Advertisement
ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ, ಸಿಎಂ ಸಿದ್ದರಾಮಯ್ಯ, ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್, ಎಐಸಿಸಿ ರಾಜ್ಯ ಉಸ್ತುವಾರಿ ರಣದೀಪ್ ಸುರ್ಜೇವಾಲ, ರಾಜ್ಯದ ಹಲವು ಸಚಿವರು, ಶಾಸಕರು ಭಾಗವಹಿಸಿದ್ದಾರೆ. ರಾಜ್ಯದ ವಿವಿಧ ಜಿಲ್ಲೆಗಳಿಂದ ಕಾಂಗ್ರೆಸ್ ಕಾರ್ಯಕರ್ತರು ಆಗಮಿಸಿದ್ದಾರೆ.
ಸರಕಾರ ಹಿಂದೂ ವಿರೋಧಿ ನೀತಿ ಅನುಸರಿಸುತ್ತಿದೆ, ಶಾಸಕ ಭರತ್ ಶೆಟ್ಟಿ ಹಾಗೂ ವೇದವ್ಯಾಸ್ ಕಾಮತ್ ಮೇಲೆ ವಿನಾಕಾರಣ ಎಫ್ಐಆರ್ ದಾಖಲಿಸಿರುವುದನ್ನು ವಿರೋಧಿಸಿ ಎಂದು ವಿಮಾನ ನಿಲ್ದಾಣ ರಸ್ತೆಯ ಬೋಂದೆಲ್ ಬಳಿ ಪ್ರತಿಭಟನೆ ನಡೆಸಲು ಮುಂದಾದ ಮಂಗಳೂರು ಉತ್ತರ ಮಂಡಲ ಬಿಜೆಪಿ ಯುವ ಮೋರ್ಚಾ ಕಾರ್ಯಕರತರನ್ನು ಪೊಲೀಸರು ತಡೆದಿದ್ದಾರೆ. ಮುಖ್ಯಮಂತ್ರಿಗೆ ಘೇರಾವ್ ಹಾಕಲು ಯತ್ನ ಮಾಡಿದ್ದು ಬಿಗಿ ಪೊಲೀಸ್ ಭದ್ರತಾ ವ್ಯವಸ್ಥೆ ಕೈಗೊಳ್ಳಲಾಗಿತ್ತು.ಬಿತ್ತಿ ಪತ್ರ ಹಿಡಿದು ಸಿಎಂ ಹಾಗೂ ಕಾಂಗ್ರೆಸ್ ಸರಕಾರದ ವಿರುದ್ದ ಘೋಷಣೆಗಳನ್ನು ಕೂಗಿದ್ದಾರೆ.