Advertisement

ಮಂಗಳೂರು: ಅಪ್ರಾಪ್ತೆ ಮೇಲೆ ಲೈಂಗಿಕ ದೌರ್ಜನ್ಯ; ಆರೋಪಿಗೆ 5 ವರ್ಷ ಜೈಲು ಶಿಕ್ಷೆ

10:45 PM Jan 14, 2023 | Team Udayavani |

ಮಂಗಳೂರು: ಅಪ್ರಾಪ್ತೆ ಮೇಲೆ ಲೈಂಗಿಕ ದೌರ್ಜನ್ಯವೆಸಗಿದ ಅಪರಾಧಿಗೆ ಮಂಗಳೂರಿನ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ(ಪೋಕ್ಸೊ) ಹಾಗೂ ಎಫ್ ಟಿ ಎಸ್ ಸಿ 1 ನ್ಯಾಯಾಲಯದ ನ್ಯಾಯಾಧೀಶೆ ಮಂಜುಳಾ ಇಟ್ಟಿ ಅವರು ಐದು ವರ್ಷ ಶಿಕ್ಷೆ ವಿಧಿಸಿ ತೀರ್ಪು ನೀಡಿದ್ದಾರೆ.

Advertisement

ಮಂಗಳೂರು ಬಿಜೈ ಕಾಪಿಕಾಡು ನಿವಾಸಿ ಶೇಖರ ಆಲಿಯಾಸ್ ಜೆ.ಡಿ.ಚಂದ್ರ ಶೇಖರ್ ಶಿಕ್ಷೆಗೊಳಗಾದವನು. ಈತ 2022 ರ ಜೂ.21ರಂದು ಬೆಳಗ್ಗೆ ಹ್ಯಾಟ್ ಹಿಲ್ ಜಡ್ಜಸ್ ಕ್ವಾಟ್ರರ್ಸ್ ಪಾರ್ಕಿಂಗ್ ಸ್ಥಳದಲ್ಲಿ ಪೈಂಟಿಂಗ್ ಮಾಡುತ್ತಿದ್ದಾಗ ಬಾಲಕಿಯ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ್ದ. ಈ ಬಗ್ಗೆ ಮಂಗಳೂರಿನ ಮಹಿಳಾ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿ ಪೊಲೀಸ್ ಉಪನಿರೀಕ್ಷಕಿ ಶೀಕಲಾ ದೋಷಾರೋಪಣಾ ಪಟ್ಟಿ ಸಲ್ಲಿಸಿದ್ದರು.

ನ್ಯಾಯಾಧೀಶರು ಅಪರಾಧಿಗೆ ಪೋಕ್ಸೋ ಕಾಯಿದೆಯ ಕಲಂ8 ರಂತೆ 5 ವರ್ಷ ಸಾದಾ ಸಜೆ ಮತ್ತು ಒಂದು ಸಾವಿರ ರೂ. ದಂಡ ವಿಧಿಸಿ ಜ.13 ರಂದು ತೀರ್ಪು ನೀಡಿದ್ದಾರೆ. ಅಲ್ಲದೆ ನೊಂದ ಬಾಲಕಿಗೆ ಒಂದು ಲಕ್ಷ ರೂ. ಪರಿಹಾರ ನೀಡುವಂತೆಯೂ ಅದೇಶಿಸಿದ್ದಾರೆ. ಪ್ರಾಸಿಕ್ಯೂಷನ್ ಪರವಾಗಿ ಸರಕಾರಿ ಅಭಿಯೋಜಕಿ ಸಹನಾದೇವಿ ವಾದಿಸಿದ್ದರು.

ಇದನ್ನೂ ಓದಿ: ಸ್ಯಾಂಟ್ರೋ ರವಿಯನ್ನು ಪೂನಾದಿಂದ ಗುಜರಾತ್‌ಗೆ ಕರೆಸಿದ್ದು ಯಾರು?

ಪ್ರೊಪೋಸಲ್‏ಗೆ ನಿರೀಕ್ಷಿಸುತ್ತಿದ್ದೀರಾ? ಕನ್ನಡ ಮ್ಯಾಟ್ರಿಮೋನಿಯಲ್ಲಿ - ಉಚಿತ ನೋಂದಣಿ !

Advertisement

Udayavani is now on Telegram. Click here to join our channel and stay updated with the latest news.

Next