Advertisement

Mangaluru: ಅತ್ಯಾಚಾರ ಪ್ರಕರಣ…ಆರೋಪಿ ಖುಲಾಸೆ

09:17 PM Apr 24, 2023 | Team Udayavani |

ಮಂಗಳೂರು: ಪುತ್ರಿಯರೇ ತಮ್ಮ ತಂದೆಯ ಮೇಲೆ ಆರೋಪ ಮಾಡಿದ್ದ ಅತ್ಯಾಚಾರ ಪ್ರಕರಣದಲ್ಲಿ ಆರೋಪಿಯನ್ನು ಖುಲಾಸೆಗೊಳಿಸಿ ನ್ಯಾಯಾಲಯ ಆದೇಶ ಹೊರಡಿಸಿದೆ.

Advertisement

ಕಾಟಿಪಳ್ಳದ ನಿವಾಸಿ ಅಬ್ದುಲ್‌ ಹಕೀಂ(48) ಖುಲಾಸೆಗೊಂಡ ಆರೋಪಿ. ತಾವು ಅಪ್ರಾಪ್ತರಾಗಿದ್ದ ಸಂದರ್ಭದಲ್ಲಿ ತಮ್ಮ ಮೇಲೆ ತಂದೆ ಅತ್ಯಾಚಾರ ಎಸಗಿರುವ ಬಗ್ಗೆ ಇಬ್ಬರು ಮಕ್ಕಳು ಮಂಗಳೂರಿನ ಮಹಿಳಾ ಠಾಣೆಯಲ್ಲಿ ಎರಡು ಪ್ರತ್ಯೇಕ ಪ್ರಕರಣ ದಾಖಲಿಸಿದ್ದರು. ಈ ಪೈಕಿ ಕಿರಿಯ ಮಗಳ ಆರೋಪ ಪ್ರಕರಣದಲ್ಲಿ ನ್ಯಾಯಾಲಯ ಎರಡು ತಿಂಗಳ ಹಿಂದೆ ಆರೋಪಿಯನ್ನು ಖುಲಾಸೆಗೊಳಿಸಿತ್ತು. ಹಿರಿಯ ಮಗಳ ಆರೋಪಕ್ಕೆ ಸಂಬಂಧಿಸಿದ ಪ್ರಕರಣದ ವಿಚಾರಣೆ ನಡೆಸಿದ ಮಂಗಳೂರಿನ ಹೆಚ್ಚುವರಿ ಸತ್ರ ಮತ್ತು ಎರಡನೇ ಎಫ್ಟಿಎಸ್‌ಸಿ ಪೋಕ್ಸೋ ನ್ಯಾಯಾಲಯದ ನ್ಯಾಯಾಧೀಶರಾದ ಕೆ.ಎಂ.ರಾಧಾಕೃಷ್ಣ ಅವರು ವಿಚಾರಣೆ ನಡೆಸಿ ಆರೋಪಿಯ ಮೇಲೆ ಆರೋಪ ಸಾಬೀತು ಮಾಡಲು ಯಾವುದೇ ಸರಿಯಾದ ಸಾಕ್ಷ್ಯಾಧಾರಗಳು ಇಲ್ಲ ಎಂದು ನಿರ್ಧರಿಸಿ ಆರೋಪಿಯನ್ನು ಬಿಡುಗಡೆ ಮಾಡಲು ಆದೇಶ ನೀಡಿದ್ದಾರೆ.

ಆರೋಪಿಯ ಪರವಾಗಿ ಲೆಕ್ಸ್‌ ಜ್ಯೂರಿಸ್‌ ಲಾ ಚೇಂಬರ್‌ ಮಂಗಳೂರಿನ ನ್ಯಾಯವಾದಿಗಳಾದ ಆಸಿಫ್‌ ಬೈಕಾಡಿ, ಮಹಮ್ಮದ್‌ ಅಸ್ಗರ್ ಮುಡಿಪು, ರುಬಿಯ ಅಖ್ತರ್‌, ಶ್ರೀನಿಧಿ  ಪ್ರಕಾಶ್‌, ನಿರೀಕ್ಷಾ ವಾದ ಮಂಡಿಸಿದ್ದರು.

Advertisement

Udayavani is now on Telegram. Click here to join our channel and stay updated with the latest news.

Next