Advertisement
ರೈಲು ಮಾರ್ಗದಲ್ಲಿ ಭೂಕುಸಿತ ಸಂಭವಿಸಿದ ಕ್ಷಣದಿಂದ ದುರಸ್ತಿ ಕಾರ್ಯಗಳನ್ನು ಆರಂಭಿಸಲಾಗಿದ್ದು, ಶನಿವಾರ ಭೂಕುಸಿತದ ಸ್ಥಳದಲ್ಲಿ ತಡೆಗೋಡೆ ಗೋಡೆ ಕಾಮಗಾರಿ ಪೂರ್ಣಗೊಂಡಿತ್ತು. ಹಳಿ ಮರುಸ್ಥಾಪನೆ ಕಾರ್ಯ ಬಹುತೇಕ ಪೂರ್ಣಗೊಂಡಿದ್ದು, ಅಂತಿಮ ಹಂತದ ಕಾಮಗಾರಿಗಳು ಭರದಿಂದ ನಡೆಯುತ್ತಿದೆ.
ದುರಸ್ತಿ ಕಾರ್ಯ ಬಹುತೇಕ ಪೂರ್ಣಗೊಂಡ ಹಿನ್ನೆಲೆಯಲ್ಲಿ ರವಿವಾರ ಪ್ರಾಯೋಗಿಕವಾಗಿ ಗೂಡ್ಸ್ ರೈಲು ಸಂಚಾರಕ್ಕೆ ಅವಕಾಶ ನೀಡಲಾಗಿದೆ. ದುರಸ್ತಿ ಕಾರ್ಯ ನಡೆಯುತ್ತಿರುವ ಸ್ಥಳ ಹಾಗೂ ಆಸುಪಾಸಿನಲ್ಲಿ 15 ಕಿ.ಮೀ. ವೇಗದಲ್ಲಿ ಗೂಡ್ಸ್ ರೈಲು ಪ್ರಾಯೋಗಿಕ ಓಡಾಟಕ್ಕೆ ಸದ್ಯಕ್ಕೆ ಅನುಮತಿ ನೀಡಲಾಗಿದೆ ಎನ್ನಲಾಗಿದ್ದು, ಆದರೆ ರೈಲ್ವೇ ಇಲಾಖೆಯಿಂದ ಅಧಿಕೃತಗೊಂಡಿಲ್ಲ. ದುರಸ್ತಿ ಕಾರ್ಯ ಪೂರ್ಣಗೊಂಡ ನಡೆದ ಬಳಿಕ ಪ್ರಯಾಣಿಕರ ರೈಲು ಸಂಚಾರಕ್ಕೂ ಅವಕಾಶ ನೀಡಲಾಗುತ್ತದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಶೀಘ್ರ ಕಾಮಗಾರಿ ಪೂರ್ಣಗೊಂಡು ಸಂಚಾರಕ್ಕೆ ತೆರೆದುಕೊಳ್ಳುವ ನಿರೀಕ್ಷೆ ಇದೆ.
Related Articles
Advertisement
ಉಪ್ಪಿನಂಗಡಿ: ಸತತವಾಗಿ ಸುರಿಯುತ್ತಿದ್ದ ಮಳೆಗೆ ನಿರಂತರ ಭೂ ಕುಸಿತ ಕಂಡಿದ್ದ ಶಿರಾಡಿ ಘಾಟ್ ಪ್ರದೇಶದ ಸಕಲೇಶಪುರ ತಾಲೂಕಿನ ಮಾರ್ನಳ್ಳಿ ದೊಡ್ಡತಪ್ಪುಲಿನಲ್ಲಿ ಪರಿಸ್ಥಿತಿ ಸುಧಾರಿಸಿದ್ದು, ರವಿವಾರ ವಾಹನಗಳ ಸಂಚಾರಕ್ಕೆ ಅವಕಾಶ ನೀಡಲಾಗಿದೆ.
ಹೆದ್ದಾರಿ ಅಗಲಗೊಳಿಸುವ ಕಾಮಗಾರಿ ಕಾರಣಕ್ಕೆ ಕತ್ತರಿಸಲ್ಪಟ್ಟ ಗುಡ್ಡಗಳ ಭಾಗದಲ್ಲಿ ಭಾರೀ ಮಳೆಗೆ ಕೆಲವು ದಿನಗಳಿಂದ ಭಾರೀ ಭೂ ಕುಸಿತವಾಗಿತ್ತು. ಸರಕಾರಿ ಬಸ್‌ಗಳು ಮಾತ್ರ ಪರ್ಯಾಯ ರಸ್ತೆಯಲ್ಲಿಯೇ ಸಂಚರಿಸುತ್ತಿದ್ದು, ಮಂಗಳೂರು – ಬೆಂಗಳೂರು ನಡುವೆ ನೇರ ರಸ್ತೆ ಸಂಚಾ ರಕ್ಕೆ ಅವಕಾಶ ಕಲ್ಪಿಸಬೇಕಾಗಿದೆ.