Advertisement

Mangaluru: ಸಿಪಿಐಎಂ ಬೃಹತ್ ಮೆರವಣಿಗೆ, ಪ್ರತಿಭಟನೆ

11:52 AM Dec 19, 2023 | Team Udayavani |

ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯ ಸಮಗ್ರ ಅಭಿವೃದ್ಧಿಗಾಗಿ ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಒತ್ತಾಯಿಸಿ ಸಿಪಿಐಎಂ ದಕ ಜಿಲ್ಲಾ ಸಮಿತಿ ವತಿಯಿಂದ ಮಂಗಳೂರಿನಲ್ಲಿ ಮಂಗಳವಾರ ಬೃಹತ್ ಪ್ರತಿಭಟನೆ ನಡೆಯಿತು.

Advertisement

ಅಂಬೇಡ್ಕರ್ ವೃತ್ತದಿಂದ ಮಿನಿ ವಿಧಾನ ಸೌಧದವರೆಗೆ ಬೃಹತ್ ಮೆರವಣಿಗೆ ನಡೆಯಿತು. ‌ಅನಂತರ ಬಹಿರಂಗ‌ ಸಭೆ ಜರಗಿತು.

ಸಿಪಿಐಎಂನ ಜೆ.ಬಾಲಕೃಷ್ಣ ಶೆಟ್ಟಿ ಅಧ್ಯಕ್ಷತೆ ವಹಿಸಿದ್ದರು. ಜಿಲ್ಲಾ ಕಾರ್ಯದರ್ಶಿ ಯಾದವ ಶೆಟ್ಟಿ ರಾಜ್ಯ ಸಮಿತಿ ಸದಸ್ಯ, ಡಿವೈಎಫ್ ಐ ನ ಮುನೀರ್ ಕಾಟಿಪಳ್ಲ, ವಸಂತ ಆಚಾರಿ, ಕೃಷ್ಣಪ್ಪ ಕೊಂಚಾಡಿ, ಸುಕುಮಾರ್ ತೊಕ್ಕೊಟ್ಟು, ಪದ್ಮಾವತಿ ಶೆಟ್ಟಿ, ಸದಾಶಿವ, ಜಯಂತಿ ಶೆಟ್ಟಿ, ರಮಣಿ ಮೂಡುಬಿದಿರೆ, ವಸಂತಿ, ಯೋಗೀಶ್ ಜೆಪ್ಪಿನ ಮೊಗರು, ಕೃಷ್ಣಪ್ಪ ಸಾಲ್ಯಾನ್ ಮೊದಲಾದವರು ಪಾಲ್ಗೊಂಡಿದ್ದರು.

Advertisement

Udayavani is now on Telegram. Click here to join our channel and stay updated with the latest news.

Next