Advertisement

ಮಂಗಳೂರು: ಎಂಡಿಎಂಎ ಮಾರಾಟ ಸಾಗಾಟ; ಆರೋಪಿಗಳಿಗೆ ನ್ಯಾಯಾಂಗ ಬಂಧನ,ಇತರರಿಗಾಗಿ ಮುಂದುವರಿದ ಶೋಧ

07:51 PM Nov 03, 2022 | Team Udayavani |

ಮಂಗಳೂರು: ನಿಷೇಧಿತ ಮಾದಕ ವಸ್ತು ಎಂಡಿಎಂಎಅನ್ನು  ಮಂಗಳೂರು ನಗರದಲ್ಲಿ  ಸಾಗಾಟ/ಮಾರಾಟಕ್ಕೆ ಯತ್ನಿಸಿ ಬಂಧಿತರಾಗಿದ್ದ ಮೂವರು ಆರೋಪಿಗಳನ್ನು ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿದ್ದು, ನ್ಯಾಯಾಂಗ ಬಂಧನ ವಿಧಿಸಲಾಗಿದೆ. ಈ ಪ್ರಕರಣದಲ್ಲಿ ಇನ್ನೂ ಹಲವು ಆರೋಪಿಗಳು ಭಾಗಿಯಾಗಿದ್ದು, ಪತ್ತೆ ಕಾರ್ಯ ಮುಂದುವರಿದಿದೆ ಎಂದು ಪೊಲೀಸರು ತಿಳಿಸಿದ್ದಾರೆ.

Advertisement

ಕೇರಳದ ಗಡಿಭಾಗದ ಮೂಲಕ ಕಾರೊಂದರಲ್ಲಿ ಮಾದಕ ವಸ್ತು ಎಂಡಿಎಂಎಯನ್ನು ಮಂಗಳೂರು ನಗರಕ್ಕೆ ಮಾರಾಟ ಮಾಡಲು ಬರುತ್ತಿದ್ದ ಬಗ್ಗೆ ಖಚಿತ ಮಾಹಿತಿ ಹಿನ್ನೆಲೆಯಲ್ಲಿ ಸಿಸಿಬಿ ಇನ್ಸ್‌ ಪೆಕ್ಟರ್‌ ಮಹೇಶ್‌ ಪ್ರಸಾದ್‌ ಮತ್ತು ಪಿಎಸ್‌ಐ ರಾಜೇಂದ್ರ ಬಿ.ನೇತೃತ್ವದ ತಂಡ ಮಂಗಳೂರು ಸಿಸಿಬಿ ಪೊಲೀಸರು ತಲಪಾಡಿ – ದೇವಿಪುರ ರಸ್ತೆಯ ತಚ್ಚಾಣಿ ಬಳಿ ಕಾರನ್ನು ತಪಾಸಣೆ ಮಾಡಿದಾಗ ನಿಷೇದಿತ ಮಾದಕ ವಸ್ತು ಪತ್ತೆಯಾಗಿದೆ.

ಕಾರಿನಲ್ಲಿದ್ದ ಉಳ್ಳಾಲ ದರ್ಗಾರಸ್ತೆ ಮೇಲಂಗಡಿ ಮನೆ ನಿವಾಸಿ ಅಬ್ದುಲ್‌ ರೆಹಮಾನ್‌ ಅರ್ಪಾನ್‌ ಯಾನೇ ಜಲ್ದಿ ಅರ್ಪಾನ್‌(24), ಬೋಳೂರು ಬೊಕ್ಕಪಟ್ಣ ನಿವಾಸಿ ಅಬ್ದುಲ್‌ ಜಲೀಲ್‌ (42), ಬೋಳಿಯಾರ್‌ ಗ್ರಾಮದ ಮೊಹಮ್ಮದ್‌ ಮನ್ಸೂರ್‌ (29) ಎಂಬುವರನ್ನು ಬಂಧಿಸಿದ್ದರು.

ಬಂಧಿತರಿಂದ ಒಟ್ಟು 32 ಗ್ರಾಂ ತೂಕದ ರೂ. 1.62 ಲಕ್ಷ ರೂ. ಮೌಲ್ಯದ ಎಂಡಿಎಂಎ ಮಾದಕ ವಸ್ತು, 4 ಮೊಬೈಲ್‌ ಫೋನ್‌, ಡಿಜಿಟಲ್‌ ತೂಕ ಮಾಪನ, 22 ಸಾವಿರ ರೂ, ನಗದು ಹಾಗೂ ಸಾಗಾಟಕ್ಕೆ ಉಪಯೋಗಿಸಿದ ಮಾರುತಿ ಇಗ್ನಿàಸ್‌ ಕಾರನ್ನು ವಶಪಡಿಸಿಕೊಳ್ಳಲಾಗಿದೆ. ಇದರ ಒಟ್ಟು ಮೌಲ್ಯ 7.17 ಲಕ್ಷ  ರೂ. ಎಂದು ಅಂದಾಜಿಸಲಾಗಿದೆ.

ಆರೋಪಿಗಳು ಅಕ್ರಮವಾಗಿ ಮಾದಕ ವಸ್ತುಗಳನ್ನು ಖರೀದಿಸಿಕೊಂಡು ದೇರಳಕಟ್ಟೆ, ಮುಡಿಪು, ನೆತ್ತಿಲಪದವು, ತಲಪಾಡಿ, ಉಳ್ಳಾಲ ಹಾಗೂ ಮಂಗಳೂರು ನಗರದಲ್ಲಿ ಸಾರ್ವಜನಿಕರಿಗೆ ಮಾರಾಟ ಮಾಡುತ್ತಿದ್ದರು. ಆರೋಪಿಗಳ ವಿರುದ್ಧ ಸೆನ್‌ ಕ್ರೈಂ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Advertisement

ಹಿಂದಿನ ಪ್ರಕರಣಗಳು : 

ಆರೋಪಿಗಳ ಪೈಕಿ ಅಬ್ದುಲ್‌ ರೆಹಮಾನ್‌ ಅರ್ಪಾನ್‌ ವಿರುದ್ಧ ಈ ಹಿಂದೆ ಉಳ್ಳಾಲ ಹಾಗೂ ಮಂಗಳೂರು ದಕ್ಷಿಣ ಪೊಲೀಸ್‌ ಠಾಣೆಯಲ್ಲಿ ಒಟ್ಟು 7 ಪ್ರಕರಣಗಳು ದಾಖಲಾಗಿದೆ. ಅಬ್ದುಲ್‌ ಜಲೀಲ್‌ ಎಂಬಾತನ ವಿರುದ್ದ 1999ರಲ್ಲಿ  ವಿಟ್ಲ ಪೊಲೀಸ್‌ ಠಾಣೆಯಲ್ಲಿ ದರೋಡೆ ಪ್ರಕರಣ ದಾಖಲಾಗಿತ್ತು. ಮೊಹಮ್ಮದ್‌ ಮನ್ಸೂರ್‌ ವಿರುದ್ಧ ಕೊಣಾಜೆ ಹಾಗೂ ಮಂಗಳೂರು ದಕ್ಷಿಣ ಪೊಲೀಸ್‌ ಠಾಣೆಯಲ್ಲಿ  ಕೊಲೆ ಯತ್ನ ಪ್ರಕರಣ ದಾಖಲಾಗಿದೆ.

Advertisement

Udayavani is now on Telegram. Click here to join our channel and stay updated with the latest news.

Next