ಮಂಗಳೂರು: ‘ ಡ್ರಗ್ಸ್ ಫ್ರಿ ಮಂಗಳೂರು ” ಮಾಡುವ ನಿಟ್ಟಿನಲ್ಲಿ ಮಂಗಳೂರು ಸಿಸಿಬಿ ಪೊಲೀಸರು ನಡೆಸಿದ ಕಾರ್ಯಾಚರಣೆಯಲ್ಲಿ ಮುಂಬೈಯಿಂದ ಮಂಗಳೂರು ನಗರಕ್ಕೆ ನಿಷೇದಿತ ಮಾದಕ ವಸ್ತುವಾದ ಗಾಂಜಾವನ್ನು ಸಾಗಾಟ ಮಾತ್ತು ಮಾರಾಟ ಮಾಡುತ್ತಿದ್ದ ಆರೋಪಿಯನ್ನು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ.
ಮುಂಬೈಯಿಂದ ನಿಷೇದಿತ ಮಾದಕ ವಸ್ತುವಾದ ಗಾಂಜಾವನ್ನು ಖರೀದಿಸಿ ಮೂಲ್ಕಿ ಪರಿಸರದಲ್ಲಿ ಸಾರ್ವಜನಿಕರಿಗೆ ಹಾಗೂ ವಿದ್ಯಾರ್ಥಿಗಳಿಗೆ ಮಾರಾಟ ಮಾಡುತ್ತಿದ್ದ ಬಗ್ಗೆ ಖಚಿತ ಮಾಹಿತಿಯನ್ನು ಪಡೆದ ಮಂಗಳೂರು ಸಿಸಿಬಿ ಪೊಲೀಸರು ಮಂಗಳೂರು ನಗರದ ಮುಲ್ಕಿ ಬಪ್ಪನಾಡು ಪರಿಸರದಲ್ಲಿ ದಾಳಿ ನಡೆಸಿ ಅಕ್ರಮವಾಗಿ ಗಾಂಜಾ ಮಾದಕ ವಸ್ತುವನ್ನು ಸಾರ್ವಜನಿಕರಿಗೆ ಮಾರಾಟ ಮಾಡುತ್ತಿದ್ದ ಉಡುಪಿಯ ಅಂಬಲಪಾಡಿ ನಿವಾಸಿ ಅಖಿಲೇಶ್ (30)ಎಂಬಾತನನ್ನು ಬಂಧಿಸಿದ್ದಾರೆ.
ಬಂಧಿತ ಆರೋಪಿಯ ವಿರುದ್ಧ ಈ ಹಿಂದೆ ಮಂಗಳೂರು ಪೂರ್ವ ಪೊಲೀಸ್ ಠಾಣೆಯಲ್ಲಿ ಕಳವು ಪ್ರಕರಣ, ಉಡುಪಿ ಜಿಲ್ಲೆಯ ಮಲ್ಪೆ ಪೊಲೀಸ್ ಠಾಣೆಯಲ್ಲಿ ಮಾದಕ ವಸ್ತು ಮಾರಾಟದ ಪ್ರಕರಣ, ಹಿರಿಯಡ್ಕ ಪೊಲೀಸ್ ಠಾಣೆಯಲ್ಲಿ ಹಲ್ಲೆ ಪ್ರಕರಣ, ಉಡುಪಿ ಸೆನ್ ಕ್ರೈಂ ಪೊಲೀಸ್ ಠಾಣೆಯಲ್ಲಿ ಮಾದಕ ವಸ್ತು ಸೇವನೆ ಮಾಡಿದ ಪ್ರಕರಣ ಸೇರಿದಂತೆ ಒಟ್ಟು 6 ಪ್ರಕರಣಗಳು ದಾಖಲಾಗಿರುತ್ತದೆ.
ಈ ಮಾದಕ ವಸ್ತು ಗಾಂಜಾ ಮಾರಾಟದ ಆರೋಪಿಯ ಪತ್ತೆ ಕಾರ್ಯದಲ್ಲಿ ಸಿಸಿಬಿ ಘಟಕದ ಎಸಿಪಿ ಮನೋಜ್ ಕುಮಾರ್ ನಾಯ್ಕ್ ರವರ ನೇತೃತ್ವದಲ್ಲಿ ಪೊಲೀಸ್ ನಿರೀಕ್ಷಕರಾದ ಶ್ಯಾಮ್ ಸುಂದರ್ ಹೆಚ್ ಎಂ, ಪಿಎಸ್ಐಯವರಾದ ಸುದೀಪ್ ಎಂ ವಿ, ಎಎಸ್ಐಯವರಾದ ರಾಮ ಪೂಜಾರಿ, ಶೀನಪ್ಪ ಮತ್ತು ಸಿಸಿಬಿ ಸಿಬಂದಿ ಪಾಲ್ಗೊಂಡಿದ್ದರು.
Advertisement
ಬಂಧಿತನಿಂದ 1,62,000 ರೂ ಮೌಲ್ಯದ 6.7 ಕೆಜಿ ಗಾಂಜಾ, ಮೊಬೈಲ್ ಫೋನ್ ವಶ ಪಡಿಸಿಕೊಂಡಿದ್ದಾರೆ. ಈ ಬಗ್ಗೆ ಮುಲ್ಕಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿರುತ್ತದೆ.