Advertisement

ಮಂಗಳೂರು: 1.48 ಕೋ.ರೂ. ನಗದು, 40 ಲಕ್ಷ ರೂ. ಮೌಲ್ಯದ ಚಿನ್ನ ಪತ್ತೆ: ಓರ್ವ ಸೆರೆ

08:53 AM Jan 25, 2022 | Team Udayavani |

ಮಂಗಳೂರು: ಸೂಕ್ತ ದಾಖಲೆ ಪತ್ರಗಳಿಲ್ಲದೆ ರೈಲಿನಲ್ಲಿ ಅಕ್ರಮವಾಗಿ ಸಾಗಿಸುತ್ತಿದ್ದ 1,48,58,000 ರೂ. ನಗದು ಹಾಗೂ 40 ಲಕ್ಷ ರೂ. ಮೌಲ್ಯದ 800 ಗ್ರಾಂ ಚಿನ್ನಾಭರಣಗಳನ್ನು ಮಂಗಳೂರು ಜಂಕ್ಷನ್‌ ರೈಲು ನಿಲ್ದಾಣದಲ್ಲಿ ಮಂಗಳೂರು ರೈಲ್ವೇ ಪೊಲೀಸರು ರವಿವಾರ ಪತ್ತೆ ಹಚ್ಚಿ ವಶಪಡಿಸಿಕೊಂಡು ಓರ್ವನನ್ನು ಬಂಧಿಸಿದ್ದಾರೆ.

Advertisement

ರಾಜಸ್ಥಾನದ ಮಹೇಂದ್ರ ಸಿಂಗ್‌ (35) ಬಂಧಿತ ಆರೋಪಿ. ಈತ ಮಹಾರಾಷ್ಟ್ರದ ಪನ್ವೆಲ್‌ನಿಂದ ಕೇರಳದ ಕೋಝಿಕೋಡ್‌ಗೆ ರೈಲು ಟಿಕೆೆಟ್‌ ಪಡೆದು ಸಂಚರಿಸುತ್ತಿದ್ದ.

ಗಣರಾಜ್ಯೋತ್ಸವದ ಹಿನ್ನೆಲೆಯಲ್ಲಿ ಮಂಗಳೂರು ಸೆಂಟ್ರಲ್‌ ಮತ್ತು ಮಂಗಳೂರು ಜಂಕ್ಷನ್‌ ರೈಲು ನಿಲ್ದಾಣಗಳ‌ಲ್ಲಿ ಪ್ರಯಾಣಿಕರ ಬಿಗಿ ತಪಾಸಣೆ ನಡೆಯುತ್ತಿದೆ. ಕೇರಳ ಕಡೆಗೆ ಹೋಗುತ್ತಿದ್ದ ಡುರೊಂಟೊ ಎಕ್ಸ್‌ಪ್ರೆಸ್‌ ರೈಲಿನ ಪ್ರಯಾಣಿಕರನ್ನು ಮಂಗಳೂರು ಜಂಕ್ಷನ್‌ನಲ್ಲಿ ರೈಲು ನಿಂತಿದ್ದ ಸಂದರ್ಭದಲ್ಲಿ ತಪಾಸಣೆ ನಡೆಸುತ್ತಿದ್ದಾಗ ಈ ಹಣ ಅಕ್ರಮ ಸಾಗಾಟ ಪ್ರಕರಣ ಪತ್ತೆಯಾಗಿದೆ.

ಆರೋಪಿಯ ಬಳಿಯಿದ್ದ ಕಪ್ಪು ಬಣ್ಣದ ಬ್ಯಾಗ್‌ ತಪಾಸಣೆ ನಡೆಸಿದಾಗ ಅದರಲ್ಲಿ ಈ ನಗದು ಮತ್ತು ಚಿನ್ನಾಭರಣ ಸಿಕ್ಕಿದೆ.

ಮಂಗಳೂರು ರೈಲ್ವೇ ಪೊಲೀಸ್‌ ಇನ್‌ಸ್ಪೆಕ್ಟರ್‌ ಮೋಹನ್‌ ಕೊಟ್ಟಾರಿ ಮತ್ತು ಸಿಬಂದಿ ಆರ್‌ಪಿಎಫ್‌ ಪೊಲೀಸ್‌ ಠಾಣೆಯ ಸಿಬಂದಿ ಜಂಟಿಯಾಗಿ ಈ ಕಾರ್ಯಾಚರಣೆ ನಡೆಸಿದ್ದಾರೆ.

Advertisement

ಪ್ರೊಪೋಸಲ್‏ಗೆ ನಿರೀಕ್ಷಿಸುತ್ತಿದ್ದೀರಾ? ಕನ್ನಡ ಮ್ಯಾಟ್ರಿಮೋನಿಯಲ್ಲಿ - ಉಚಿತ ನೋಂದಣಿ !

Advertisement

Udayavani is now on Telegram. Click here to join our channel and stay updated with the latest news.

Next