ಮಂಗಳೂರು: ರಾಜ್ಯದ ಪ್ರವಾಸೋದ್ಯಮದ ಸಾಧ್ಯತೆಗಳನ್ನು ಮತ್ತಷ್ಟು ಹೆಚ್ಚಿಸುವ ನಿಟ್ಟಿನಲ್ಲಿ ಮಂಗಳೂರು – ಬೆಂಗಳೂರು ನಡುವಣ ಪ್ರಕೃತಿಯ ರಮಣೀಯ ದೃಶ್ಯಗಳನ್ನು ವೀಕ್ಷಿಸಲು ಅನುಕೂಲವುಳ್ಳ ವಿಸ್ಟಾಡೋಮ್ ರೈಲು ಸಂಚಾರಕ್ಕೆ ರವಿವಾರ ಮಂಗಳೂರು ಜಂಕ್ಷನ್ ರೈಲು ನಿಲ್ದಾಣದಲ್ಲಿ ಹಸಿರು ನಿಶಾನೆ ತೋರಲಾಗುತ್ತಿದೆ.
ರೈಲು ಸಂಖ್ಯೆ 06540/06539 ಮಂಗಳೂರು ಜಂಕ್ಷನ್ – ಯಶವಂತಪುರ ಎಕ್ಸ್ ಪ್ರಸ್ ರೈಲಿಗೆ ಎರಡು ವಿಸ್ಟಾಡೋಮ್ ಬೋಗಿಗಳನ್ನು ಜೋಡಿಸಲಾಗಿದೆ.
ಬೆಳಗ್ಗೆ 9 ಗಂಟೆಗೆ ನಡೆಯುವ ಸರಳ ಸಮಾ ರಂಭದಲ್ಲಿ ಜಿಲ್ಲಾ ಉಸ್ತುವಾರಿ ಸಚಿವ ಕೋಟ ಶ್ರೀನಿವಾಸ ಪೂಜಾರಿ ಮುಖ್ಯ ಅತಿಥಿಯಾಗಿ ಭಾಗವಹಿಸುವರು. ಸಂಸದ ನಳಿನ್ ಕುಮಾರ್ ಕಟೀಲು ಅಧ್ಯಕ್ಷತೆ ವಹಿಸುವರು.
ಶಾಸಕ ವೇದವ್ಯಾಸ ಕಾಮತ್, ಮೇಯರ್ ಪ್ರೇಮಾನಂದ ಶೆಟ್ಟಿ ಹಾಗೂ ರೈಲ್ವೇ ಇಲಾಖೆಯ ಅಧಿಕಾರಿಗಳು ಉಪ ಸ್ಥಿತರಿರುವರು.
ವಿಸ್ಟಾಡೋಮ್ ಬೋಗಿಗಳ ರೈಲನ್ನು ದಕ್ಷಿಣ ಭಾರತದಲ್ಲಿ ಮೊದಲ ಬಾರಿಗೆ ಪರಿಚಯಿಸಲಾಗುತ್ತಿದೆ.