ಮಂಗಳೂರು: ಗೂಡ್ಸ್ ರೈಲಿನಡಿ ಬಿದ್ದು 17 ಎಮ್ಮೆಗಳು ದಾರುಣವಾಗಿ ಮೃತಪಟ್ಟ ಘಟನೆ ಜೋಕಟ್ಟೆ ಅಂಗರಗುಂಡಿ ಬಳಿ ಮೇ.14ರ ಭಾನುವಾರ ರಾತ್ರಿ 12 ಗಂಟೆಯ ಸುಮಾರಿಗೆ ಸಂಭವಿಸಿದೆ.
Advertisement
ಗೂಡ್ಸ್ ರೈಲು ಕಂಕನಾಡಿ ಕಡೆಯಿಂದ ಎಂಸಿಎಫ್ ಕಡೆ ಹೋಗುತ್ತಿತ್ತು.
ಕದ್ರಿ ಅಗ್ನಿಶಾಮಕ ದಳದವರು ಮೂರು ಎಮ್ಮೆಗಳನ್ನು ರಕ್ಷಿಸಿದ್ದು, ಸತತ ಮೂರು ಗಂಟೆ ಕಾರ್ಯಾಚರಣೆ ನಡೆದಿದೆ.
ಕೆಲವು ಎಮ್ಮೆಗಳು ಸುಮಾರು 25 ಅಡಿ ಆಳಕ್ಕೆ ಬಿದ್ದು ಮೃತಪಟ್ಟಿವೆ ಎಂದು ತಿಳಿದು ಬಂದಿದೆ.