Advertisement
ಇದು ರಾಜ್ಯದ ಎರಡನೇ ಅತಿದೊಡ್ಡ ಹಾಗೂ ಮಂಗಳೂರಿನ ಇತಿಹಾಸದಲ್ಲೇ ಅತಿದೊಡ್ಡ ಡ್ರಗ್ಸ್ ವಶಪಡಿಸಿದ ಪ್ರಕರಣವಾಗಿದೆ. “ಡ್ರಗ್ಸ್ ಫ್ರೀ ಮಂಗಳೂರು’ ಮಾಡುವ ಉದ್ದೇಶ ಹೊಂದಿದ್ದೇವೆ. ಈಚೆಗೆ ರಾಜ್ಯ ಗೃಹಸಚಿವರೂ ಈ ನಿಟ್ಟಿನಲ್ಲಿ ಕಟ್ಟುನಿಟ್ಟಿನ ಸೂಚನೆ ನೀಡಿದ್ದರು. ಅದರಂತೆ ಈ ಕಾರ್ಯಾಚರಣೆ ನಡೆಸಲಾಗಿದೆ ಎಂದು ಮಂಗಳೂರು ಪೊಲೀಸ್ ಆಯುಕ್ತ ಅನುಪಮ್ ಅಗರ್‌ವಾಲ್ ಪತ್ರಿಕಾಗೋಷ್ಠಿಯಲ್ಲಿ ತಿಳಿಸಿದರು.
ಸಿಕ್ಕಿಬಿದ್ದದ್ದು ಹೇಗೆ?
2024ರ ಸೆ. 29ರಂದು ಮಂಗಳೂರು ಪೂರ್ವ ಪೊಲೀಸ್ ಠಾಣೆ ವ್ಯಾಪ್ತಿಯ ಪಂಪ್‌ವೆಲ್ ಬಳಿಯ ಲಾಡೊjಂದರಲ್ಲಿ ಮಾದಕ ವಸ್ತುವನ್ನು ಹೊಂದಿಕೊಂಡು ಸಾರ್ವಜನಿಕರಿಗೆ ಮಾರಾಟ ಮಾಡುತ್ತಿದ್ದ ತೊಕ್ಕೊಟ್ಟು ಪೆರ್ಮನ್ನೂರಿನ ಚೆಂಬುಗುಡ್ಡೆಯ ಹೈದರ್ ಅಲಿಯಾಸ್ ಹೈದರ್ ಅಲಿ(51)ಯನ್ನು ಬಂಧಿಸಿ 75 ಸಾ. ರೂ. ಮೌಲ್ಯದ 15 ಗ್ರಾಂ ಮಾದಕ ವಸ್ತು ಎಂಡಿಎಂಎ ಅನ್ನು ವಶಪಡಿಸಿಕೊಳ್ಳಲಾಗಿತ್ತು. ಆತನ ವಿರುದ್ಧ ಮಂಗಳೂರು ಪೂರ್ವ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಿ ತನಿಖೆಯನ್ನು ಮಂಗಳೂರು ಸಿಸಿಬಿ ಘಟಕಕ್ಕೆ ಹಸ್ತಾಂತರಿಸಲಾಗಿತ್ತು.
Related Articles
7 ಸಕ್ರಿಯವಿಲ್ಲದ ಸಿಮ್ ಕಾರ್ಡ್
ಪೀಟರ್ ಮನೆಯಿಂದ ಡ್ರಗ್ ಮಾತ್ರವಲ್ಲದೆ 3 ಮೊಬೈಲ್ ಫೋನುಗಳು, ಡಿಜಿಟಲ್ ತೂಕ ಮಾಪಕ, ಒಟ್ಟು 35 ಎಟಿಎಂ/ಡೆಬಿಟ್ ಕಾರ್ಡ್‌ಗಳು, 17 ಸಕ್ರಿಯವಿಲ್ಲದ ಸಿಮ್ ಕಾರ್ಡ್‌ಗಳು, 10 ವಿವಿಧ ಬ್ಯಾಂಕ್‌ಗಳ ಬ್ಯಾಂಕ್ ಖಾತೆ ಪುಸ್ತಕಗಳನ್ನು ವಶಪಡಿಸಿಕೊಳ್ಳಲಾಗಿದೆ. ಈತನ ವಿರುದ್ಧ ಈ ಹಿಂದೆ 2023ರಲ್ಲಿ ಬೆಂಗಳೂರಿನ ವಿದ್ಯಾರಣ್ಯಾಪುರ ಪೊಲೀಸ್ ಠಾಣೆಯಲ್ಲಿ ಡ್ರಗ್ಸ್ ಮಾರಾಟಕ್ಕೆ ಸಂಬಂಧಪಟ್ಟಂತೆ ಪ್ರಕರಣ ದಾಖಲಾಗಿರುತ್ತದೆ. ಈತನು ಬೆಂಗಳೂರು ನಗರ ಹಾಗೂ ರಾಜ್ಯದ ವಿವಿಧ ಕಡೆಗಳಿಗೆ ಹಾಗೂ ಕೇರಳಕ್ಕೂ ಮಾದಕ ವಸ್ತುವನ್ನು ಪೂರೈಸುತ್ತಿದ್ದ. ಈ ದಂಧೆಯಲ್ಲಿ ಹಲವರು ಭಾಗಿಯಾಗಿದ್ದು, ಈ ನಿಟ್ಟಿನಲ್ಲಿ ಪತ್ತೆ ಕಾರ್ಯ ಮುಂದುವರಿಯುವುದು ಎಂದು ಕಮಿಷನರ್ ತಿಳಿಸಿದ್ದಾರೆ.
Advertisement
ಪೀಟರ್ ಬೆಂಗಳೂರಿನಲ್ಲಿ ಸಣ್ಣಪುಟ್ಟ ಕೆಲಸ ಮಾಡಿಕೊಳ್ಳುವುದರ ಜತೆಗೆ ಡ್ರಗ್ ದಂಧೆಯಲ್ಲೂ ತೊಡಗಿಸಿಕೊಂಡಿದ್ದ. ಆತನ ಕುಟುಂಬವೂ ಬೆಂಗಳೂರಿನಲ್ಲೇ ಇದೆ. ಈತನ ವೀಸಾದ ಅವಧಿ ಎರಡು ವರ್ಷಗಳ ಹಿಂದೆಯೇ ಮುಗಿದಿತ್ತು. ಕಸದ ಜತೆ ಡ್ರಗ್ ಮಿಕ್ಸ್!
ಎಂಡಿಎಂಎ ಪೂರೈಕೆ ಕಸದ ರಾಶಿಯನ್ನು ಆಯ್ಕೆ ಮಾಡಿಕೊಳ್ಳುವ ಹೊಸ ತಂತ್ರ ಈ ಜಾಲದ್ದಾಗಿತ್ತು. ಕಸದ ರಾಶಿಯಲ್ಲಿ ಹಾಕಿ, ಅದರ ಲೊಕೇಶನ್, ಫೋಟೋವನ್ನು ಸಂಬಂಧಿಸಿದವರಿಗೆ ಕೊಡಲಾಗುತ್ತಿತ್ತು! ಇನ್ನಷ್ಟು ಬಂಧನ ಶೀಘ್ರ
ಪೀಟರ್‌ಗೆ ಡ್ರಗ್ ಪೂರೈಕೆ ಮಾಡುವ ವ್ಯಕ್ತಿಯ ಬಗ್ಗೆ ಮಾಹಿತಿ ಸಿಕ್ಕಿದೆ. ಸ್ಥಳೀಯವಾಗಿಯೂ ಹಲವು ಪೆಡ್ಲರ್‌ಗಳ ಮಾಹಿತಿ ಲಭ್ಯವಾಗಿದ್ದು, ಶೀಘ್ರದಲ್ಲಿ ಎಲ್ಲರನ್ನೂ ಬಂಧಿಸಲಾಗುವುದು ಎಂದು ಕಮಿಷನರ್ ತಿಳಿಸಿದರು.