Advertisement
10 ಲಕ್ಷ ಜನಸಂಖ್ಯೆಯೊಳಗಿನ ನಗರಗಳ ಈ ಸ್ಪರ್ಧೆಯಲ್ಲಿ ಮಂಗಳೂರು ಸ್ಪರ್ಧಿಸಿತ್ತು. ಗುರುವಾರ ವೀಡಿಯೋ ಕಾನ್ಫರೆನ್ಸ್ ಮೂಲಕ ಕೇಂದ್ರ ವಸತಿ ಮತ್ತು ನಗರ ವ್ಯವಹಾರಗಳ ಸಚಿವ ಹರದೀಪ್ ಸಿಂಗ್ ಪುರಿ ಅವರು ಫಲಿತಾಂಶ ಪ್ರಕಟಿಸಿದರು.
Related Articles
Advertisement
ವಾಸಯೋಗ್ಯ ನಗರ 53.59
ಜೀವನ ಗುಣಮಟ್ಟ 54.78
ಆರ್ಥಿಕ ಸಾಮರ್ಥ್ಯ 11.96
ಸುಸ್ಥಿರತೆ 50.31
ಸಾರ್ವಜನಿಕರ ಸಹಭಾಗಿತ್ವ 76.40
ಪುರಭೆಯ ಕಾರ್ಯಕ್ಷಮತೆ 38.16
ಸೇವೆ 52.61
ಹಣಕಾಸು ವಿಭಾಗ 56.58
ತಾಂತ್ರಿಕತೆ 18.70
ಯೋಜನೆ 15.67
ಆಡಳಿತ 31.04
ಹೊಸದಿಲ್ಲಿಯಿಂದ ವೀಡಿಯೋ ಕಾನ್ಫರೆನ್ಸ್ ಮೂಲಕ ಸಚಿವರು ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರು. ಮಂಗಳೂರು ಮಹಾನಗರ ಪಾಲಿಕೆ ಮಂಗಳಾ ಸಭಾಂಗಣದಲ್ಲಿ ಇದರ ವೀಕ್ಷಣೆಗೆ ಅವಕಾಶ ಮಾಡಲಾಗಿತ್ತು. ಮೇಯರ್ ಪ್ರೇಮಾನಂದ ಶೆಟ್ಟಿ, ಉಪಮೇಯರ್ ಸುಮಂಗಲಾ ರಾವ್, ಸ್ಮಾರ್ಟ್ ಸಿಟಿ ಎಂಡಿ ಪ್ರಶಾಂತ್ ಕುಮಾರ್ ಮಿಶ್ರಾ, ಮನಪಾ ಸದಸ್ಯ ಸುಧೀರ್ ಶೆಟ್ಟಿ ಕಣ್ಣೂರು, ಸ್ಮಾರ್ಟ್‌ಸಿಟಿ ಅಧಿಕಾರಿಗಳು ಉಪಸ್ಥಿತರಿದ್ದರು.
6.5 ಸಾವಿರಕ್ಕೂ ಮಿಕ್ಕಿ ನಾಗರಿಕರು ಭಾಗಿ :
ನಗರದ 6,500ಕ್ಕೂ ಅಧಿಕ ನಾಗರಿಕರು ಸಮೀಕ್ಷೆಯಲ್ಲಿ ಪಾಲ್ಗೊಂಡಿದ್ದರು. ಬೆಂಗಳೂರು, ತುಮಕೂರು, ಹುಬ್ಬಳ್ಳಿ-ಧಾರವಾಡ, ದಾವಣಗೆರೆ, ಬೆಳಗಾವಿ, ತುಮಕೂರು, ಶಿವಮೊಗ್ಗದಲ್ಲಿಯೂ ಇದೇ ರೀತಿಯ ಸಮೀಕ್ಷೆ ನಡೆದಿತ್ತು.
ಬೆಂಗಳೂರು ನಂ.1 :
ಹೊಸದಿಲ್ಲಿ: ಕೇಂದ್ರ ನಗರಾಭಿವೃದ್ಧಿ ಸಚಿವಾಲಯವು ಬಿಡುಗಡೆ ಮಾಡಿರುವ ಸುಲಲಿತ ಜೀವನ ಸೂಚ್ಯಂಕದ ಪಟ್ಟಿಯಲ್ಲಿ ಬೆಂಗಳೂರು ಮೊದಲ ಸ್ಥಾನ ಪಡೆದಿದೆ. 10 ಲಕ್ಷಕ್ಕಿಂತ ಹೆಚ್ಚು ಜನಸಂಖ್ಯೆ ಇರುವ ನಗರಗಳ ಪೈಕಿ ಅದು ಮೊದಲ ಸ್ಥಾನ ಪಡೆದಿದ್ದರೆ, ಹುಬ್ಬಳ್ಳಿ-ಧಾರವಾಡ 37ನೇ ಸ್ಥಾನ ಗಳಿಸಿದೆ.
10 ಲಕ್ಷಕ್ಕಿಂತ ಕಡಿಮೆ ಜನಸಂಖ್ಯೆ ಇರುವ ನಗರಗಳ ಪಟ್ಟಿಯಲ್ಲಿ ದಾವಣಗೆರೆ 9ನೇ ಸ್ಥಾನ ಪಡೆದುಕೊಂಡಿದೆ. ಈ ಪಟ್ಟಿಯಲ್ಲಿ ಶಿಮ್ಲಾಕ್ಕೆ ಮೊದಲ ಸ್ಥಾನ ಸಿಕ್ಕಿದೆ.
ಕೇಂದ್ರ ನಗರಾಭಿವೃದ್ಧಿ ಸಚಿವಾಲಯ ಬಿಡುಗಡೆ ಮಾಡಿರುವ ಅಂಕಿ ಅಂಶಗಳ ಪ್ರಕಾರ ಸ್ಮಾರ್ಟ್ ಸಿಟಿ ಮಿಶನ್‌ನಡಿಯ ಒಟ್ಟು 111 ನಗರಗಳು ಈ ಪ್ರಕ್ರಿಯೆಯಲ್ಲಿ ಭಾಗಿಯಾಗಿದ್ದವು. ಒಟ್ಟು 15 ಅಂಶಗಳನ್ನು ಮುಂದಿಟ್ಟುಕೊಂಡು ಮೌಲ್ಯಮಾಪನ ಮಾಡಲಾಗಿದೆ. ಆದರೆ ಪಾಲಿಕೆಗಳ ಲೆಕ್ಕಾಚಾರದಲ್ಲಿ ಬಿಬಿಎಂಪಿ 31ನೇ ಸ್ಥಾನ ಗಳಿಸಿದೆ.
ಟಾಪ್ 5 ನಗರಗಳು :
ನಗರ ಅಂಕ
- ಬೆಂಗಳೂರು 66.70
- ಪುಣೆ 66.27
- ಅಹ್ಮದಾಬಾದ್ 64.87
- ಚೆನ್ನೈ 62.61
- ಸೂರತ್ 61.73
- 10 ಲಕ್ಷಕ್ಕಿಂತ ಹೆಚ್ಚು ಜನಸಂಖ್ಯೆ ಇರುವ ನಗರಗಳಲ್ಲಿ ಬೆಂಗಳೂರು ಟಾಪ್
- ಹುಬ್ಬಳ್ಳಿ-ಧಾರವಾಡ ಅವಳಿ ನಗರಕ್ಕೆ 37ನೇ ಸ್ಥಾನ
- 10 ಲಕ್ಷಕ್ಕಿಂತ ಕಡಿಮೆ ಜನಸಂಖ್ಯೆ ಇರುವ ನಗರಗಳ ಪಟ್ಟಿಯಲ್ಲಿ ದಾವಣಗೆರೆಗೆ 9ನೇ ಸ್ಥಾನ