Advertisement

Mangaluru boat tragedy Fishermen declare bandh until missing fishermen found

11:15 PM Dec 02, 2020 | Team Udayavani |
ಮೀನುಗಾರಿಕಾ ಬೋಟ್ ಮುಳುಗಡೆಯಾಗಿ ನಾಪತ್ತೆಯಾದವರಲ್ಲಿ ಇನ್ನೂ ನಾಲ್ವರು ಪತ್ತೆಯಾಗದ ಹಿನ್ನಲೆಯಲ್ಲಿ ಮಂಗಳೂರು ಮೀನುಗಾರಿಕಾ ಬಂದರು ಸಂಪೂರ್ಣ ಬಂದ್ ಮಾಡಿ ಪ್ರತಿಭಟನೆ ಮಾಡಲಾಗುತ್ತಿದೆ. ಮೀನುಗಾರಿಕೆಗಾಗಿ ನಗರದ ಬಂದರಿನಿಂದ ತೆರಳಿದ್ದ ಪರ್ಸೀನ್‌ ಬೋಟ್‌ ಸೋಮವಾರ ರಾತ್ರಿ ಅರಬಿ ಸಮುದ್ರದಲ್ಲಿ ಮುಳುಗಡೆಯಾಗಿತ್ತು. ನಾಪತ್ತೆಯಾದ ಆರು ಮಂದಿಯಲ್ಲಿ ಇಬ್ಬರ ಮೃತದೇಹ ಪತ್ತೆಯಾಗಿದ್ದು, ಉಳಿದ ನಾಲ್ವರಿಗಾಗಿ ಶೋಧ ಮುಂದುವರಿದಿದೆ. ಬೋಟ್‌ ನಲ್ಲಿ ಒಟ್ಟು 25 ಮಂದಿ ತೆರಳಿದ್ದು, 19 ಮಂದಿ ಪಾರಾಗಿದ್ದಾರೆ. ನಾಪತ್ತೆಯಾದವರನ್ನು ಶೀಘ್ರವಾಗಿ ಪತ್ತೆ ಮಾಡಬೇಕು. ಉಳಿದ ನಾಲ್ವರು ಪತ್ತೆಯಾಗುವವರೆಗೆ ಮೀನು ವ್ಯವಹಾರ ಮಾಡುವುದಿಲ್ಲ ಎಂದು ಮೀನುಗಾರರು ಪ್ರತಿಭಟನೆ ನಡೆಸುತ್ತಿದ್ದಾರೆ.
Advertisement

Udayavani is now on Telegram. Click here to join our channel and stay updated with the latest news.

Next