Advertisement

ಮುನ್ನೆಚ್ಚರಿಕೆಯೊಂದಿಗೆ ಮಂಗಳೂರು ದಸರಾ : ಈ ಬಾರಿ ದಸರಾ ಮೆರವಣಿಗೆ ಇಲ್ಲ

09:48 AM Oct 05, 2020 | sudhir |

ಮಂಗಳೂರು: ಮಂಗಳೂರು ದಸರಾ ಮಹೋತ್ಸವ ವಿಶ್ವವಿಖ್ಯಾತವಾಗಿದ್ದು, ಇದನ್ನು ಕೊರೊನಾ ಕಾರಣದಿಂದ ನಿಲ್ಲಿಸುವ ಬದಲು, ಸಂಪ್ರದಾಯ ಪ್ರಕಾರವಾಗಿ ನಡೆಸಲೇಬೇಕು ಎಂಬ ಆಗ್ರಹ ಭಕ್ತರಿಂದ ವ್ಯಕ್ತವಾದ ಹಿನ್ನೆಲೆಯಲ್ಲಿ ಈ ಬಾರಿಯ ದಸರಾ ಮಹೋತ್ಸವವನ್ನು “ನಮ್ಮ ದಸರಾ-ನಮ್ಮ ಸುರಕ್ಷೆ’ ಘೋಷವಾಕ್ಯದೊಂದಿಗೆ ಆಚರಿಸಲು ಕುದ್ರೋಳಿ ಶ್ರೀ ಗೋಕರ್ಣನಾಥ ಕ್ಷೇತ್ರಾಡಳಿತ ಮಂಡಳಿ-ಸಂಘಟಕರು ನಿರ್ಧರಿಸಿದ್ದಾರೆ.

Advertisement

ಮಂಗಳೂರು ದಸರಾ ಮಹೋ ತ್ಸವ ಅಂಗವಾಗಿ ಕುದ್ರೋಳಿ ಕ್ಷೇತ್ರದ ಸಭಾಭವನದಲ್ಲಿ ರವಿವಾರ ಕ್ಷೇತ್ರದ ಆಡಳಿತ ಮಂಡಳಿ ಮತ್ತು ಸಂಘಟನೆಗಳ ಪೂರ್ವಭಾವಿ ಸಭೆ ಯಲ್ಲಿ ಮಾತನಾಡಿದ ಕ್ಷೇತ್ರದ ಅಧ್ಯಕ್ಷ ಎಚ್‌.ಎಸ್‌. ಸಾಯಿರಾಂ ಅವರು, ಕೊರೊನಾ ಹಿನ್ನೆಲೆಯಲ್ಲಿ ಮಂಗಳೂರು ದಸರಾ ಈ ಹಿಂದಿನಂತೆ ವೈಭವದಿಂದ ನಡೆಸಲು ಸಾಧ್ಯವಿಲ್ಲ. ಆದರೆ ಸರಕಾರದ ಮಾರ್ಗಸೂಚಿ ಪಾಲಿಸಿಕೊಂಡು ಉತ್ಸವ ಆಚರಣೆ ನಡೆಯಲಿದೆ ಎಂದರು.

ಇದನ್ನೂ ಓದಿ :ಕಬಡ್ಡಿ ಆಟಗಾರ ಪ್ರತಾಪ್‌ಗೆ ಸಿಗದ ಅವಕಾಶ : ಅಧಿಕಾರಿಗಳ ಜತೆ ಚರ್ಚೆ ನಡೆಸುವೆ ಎಂದ ಡಿವಿಎಸ್‌

ಕ್ಷೇತ್ರದ ಆಡಳಿತ ಮಂಡಳಿ ಸದಸ್ಯ ರವಿಶಂಕರ್‌ ಮಿಜಾರು ಮಾತನಾಡಿ, ಕೊರೊನಾ ಸಂಕಷ್ಟ ಮಧ್ಯೆಯೂ ಸಂಪ್ರದಾಯ ಪ್ರಕಾರ ದೇವರ ಸೇವೆಯನ್ನು ನಡೆಸುವುದು ಅನಿವಾರ್ಯ. ದೇವಸ್ಥಾನಕ್ಕೆ ಬರುವ ಭಕ್ತರ ಸುರಕ್ಷೆ ದೃಷ್ಟಿಯಿಂದ ಆಗಮನ-
ನಿರ್ಗಮನ ಪ್ರತ್ಯೇಕ ವ್ಯವಸ್ಥೆ ಮಾಡಲಾಗುವುದು ಎಂದರು.

ಉದ್ಯಮಿ ಶೈಲೇಂದ್ರ ಸುವರ್ಣ, ಕ್ಷೇತ್ರದ ಅಭಿವೃದ್ಧಿ ಸಮಿತಿ ಸದಸ್ಯ ರಮಾನಾಥ್‌ ಕಾರಂದೂರು, ರಾಧಾಕೃಷ್ಣ ಅಶೋಕನಗರ, ದೇವೇಂದ್ರ ಪೂಜಾರಿ, ಶೇಖರ್‌ ಪೂಜಾರಿ, ಲೀಲಾಕ್ಷ ಕರ್ಕೇರಾ ಉಪಸ್ಥಿತರಿದ್ದರು.

Advertisement

ಈ ಬಾರಿ ದಸರಾ ಮೆರವಣಿಗೆ ಇಲ್ಲ
ಕ್ಷೇತ್ರದ ಕೋಶಾಧಿಕಾರಿ ಆರ್‌. ಪದ್ಮರಾಜ್‌ ಮಾತನಾಡಿ, ಮಂಗಳೂರು ದಸರಾ ಸಂದರ್ಭ ಪೂಜೆ, ಪುನಸ್ಕಾರ, ಪ್ರಸಾದ ವಿತರಣೆ, ಮಕ್ಕಳು, ಹಿರಿಯರ ಸುರಕ್ಷೆ ಸೇರಿದಂತೆ ಪ್ರತಿಯೊಂದು ವಿಚಾರ ಗಮನದಲ್ಲಿಟ್ಟು ಕ್ಷೇತ್ರದ ಆಡಳಿತ ಮಂಡಳಿ ಕೆಲವೊಂದು ನಿರ್ಧಾರಗಳನ್ನು ತೆಗೆದು ಕೊಳ್ಳಲಿದೆ. ಕ್ಷೇತ್ರದ ಅಭಿವೃದ್ಧಿಯ ರೂವಾರಿ ಜನಾರ್ದನ ಪೂಜಾರಿ ಅವರ ಅಭಿಲಾಷೆ, ಮಾರ್ಗ
ದರ್ಶನದಂತೆ ಮಂಗಳೂರು ದಸರಾ ನಡೆಯಲಿದೆ. ಆದರೆ ಈ ಬಾರಿ ದಸರಾ ಮೆರವಣಿಗೆ ಇರುವುದಿಲ್ಲ ಎಂದರು.

Advertisement

Udayavani is now on Telegram. Click here to join our channel and stay updated with the latest news.

Next