Advertisement
ಮೈಸೂರಿನಲ್ಲಿದ್ದಾಗ 2 ತಿಂಗಳುಗಳಲ್ಲಿ 5 ಮೊಬೈಲ್‌ಗಳನ್ನು ಬಳಸಿದ್ದ. ಮೊಬೈಲ್‌ಗಳಲ್ಲಿದ್ದ ದತ್ತಾಂಶಗಳನ್ನು ಅಳಿಸುತ್ತಿದ್ದ. ಬಳಿಕ ಆ ಮೊಬೈಲ್‌ಗಳನ್ನು ಮಾರಾಟ ಮಾಡುತ್ತಿದ್ದ. ಕೆಲವು ಮೊಬೈಲ್‌ಗಳನ್ನು ಪೊಲೀಸರು ವಶಪಡಿಸಿಕೊಂಡಿದ್ದಾರೆ ಎಂದು ತಿಳಿದುಬಂದಿದೆ.
ಕುಕ್ಕರ್ ಬಾಂಬ್ ಸ್ಫೋಟ ಪ್ರಕರಣ ಇನ್ನೆರಡು ದಿನಗಳೊಳಗೆ ನ್ಯಾಯಾಲಯದ ಮೂಲಕ ಅಧಿಕೃತವಾಗಿ ಎನ್‌ಐಎಗೆ ಹಸ್ತಾಂತರವಾಗುವ ನಿರೀಕ್ಷೆಯಿದೆ. ಈಗಾಗಲೇ ರಾಜ್ಯ ಸರಕಾರ ಪ್ರಕರಣವನ್ನು ಎನ್‌ಐಎಗೆ ವಹಿಸಿದೆ. ಮುಂದಿನ ಹಂತವಾಗಿ ಮಂಗಳೂರಿನ ಜೆಎಂಎಫ್‌ಸಿ ನ್ಯಾಯಾಲಯ ಅಧಿಕೃತ ಆದೇಶ ಹೊರಡಿಸಲಿದೆ. ಬಳಿಕ ಎನ್‌ಐಎ ಪ್ರಕರಣ ದಾಖಲಿಸಲಿದೆ. ಇದನ್ನೂ ಓದಿ: “ದಿ ಕಾಶ್ಮೀರ್ ಫೈಲ್ಸ್” ಇದೊಂದು ಅಸಭ್ಯ ಚಿತ್ರ: IFFI ಚಿತ್ರೋತ್ಸವದಲ್ಲಿ ತೀರ್ಪುಗಾರ ನಡಾವ್ ಲ್ಯಾಪಿಡ್ ಅಭಿಪ್ರಾಯ