Advertisement

ಚಿಕಿತ್ಸೆ ಫ‌ಲಕಾರಿಯಾಗದೆ ಗಾಯಾಳು ಸಾವು: ವೈದ್ಯರ ನಿರ್ಲಕ್ಷ್ಯ ದೂರು

10:04 PM Jan 20, 2023 | Team Udayavani |

ಮಂಗಳೂರು : ನಗರದ ಖಾಸಗಿ ಆಸ್ಪತ್ರೆಯಲ್ಲಿ ದಾಖಲಾಗಿದ್ದ ಗಾಯಾಳು ಚಿಕಿತ್ಸೆ ಫ‌ಲಕಾರಿಯಾಗದೆ ಮೃತಪಟ್ಟಿದ್ದು ಇದಕ್ಕೆ ವೈದ್ಯರ ನಿರ್ಲಕ್ಷ್ಯ ಕಾರಣವಾಗಿರುವ ಬಗ್ಗೆ ಪ್ರಕರಣ ದಾಖಲಾಗಿದೆ.

Advertisement

2022ರ ಜು.10ರಂದು ಕೇರಳ ಕಣ್ಣೂರು ಪೊಲೀಸ್‌ ಠಾಣಾ ವ್ಯಾಪ್ತಿಯಲ್ಲಿ ಸ್ಕೂಟರ್‌ ಮತ್ತು ಪಿಕ್‌ ಅಪ್‌ ವಾಹನ ನಡುವಿನ ಅಪಘಾತದಲ್ಲಿ ಸಬೀನ್‌ ಗಾಯಗೊಂಡಿದ್ದರು. ಅವರನ್ನು ಪ್ರಥಮ ಚಿಕಿತ್ಸೆಗೆ ಕಣ್ಣೂರು ಸರಕಾರಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಅನಂತರ ಹೆಚ್ಚಿನ ಚಿಕಿತ್ಸೆಗೆ ಅಲ್ಲಿನ ಖಾಸಗಿ ಆಸ್ಪತ್ರೆಗೆ ಬಳಿಕ ಮಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಯಿತು. ಅವರು ಚಿಕಿತ್ಸೆ ಫ‌ಲಕಾರಿಯಾಗದೆ ಜು. 20ರಂದು ಮೃತಪಟ್ಟಿದ್ದರು. ಅವರ ಶವ ಪರೀಕ್ಷೆ ನಡೆಸಿದ ವೈದ್ಯರು ಸಬೀನ್‌ ಅವರ ಸಾವಿಗೆ ಶಸ್ತ್ರ ಚಿಕಿತ್ಸೆ ನಡೆಸಿದ ವೈದ್ಯರ ನಿರ್ಲಕ್ಷ್ಯ ಕಾರಣವೆಂದು ಹೇಳಿರುವುದಾಗಿ ಗುರುವಾರ ಮಂಗಳೂರು ಪೂರ್ವ ಠಾಣೆಗೆ ದೂರು ನೀಡಲಾಗಿದೆ.

ಇದನ್ನೂ ಓದಿ: ರಾಜಕೀಯ ಟಾಕ್ ವಾರ್ ಗುಣಮಟ್ಟದ್ದಾಗಿರಬೇಕು: ಅಮರೇಗೌಡ ಪಾಟೀಲ ಬಯ್ಯಾಪೂರ

ಪ್ರೊಪೋಸಲ್‏ಗೆ ನಿರೀಕ್ಷಿಸುತ್ತಿದ್ದೀರಾ? ಕನ್ನಡ ಮ್ಯಾಟ್ರಿಮೋನಿಯಲ್ಲಿ - ಉಚಿತ ನೋಂದಣಿ !

Advertisement

Udayavani is now on Telegram. Click here to join our channel and stay updated with the latest news.

Next