Advertisement

ಚಾರ್ಮಾಡಿ ಘಾಟ್ ರಸ್ತೆ ಲಘು ವಾಹನ ಸಂಚಾರಕ್ಕೆ ಮುಕ್ತ

06:37 PM Sep 15, 2019 | Naveen |

ಮಂಗಳೂರು: ಚಾರ್ಮಾಡಿ ಘಾಟ್ ರಸ್ತೆಯಲ್ಲಿ ಲಘು ವಾಹನ ಸಂಚಾರವನ್ನು ಭಾನುವಾರದಿಂದ ಕೆಲವು ನಿಬಂಧನೆಗಳೊಂದಿಗೆ ಮುಂದಿನ ಆದೇಶದವರೆಗೆ ಮುಕ್ತಗೊಳಿಸಲು ದ.ಕ.ಜಿಲ್ಲಾಧಿಕಾರಿಯವರು ಆದೇಶ ಹೊರಡಿಸಿರುತ್ತಾರೆ.

Advertisement

ಕಾರು, ಜೀಪು, ಟೆಂಪೋ, ವ್ಯಾನ್, ಲಘು ಸರಕು ಸಾಗಾಟ ವಾಹನ (ಮಿನಿ ವ್ಯಾನ್) ದ್ವಿಚಕ್ರ ವಾಹನಗಳು ಹಾಗೂ ಆಂಬ್ಯುಲೆನ್ಸ್ ಗಳು ಮಾತ್ರ ಈ ರಸ್ತೆಯಲ್ಲಿ ಸಂಚರಿಸಲು ಸದ್ಯಕ್ಕೆ ಜಿಲ್ಲಾಡಳಿತ ಅನುಮತಿ ನೀಡಿದೆ..

ಮೇಲೆ ನಮೂದಿಸಿದ ಈ ಮಾದರಿಯ ವಾಹನಗಳು ಪ್ರತಿ ದಿನ ಬೆಳಗ್ಗೆ 6 ರಿಂದ ಸಂಜೆ 6ರವರೆಗೆ ಮಾತ್ರ ಈ ರಸ್ತೆಯಲ್ಲಿ ಸಂಚರಿಸಲು ಅವಕಾಶವಿದ್ದು, ಇವುಗಳ ವೇಗದ ಮಿತಿಯನ್ನು ಪ್ರತಿ ಘಂಟೆಗೆ 20 ಕಿ.ಮೀ. ಗಳಿಗೆ ನಿಗದಿಗೊಳಿಸಲಾಗಿದೆ.

ಈ ಭಾಗದಲ್ಲಿ ಬಹಳಷ್ಟು ಕಡೆ ಭೂ ಕುಸಿತದಿಂದಾಗಿ ಘಾಟಿ ರಸ್ತೆಗೆ ಗಂಭೀರ ಸ್ವರೂಪದ ಹಾನಿ ಉಂಟಾಗಿರುವುದರಿಂದ ಜಿಲ್ಲಾಡಳಿತ ನೀಡಿರುವ ನಿರ್ದೇಶನಗಳನ್ನು ಕಡ್ಡಾಯವಾಗಿ ಪಾಲಿಸಿ ವಾಹನ ಸವಾರರು ಎಚ್ಚರಿಕೆಯಿಂದ ತಮ್ಮ ವಾಹನಗಳನ್ನು ಚಲಾಯಿಸುವಂತೆ ಆದೇಶ ಪ್ರತಿಯಲ್ಲಿ ಸೂಚಿಸಲಾಗಿದೆ.

Advertisement

Udayavani is now on Telegram. Click here to join our channel and stay updated with the latest news.

Next