲಿ 16 ಆಟೋ ರಿಕ್ಷಾ ಚಾಲಕರ ವಿರುದ್ಧ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ.

Advertisement

ಈ ಬಗ್ಗೆ ಸಾರ್ವಜನಿಕರಿಂದ ಹಲವಾರು ದೂರುಗಳು ಬಂದ ಹಿನ್ನೆಲೆಯಲ್ಲಿ ಶನಿವಾರ ರಾತ್ರಿ ಪೊಲೀಸರು ಪ್ರಯಾಣಿಕರ ಸೋಗಿನಲ್ಲಿ ಆಟೋರಿಕ್ಷಾದಲ್ಲಿ ಸಂಚರಿಸಿ ಪರಿಶೀಲಿಸಿದಾಗ ಅಧಿಕ ಬಾಡಿಗೆ ದರ ವಸೂಲಿ ಮಾಡುವುದು ಗೊತ್ತಾಗಿದೆ.

ಈ ಹಿನ್ನೆಲೆಯಲ್ಲಿ  ಪ್ರಕರಣ ದಾಖಲಿಸಿಕೊಳ್ಳಲಾಗಿದೆ. ಈ ಕಾರ್ಯಾಚರಣೆ ಮುಂದುವರೆಯಲಿದೆ ಎಂದು ಪೊಲೀಸ್ ಆಯುಕ್ತರು ತಿಳಿಸಿದ್ದಾರೆ.

Advertisement

Udayavani is now on Telegram. Click here to join our channel and stay updated with the latest news.

Next