Advertisement

ಮಂಗಳೂರು : ಸಿಸಿಬಿ ಪೊಲೀಸರಿಂದ 13 ಕೆಜಿ ಗಾಂಜಾ ಸಹಿತ ಇಬ್ಬರ ಬಂಧನ

04:18 PM Mar 13, 2023 | Team Udayavani |

ಮಂಗಳೂರು : ಮಹತ್ವದ ಕಾರ್ಯಾಚರಣೆ ನಡೆಸಿದ ಸಿಸಿಬಿ ಪೊಲೀಸರು 13 ಕೆಜಿ ಗಾಂಜಾ ಸಹಿತ ಇಬ್ಬರನ್ನು ಬಂಧಿಸಿದ್ದಾರೆ.

Advertisement

ಮಾರ್ಚ್ 11 ರಂದು ಸಂಜೆ ಕಂಕನಾಡಿ ರೈಲ್ವೆ ನಿಲ್ದಾಣದ ಬಳಿ ಗಾಂಜಾ ಸಾಗಾಟ ಮಾಡುತ್ತಿದ್ದ ಪಾಣೆಮಂಗಳೂರಿನ ಅಬ್ದುಲ್ ಸಾದಿಕ್(35) ಮತ್ತು ಬೆಳ್ತಂಗಡಿಯ ಕಕ್ಕಿಂಜೆಯ ನವಾಜ್ (24) ಎಂಬ ಆರೋಪಿಯನ್ನು ಬಂಧಿಸಿದ್ದಾರೆ.

ವಶ ಪಡಿಸಿಕೊಂಡ ಗಾಂಜಾ ಮೌಲ್ಯ 3,90,000 ಎಂದು ಪೊಲೀಸರು ಅಂದಾಜಿಸಿದ್ದು, ಮೊಬೈಲ್ ಗಳನ್ನೂ ವಶಕ್ಕೆ ಪಡೆಯಲಾಗಿದೆ.ಅಬ್ದುಲ್ ಸಾದಿಕ್ ವಿರುದ್ಧ ಮೈಸೂರಿನ ಲಷ್ಕರ್ ಮೊಹಲ್ಲಾ ಪೊಲೀಸ್ ಠಾಣೆಯಲ್ಲೂ ಈ ಹಿಂದೆ ಪ್ರಕರಣ ದಾಖಲಾಗಿತ್ತು. ಕಂಕನಾಡಿ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Advertisement

Udayavani is now on Telegram. Click here to join our channel and stay updated with the latest news.

Next