Advertisement

ಮಂಗಳೂರು: ವೈದ್ಯರು, ವಿದ್ಯಾರ್ಥಿಗಳ ಡ್ರಗ್ಸ್‌ ಪ್ರಕರಣ: 23 ಆರೋಪಿಗಳಿಗೆ ಜಾಮೀನು

10:43 PM Feb 01, 2023 | Team Udayavani |

ಮಂಗಳೂರು: ನಗರದಲ್ಲಿ ಇತ್ತೀಚೆಗೆ ಮಾದಕ ವಸ್ತು ಸೇವನೆ ಮತ್ತು ಮಾರಾಟ ಪ್ರಕರಣಕ್ಕೆ ಸಂಬಂಧಿಸಿ ಬಂಧಿಸಲ್ಪಟ್ಟಿದ್ದ ಒಟ್ಟು ನಾಲ್ವರು ವೈದ್ಯರು ಮತ್ತು 19 ವೈದ್ಯಕೀಯ ವಿದ್ಯಾರ್ಥಿಗಳಿಗೆ ನ್ಯಾಯಾಲಯ ಜಾಮೀನು ಮಂಜೂರು ಮಾಡಿದೆ.

Advertisement

ವೈದ್ಯರು ಮತ್ತು ವಿದ್ಯಾರ್ಥಿಗಳು ಸೇರಿದಂತೆ ಒಟ್ಟು 24 ಮಂದಿಯನ್ನು ಬಂಧಿಸಲಾಗಿತ್ತು. ಈ ಪೈಕಿ ವೈದ್ಯಕೀಯ (ಬಿಡಿಎಸ್‌) ವಿದ್ಯಾರ್ಥಿ ಸಾಗರೋತ್ತರ ಭಾರತೀಯ ಪ್ರಜೆ ಯುನೈಟೆಡ್‌ ಕಿಂಗ್‌ಡಮ್‌ನ ನೀಲ್‌ ಕಿಶೋರಿಲಾಲ್‌ ರಾಮ್‌ ಜಿ ಶಾ (38) ಹೊರತುಪಡಿಸಿ ಉಳಿದವರಿಗೆ ಮಂಗಳೂರಿನ ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ ಜಾಮೀನು ಮಂಜೂರು ಮಾಡಿದೆ. 13 ಮಂದಿಗೆ ಇತ್ತೀಚೆಗೆ ಜಾಮೀನು ಮಂಜೂರಾಗಿತ್ತು.

ಮಂಗಳವಾರ 10 ಮಂದಿ ಆರೋಪಿಗಳಿಗೆ ಜಾಮೀನು ಮಂಜೂರಾಗಿದೆ. ನೀಲ್‌ ಕಿಶೋರಿಲಾಲ್‌ ರಾಮ್‌ ಜಿ ಶಾ ಈ ಪ್ರಕರಣದ ಪ್ರಮುಖ ಆರೋಪಿಯಾಗಿದ್ದು, ನ್ಯಾಯಾಂಗ ಬಂಧನದಲ್ಲಿದ್ದಾನೆ ಎಂದು ಪೊಲೀಸ್‌ ಮೂಲಗಳು ತಿಳಿಸಿವೆ.

ಇದನ್ನೂ ಓದಿ : ಚಿನ್ನದ ಬ್ರೇಸ್‌ಲೆಟ್‌ ಹಿಂತಿರುಗಿಸಿ ಪ್ರಾಮಾಣಿಕತೆ ಮೆರೆದ ಬ್ಲೂ ಫ್ಲ್ಯಾಗ್ ಸಿಬಂದಿ

Advertisement

Udayavani is now on Telegram. Click here to join our channel and stay updated with the latest news.

Next