Advertisement

ಬೆಂಗಳೂರಿನಿಂದ ಮಂಗಳೂರಿಗೆ ಮಾದಕ ವಸ್ತು ಸಾಗಾಟ : ಪೊಲೀಸರಿಂದ ಮಹಿಳೆ ಸೇರಿ ನಾಲ್ವರ ಸೆರೆ

09:44 PM Jun 15, 2022 | Team Udayavani |

ಮಂಗಳೂರು : ಮಾದಕ ವಸ್ತು ಸಿಂಥೆಟಿಕ್‌ ಡ್ರಗ್ಸ್ ಎಂಡಿಎಂಎಯನ್ನು ಬೆಂಗಳೂರಿನಿಂದ ಖರೀದಿಸಿ ಮಂಗಳೂರಿಗೆ ಕಾರಿನಲ್ಲಿ ಸಾಗಾಟ ಮಾಡುತ್ತಿದ್ದ ನಾಲ್ವರನ್ನು ಮಂಗಳೂರು ಸಿಸಿಬಿ ಪೊಲೀಸರು ಬಂಧಿಸಿದ್ದಾರೆ.

Advertisement

ಸಿಸಿಬಿ ಇನ್‌ಸ್ಪೆಕ್ಟರ್‌ ಮಹೇಶ್‌ ಪ್ರಸಾದ್‌ ಮತ್ತು ಪಿಎಸ್‌ಐ ಪ್ರದೀಪ್‌ ಟಿ. ಆರ್‌. ರವರ ನೇತೃತ್ವದ ಪೊಲೀಸರು ಮಂಗಳೂರಿನ ಪಡೀಲ್‌ ಬಳಿ ಕಾರನ್ನು ತಪಾಸಣೆ ಮಾಡಿದಾಗ ಮಾದಕ ವಸ್ತು ಪತ್ತೆಯಾಗಿದೆ.

ಕಾರಿನಲ್ಲಿದ್ದ ಉಪ್ಪಳದ ಮಹಮ್ಮದ್‌ ರಮೀಝ್ (24), ಕಾಸರಗೋಡಿನ ಮೊಹಮ್ಮದ್‌ ರಶೀದ್‌(24), ಉಪ್ಪಳದ ಅಬ್ದುಲ್‌ ರವೂಫ್(35) ಮತ್ತು ಬೆಂಗಳೂರಿನ ಸಬಿತಾ ಆಲಿಯಾಸ್‌ ಚಿಂಚು ಆಲಿಯಾಸ್‌ ಸಮೀರಾ (25) ಅವರನ್ನು ಬಂಧಿಸಲಾಗಿದೆ.

ಅವರಿಂದ ಒಟ್ಟು 125 ಗ್ರಾಂ ತೂಕದ 6 ಲಕ್ಷ ರೂ. ಮೌಲ್ಯದ ಎಂಡಿಎಂಎ ಮಾದಕ ವಸ್ತು, 6 ಮೊಬೈಲ್‌ ಫೋನ್‌ಗಳು, ಡಿಜಿಟಲ್‌ ತೂಕ ಮಾಪನ ಹಾಗೂ ಸಾಗಾಟಕ್ಕೆ ಉಪಯೋಗಿಸಿದ ಕಾರು ಸಹಿತ ಒಟ್ಟು 9,82,000 ರೂ. ಮೌಲ್ಯದ ಸೊತ್ತುಗಳನ್ನು ವಶಪಡಿಸಿಕೊಂಡಿದ್ದಾರೆ.

ಇದನ್ನೂ ಓದಿ : ಕೊರಟಗೆರೆ : ಬಡ ಕುಟುಂಬದ ವಿದ್ಯಾರ್ಥಿಗಳಿಗೆ ಉಚಿತ ನೋಟ್ ಬುಕ್ ವಿತರಣೆ

Advertisement

ಆರೋಪಿಗಳ ಪೈಕಿ ಮೊಹಮ್ಮದ್‌ ರಮೀಝ್ ವಿರುದ್ಧ ಈ ಹಿಂದೆ 2021ರಲ್ಲಿ ಕೊಣಾಜೆ ಠಾಣೆಯಲ್ಲಿ ಮಾದಕ ವಸ್ತುವನ್ನು ಹೊಂದಿದ ಬಗ್ಗೆ 2 ಪ್ರಕರಣ ದಾಖಲಾಗಿದೆ. ಈತ 6 ತಿಂಗಳ ಹಿಂದೆ ಜೈಲಿನಿಂದ ಬಿಡುಗಡೆಗೊಂಡಿದ್ದ. ಅಬ್ದುಲ್‌ ರವೂಫ್ ವಿರುದ್ಧ ಮಂಗಳೂರು ಗ್ರಾಮಾಂತರ ಪೊಲೀಸ್‌ ಠಾಣೆಯಲ್ಲಿ 2018ರಲ್ಲಿ ಮಾದಕ ವಸ್ತುಗಳ ಸಾಗಾಟ ಮತ್ತು ಅಕ್ರಮ ಶಸ್ತ್ರಾಸ್ತ್ರ ಹೊಂದಿದ್ದ ಪ್ರಕರಣ ದಾಖಲಾಗಿದೆ. ಅಲ್ಲದೆ ಕಾಸರಗೋಡು ಜಿಲ್ಲೆಯ ವಿದ್ಯಾನಗರ ಪೊಲೀಸ್‌ ಠಾಣೆಯಲ್ಲಿ ಹಲ್ಲೆ ಪ್ರಕರಣ ದಾಖಲಾಗಿದೆ. ಆರೋಪಿಗಳನ್ನು ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿದ್ದು, ಹೆಚ್ಚಿನ ತನಿಖೆಗಾಗಿ 7 ದಿನಗಳ ಕಾಲ ಪೊಲೀಸ್‌ ಕಸ್ಟಡಿಗೆ ಪಡೆಯಲಾಗಿದೆ. ಈ ಬಗ್ಗೆ ಸೆನ್‌ ಕ್ರೈಂ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Advertisement

Udayavani is now on Telegram. Click here to join our channel and stay updated with the latest news.

Next