Advertisement

ಮಂಗಳೂರು ಸಿಸಿಬಿ ಪೊಲೀಸರ ಕಾರ್ಯಾಚರಣೆ : ಮಾದಕ ವಸ್ತು ಸಾಗಾಟ ಮಾಡುತ್ತಿದ್ದ ಮೂವರು ವಶಕ್ಕೆ

03:57 PM Nov 03, 2022 | Team Udayavani |

ಮಂಗಳೂರು : ಮಾದಕ ವಸ್ತು ಸಾಗಾಟ ಮಾಡುತ್ತಿದ್ದ ಮೂವರನ್ನು ಮಂಗಳೂರು ಸಿಸಿಬಿ ಪೊಲೀಸರು ವಶಕ್ಕೆ ಪಡೆದ ಘಟನೆ ತಲಪಾಡಿ – ದೇವಿಪುರ ರಸ್ತೆಯ ತಚ್ಚಾಣಿ ಬಳಿ ಗುರುವಾರ ನಡೆದಿದೆ.
ಉಳ್ಳಾಲದ ಅಬ್ದುಲ್ ರೆಹಮಾನ್ ಅರ್ಪಾನ್ (24), ಬೊಕ್ಕಪಟ್ಣದ ಅಬ್ದುಲ್ ಜಲೀಲ್ (42), ಹಾಗೂ ಬೋಳಿಯಾರ್ ಗ್ರಾಮದ ಮೊಹಮ್ಮದ್ ಮನ್ಸೂರ್ (29) ಬಂಧಿತ ಆರೋಪಿಗಳು.

Advertisement

ಕೇರಳದ ಗಡಿಭಾಗದ ಮೂಲಕ ಕಾರೊಂದರಲ್ಲಿ ಮಾದಕ ವಸ್ತು ತುಂಬಿಕೊಂಡು ಮಂಗಳೂರು ನಗರಕ್ಕೆ ಮಾರಾಟ ಮಾಡಲು ಬರುತ್ತಿದ್ದ ಬಗ್ಗೆ ಖಚಿತ ಮಾಹಿತಿ ಪಡೆದ ಸಿಸಿಬಿ ಇನ್ಸ್ ಪೆಕ್ಟರ್ ಮಹೇಶ್ ಪ್ರಸಾದ್ ಮತ್ತು ಪಿಎಸ್ಐ ರಾಜೇಂದ್ರ ಬಿ ರವರ ನೇತ್ರತ್ವದ ಪೊಲೀಸರ ತಂಡ ತಲಪಾಡಿ – ದೇವಿಪುರ ರಸ್ತೆಯ ತಚ್ಚಾಣಿ ಬಳಿ ಕಾರನ್ನು ತಡೆದು ತಪಾಸಣೆ ಮಾಡಿದಾಗ ಮಾದಕ ವಸ್ತು ಪತ್ತೆಯಾಗಿದೆ.

ಘಟನೆಗೆ ಸಂಬಂಧಿಸಿ ಮೂವರನ್ನು ವಶಕ್ಕೆ ಪಡೆದ ಪೊಲೀಸರು ಆರೋಪಿಗಳಿಂದ ಒಟ್ಟು 32 ಗ್ರಾಂ ತೂಕದ ರೂ. 1,62,000/- ಮೌಲ್ಯದ ಎಂಡಿಎಂಎ ಮಾದಕ ವಸ್ತು , 4 ಮೊಬೈಲ್ ಫೋನ್, ಡಿಜಿಟಲ್ ಮಾಪನ, ನಗದು ರೂ. 22,000/- ಹಾಗೂ ಸಾಗಾಟಕ್ಕೆ ಉಪಯೋಗಿಸಿದ ಮಾರುತಿ ಇಗ್ನೀಸ್ ಕಾರನ್ನು ವಶಪಡಿಸಿಕೊಂಡಿದ್ದಾರೆ. ಪೊಲೀಸರು ವಶಪಡಿಸಿಕೊಂಡಿರುವ ವಸ್ತುಗಳ ಒಟ್ಟು ಮೌಲ್ಯ ರೂ 7,17,000 ಅಂದಾಜಿಸಲಾಗಿದೆ.

ಇದನ್ನೂ ಓದಿ : ಮರದ ಬಾಗಿಲಿನ ಒಳಗಿತ್ತು 2 ಸಾವಿರಕ್ಕೂ ಹೆಚ್ಚು ಮದ್ಯದ ಬಾಟಲಿಗಳು: ಸೊತ್ತು ಸಹಿತ ಇಬ್ಬರು ವಶ

ಆರೋಪಿಗಳು ಅಕ್ರಮವಾಗಿ ಮಾದಕ ವಸ್ತುಗಳನ್ನು ಖರೀದಿಸಿಕೊಂಡು ದೇರಳಕಟ್ಟೆ, ಮುಡಿಪು, ನೆತ್ತಿಲಪದವು, ತಲಪಾಡಿ, ಉಳ್ಳಾಲ ಹಾಗೂ ಮಂಗಳೂರು ನಗರ ಪರಿಸರದಲ್ಲಿ ಮಾರಾಟ ಮಾಡಲು ಬರುತ್ತಿದ್ದರೆನ್ನಲಾಗಿದೆ. ಆರೋಪಿಗಳ ವಿರುದ್ಧ ಸೆನ್ ಕ್ರೈಂ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು. ಆರೋಪಿಗಳನ್ನು ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿದ್ದು, ನ್ಯಾಯಾಂಗ ಬಂಧನ ವಿಧಿಸಲಾಗಿರುತ್ತದೆ.

Advertisement

ಆರೋಪಿಗಳ ಪೈಕಿ ಅಬ್ದುಲ್ ರೆಹಮಾನ್ ಅರ್ಪಾನ್ ಎಂಬಾತನ ವಿರುದ್ಧ ಈ ಹಿಂದೆ ಮಂಗಳೂರು ನಗರದ ಉಳ್ಳಾಲ ಹಾಗೂ ಮಂಗಳೂರು ದಕ್ಷಿಣ ಪೊಲೀಸ್ ಠಾಣೆಯಲ್ಲಿ ಒಟ್ಟು 7 ಪ್ರಕರಣಗಳು ದಾಖಲಾಗಿದೆ. ಆರೋಪಿ ಅಬ್ದುಲ್ ಜಲೀಲ್ ಎಂಬಾತನ ವಿರುದ್ದ ಈ ಹಿಂದೆ 1999 ರಲ್ಲಿ ವಿಟ್ಲ ಪೊಲೀಸ್ ಠಾಣೆಯಲ್ಲಿ ದರೋಡೆ ಪ್ರಕರಣ ದಾಖಲಾಗಿತ್ತು. ಆರೋಪಿ ಮೊಹಮ್ಮದ್ ಮನ್ಸೂರ್ ಎಂಬಾತನ ವಿರುದ್ಧ ಕೊಣಾಜೆ ಹಾಗೂ ಮಂಗಳೂರು ದಕ್ಷಿಣ ಪೊಲೀಸ್ ಠಾಣೆಯಲ್ಲಿ ಕೊಲೆ ಯತ್ನ ಪ್ರಕರಣ ದಾಖಲಾಗಿದೆ.

Advertisement

Udayavani is now on Telegram. Click here to join our channel and stay updated with the latest news.

Next