ಮಂಗಳೂರು: ಪೌರತ್ವ ತಿದ್ದುಪಡಿ ಕಾಯ್ದೆ ವಿರೋಧಿಸಿ ಎರಡು ದಿನಗಳ ಹಿಂದೆ ಪ್ರಕ್ಷುಬ್ಧವಾಗಿದ್ದ ಮಂಗಳೂರು ಸದ್ಯ ಶಾಂತವಾಗಿದೆ. ನಗರದಲ್ಲಿ ಕರ್ಫ್ಯೂ ಮುಂದುವರಿದಿದೆ.
ಶನಿವಾರ ಮುಂಜಾನೆ ಆರು ಗಂಟೆಯಿಂದ ಎಂಟು ಗಂಟೆಯವರೆಗೆ ಕರ್ಫ್ಯೂ ಸಡಿಲಿಸಲಾಗಿತ್ತು. ಜನ ಸಾಮಾನ್ಯರು ದಿನಬಳಕೆ ವಸ್ತುಗಳನ್ನು ಖರೀದಿಸಲು ಈ ಕರ್ಫ್ಯೂ ಸಡಿಲಿಸಲಾಗಿತ್ತು
ಎಂಟು ಗಂಟೆಯ ನಂತರ ಮರು ಕರ್ಫ್ಯೂ ಹೇರಲಾಗಿದೆ. ಪೊಲೀಸರು ಅಂಗಡಿ ಮುಂಗಟ್ಟುಗಳನ್ನು ಮುಚ್ಚುವಂತೆ ಸೂಚಿಸಿದರು. ಮರು ಕರ್ಫ್ಯೂ ಹೇರಿದ ಬಳಿಕವೂ ರಸ್ತೆಯಲ್ಲಿ ಜನರು ಓಡಾಡುತ್ತಿದ್ದ ಕಾರಣ ಪೊಲೀಸರು ಲಘು ಲಾಠಿ ಚಾರ್ಜ್ ನಡೆಸಿದ್ದಾರೆ ಎಂದು ವರದಿಯಾಗಿದೆ.
ಕರ್ಫ್ಯೂ ಜಾರಿಯಲ್ಲಿರುವ ನಗರದ ಭಾಗದಲ್ಲಿ ಬಸ್ ಸಂಚಾರಕ್ಕೂ ಅನುಮತಿ ನೀಡಲಾಗಿಲ್ಲ.
ಜಿಲ್ಲೆಯ ಎಲ್ಲಾ ಶಿಕ್ಷಣ ಸಂಸ್ಥೆಗಳಿಗೆ ರಜೆ ಘೋಷಿಸಲಾಗಿದೆ. ಮದ್ಯ ಮಾರಾಟವನ್ನೂ ಜಿಲ್ಲೆಯಲ್ಲಿ ನಿಷೇಧಿಸಿ ಜಿಲ್ಲಾಧಿಕಾರಿ ಸಿಂಧೂ ರೂಪೇಶ್ ಆದೇಶಿಸಿದ್ದಾರೆ.