Advertisement
ನಗರದ ಸಂತ ಅಲೋಶಿಯಸ್ ಕಾಲೇಜಿನ ಉಪನ್ಯಾಸಕಿ, ಬಜಪೆ ನಿವಾಸಿ ಗ್ಲೋರಿಯಾ ರೋಡ್ರಿಗಸ್(23) ಮೃತಪಟ್ಟವರು.
Related Articles
ಗ್ಲೋರಿಯಾ ರೋಡ್ರಿಗಸ್ ಅವರ ದೇಹದ ಅಂಗಾಂಗವನ್ನು ದಾನ ಮಾಡುವ ಮೂಲಕ ಸಾವಿನಲ್ಲೂ ಸಾರ್ಥಕತೆ ಮೆರೆದಿದ್ದಾರೆ. ಕಣ್ಣು, ಹೃದಯ, ಚರ್ಮ, ಯಕೃತ್, ಎರಡು ಕಿಡ್ನಿ, ಶ್ವಾಸಕೋಶವನ್ನು ದಾನ ಮಾಡಲಾಗಿದೆ. ಯಕೃತ್(ಲಿವರ್) ಮಂಗಳೂರಿನ ಎಜೆ ಆಸ್ಪತ್ರೆಗೆ ನೀಡಲಾಗಿದೆ. ಶ್ವಾಸಕೋಶವನ್ನು ಬೆಂಗಳೂರಿನ ಬಿಜಿಎಸ್ ಆಸ್ಪತ್ರಗೆ ನೀಡಲಾಗಿದೆ. ಹೃದಯವನ್ನು ಬೆಂಗಳೂರಿನ ನಾರಾಯಣ ಹೃದಯಾಲಯಕ್ಕೆ ರವಾನಿಸಲಾಗಿದೆ. ಕಿಡ್ನಿಯನ್ನು ಕೆಎಂಸಿ ಆಸ್ಪತ್ರೆ ಮಣಿಪಾಲ ಹಾಗೂ ಚರ್ಮ ಹಾಗೂ ಕಣ್ಣುಗಳನ್ನು ಫಾದರ್ ಮುಲ್ಲರ್ ಆಸ್ಪತ್ರೆಯಲ್ಲಿ ಇಡಲಾಗಿದೆ.
Advertisement
ಅಪರೂಪದ ಕಾಯಿಲೆಫಾದರ್ ಮುಲ್ಲರ್ ಆಸ್ಪತ್ರೆಯ ವೈದ್ಯಕೀಯ ಅಧೀಕ್ಷಕ ಡಾ| ಉದಯ ಕುಮಾರ್ ಅವರು “ಉದಯವಾಣಿ’ಗೆ ಪ್ರತಿಕ್ರಿಯಿಸಿ “ಅನಾಫಿಲ್ಯಾಕ್ಟಿಕ್ ರಿಯಾಕ್ಷನ್ ಫುಡ್ ಅಲರ್ಜಿಯ ಅಂತಿಮ ಘಟ್ಟ . ಆಹಾರದ ಅಲರ್ಜಿಯಿಂದ ಸಾವು ಸಂಭವಿಸುವುದು ಅಪರೂಪದಲ್ಲಿ ಅಪರೂಪ. ಶೇ.50 ಜನರಲ್ಲಿ ಫುಡ್ ಅಲರ್ಜಿ ಇದ್ದು, ಆ ಬಗ್ಗೆ ಎಚ್ಚರ ವಹಿಸುತ್ತಾರೆ. ಹೆಚ್ಚಿನ ಪ್ರಮಾಣದಲ್ಲಿ ಅಲರ್ಜಿ ಇದ್ದಲ್ಲಿ ವೈದ್ಯರಿಂದ ಸಲಹೆ ಸೂಚನೆ ಪಡೆಯುವುದು ಉತ್ತಮ. ಗ್ಲೋರಿಯಾ ಸಾವು ಅನಿರೀಕ್ಷಿತವಾಗಿದ್ದು, ಸಾವಿನಲ್ಲಿ ಅಂಗಾಂಗ ದಾನ ಮಾಡುವ ಮೂಲಕ ಪೋಷಕರು ಶ್ರೇಷ್ಠ ಕಾರ್ಯ ಮಾಡಿದ್ದಾರೆ’ ಎಂದು ತಿಳಿಸಿದ್ದಾರೆ.