Advertisement
ಡಿಜಿಟಲೀಕರಣಕ್ಕೆ ಪೂರಕವಾಗಿ ಸಂಘ ಮೂರು ವರ್ಷಗಳ ಹಿಂದೆ ನಗದು ರಹಿತ ಚಲೋ ಕಾರ್ಡ್ ಬಳಕೆಗೆ ತಂದಿತ್ತು. ಇದನ್ನು “ಡಿಕೆಬಿಒಎ ಸ್ಟೂಡೆಂಟ್ ಕಾರ್ಡ್’ ಆಗಿ ಪರಿವರ್ತಿಸಲಾಗುತ್ತಿದ್ದು, ಇದರಲ್ಲಿಯೂ ವಿದ್ಯಾರ್ಥಿಗಳಿಗೆ ಶೇ. 60 ರಿಯಾಯಿತಿ ದರದ ಪಾಸ್‌ಗಳು ದೊರೆಯಲಿವೆ. ಸಾರ್ವಜನಿಕ ಪ್ರಯಾಣಿಕರಿಗೆ ಶೇ. 10ರ ರಿಯಾಯಿತಿ ದೊರೆಯಲಿದೆ. ಶಾಲಾ ಕಾಲೇಜು ವಿದ್ಯಾರ್ಥಿಗಳು ಶೇ. 60 ರಿಯಾಯಿತಿಯೊಂದಿಗೆ 40 ಮತ್ತು 50 ಟ್ರಿಪ್‌ಗ್ಳ ಪಾಸ್ ಪಡೆದು ಪ್ರಯಾಣಿಸಬಹುದು.
Related Articles
Advertisement
ಸುರಕ್ಷೆಗೆ ಆದ್ಯತೆವಿದ್ಯಾರ್ಥಿಗಳು ಸೇರಿದಂತೆ ಪ್ರಯಾಣಿಕರ ಸುರಕ್ಷೆಗೆ ಆದ್ಯತೆ ನೀಡುವಂತೆ ಚಾಲಕರಿಗೆ ಸೂಚಿಸಲಾಗಿದೆ. ಈ ಬಗ್ಗೆ ಮಳೆಗಾಲದಲ್ಲಿ ವಿಶೇಷ ಜಾಗರೂಕತೆ ವಹಿಸಬೇಕು. ಫುಟ್‌ಬೋರ್ಡ್‌ನಲ್ಲಿ ನಿಲ್ಲಬಾರದು, ಟಿಕೆಟ್ ಮೆಶಿನ್ ಮುಖಾಂತರವೇ ಟಿಕೆಟ್ ನೀಡಬೇಕು, ಡಿಕೆಬಿಒಎ ಸ್ಟೂಡೆಂಟ್ ಕಾರ್ಡನ್ನು ಕಡ್ಡಾಯವಾಗಿ ಸ್ವೀಕರಿಸಬೇಕು. ಸಮವಸ್ತ್ರ ಧರಿಸಬೇಕು. ಕರ್ಕಶ ಹಾರನ್, ಟೇಪ್ ರೆಕಾರ್ಡರ್ ಬಳಸಬಾರದು, ಬಸ್ ಬೇ ಒಳಭಾಗದಲ್ಲಿಯೇ ಬಸ್‌ಗಳನ್ನು ನಿಲ್ಲಿಸಬೇಕು. ಪ್ರಯಾಣಿಕರೊಂದಿಗೆ ಸೌಜನ್ಯದಿಂದ ವರ್ತಿಸಬೇಕು. ವಿದ್ಯಾರ್ಥಿಗಳ ಬಗ್ಗೆ ಅಸಡ್ಡೆ, ನಿರ್ಲಕ್ಷ್ಯ ತೋರಿಸಬಾರದು ಮೊದಲಾದ ಸೂಚನೆಗಳನ್ನು ಈಗಾಗಲೇ ಬಸ್ ಚಾಲಕರು, ನಿರ್ವಾಹಕರಿಗೆ ನೀಡಲಾಗಿದೆ ಎಂದು ಅಝೀಝ್ ಪರ್ತಿಪಾಡಿ ತಿಳಿಸಿದರು. ಸಂಘದ ಪ್ರಧಾನ ಕಾರ್ಯದರ್ಶಿ ರಾಮಚಂದ್ರ ಪಿಲಾರ್, ಉಪಾಧ್ಯಕ್ಷ ಕೆ. ರಾಮಚಂದ್ರ ನಾಯಕ್, ಮಾಜಿ ಅಧ್ಯಕ್ಷ ದಿಲ್‌ರಾಜ್ ಆಳ್ವ ಪತ್ರಿಕಾಗೋಷ್ಠಿಯಲ್ಲಿದ್ದರು.