ಮಂಗಳೂರು: ಅಡ್ಯಾರ್ ನಲ್ಲಿರುವ ಪೋಲಾರ್ ಐಸ್ ಕ್ರೀಂ ಸೂಪರ್ ಸ್ಟಾಕಿಸ್ಟ್ ಎಂಬ ನಂದಿನಿ ಐಸ್ ಕ್ರೀಂ ದಾಸ್ತಾನು ಕೇಂದ್ರಕ್ಕೆ ಇಂದು (ಮಾ.28) ಮುಂಜಾನೆ ಎರಡು ಗಂಟೆಯ ಸುಮಾರಿಗೆ ಬೆಂಕಿ ತಗಲಿ ಕೋಟ್ಯಂತರ ರೂ. ನಷ್ಟ ಸಂಭವಿಸಿದೆ.
Advertisement
ಘಟನೆಯ ಪರಿಣಾಮ ವಾಹನ ಸೇರಿದಂತೆ ಸುಮಾರು 5 ಕೋ.ರೂ ಮೌಲ್ಯದ ಸೊತ್ತುಗಳು ಬೆಂಕಿಗೆ ಆಹುತಿಯಾಗಿವೆ. ಶಾರ್ಟ್ ಸರ್ಕ್ಯೂಟ್ ನಿಂದಾಗಿ ಬೆಂಕಿ ತಗಲಿದೆ ಎನ್ನಲಾಗಿದ್ದು, ಮೂರು ಅಗ್ನಿಶಾಮಕ ವಾಹನಗಳು ಸುಮಾರು ನಾಲ್ಕು ತಾಸು ಕಾರ್ಯಾಚರಣೆ ನಡೆಸಿ ಬೆಂಕಿ ನಿಯಂತ್ರಿಸಿವೆ.
ಕಾರವಾರದಿಂದ ಕಾಸರಗೋಡಿನವರೆಗೆ ನಂದಿನಿ ಐಸ್ ಕ್ರ್ರೀಂ ವಿತರಿಸುವ ಕೇಂದ್ರ ಇದಾಗಿದೆ.